LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಾರಿಗೆ ನೌಕರರ ಸಂಬಳ ಹೆಚ್ಚಳ ಮಾಡಿ ಸರ್ಕಾರ ಆದೇಶ

ಬೆಂಗಳೂರು,

ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಮೂಲ ವೇತನದಲ್ಲಿ ಶೇ. 12.50 ರಷ್ಟು ಹೆಚ್ಚಳ ಮಾಡುವ ಮೂಲಕ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಆ ಮೂಲಕ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, NWKRTC ಮತ್ತು KKRTC ಸಾರಿಗೆ ಸಂಸ್ಥೆಗಳ ನೌಕರರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ವೇತನ ಹೆಚ್ಚಿಸುವ ಮೂಲಕ ಗುಡ್ ನ್ಯೂಸ್ ನೀಡಿದೆ.

2025ರ ಏಪ್ರಿಲ್ 1 ರಿಂದಲೇ ಪೂರ್ವಾನ್ವಯವಾಗುವಂತೆ ಹೊಸ ವೇತನ ಪರಿಷ್ಕರಣೆ ಮಾಡಲಾಗಿದೆ. ಈ ಹೊಸ ಆದೇಶದ ಪ್ರಕಾರ, ಮಾರ್ಚ್ 31, 2025ರ ಅಂತ್ಯಕ್ಕೆ ನೌಕರರು ಪಡೆಯುತ್ತಿದ್ದ ಮೂಲ ವೇತನಕ್ಕೆ ಈ ಹೆಚ್ಚಳ ಅನ್ವಯವಾಗಲಿದ್ದು, ಪರಿಷ್ಕೃತ ವೇತನ ಶ್ರೇಣಿಯು ಮಾರ್ಚ್ 31, 2029ರವರೆಗೆ ಜಾರಿಯಲ್ಲಿರಲಿದೆ.

15 ತಿಂಗಳ ಹಿಂಬಾಕಿ ನೀಡಲು ನಿರ್ಧಾರ;

ಹೆಚ್ಚಳ ವೇತನದ ಹಣವು ಜುಲೈ 1, 2026ರಿಂದ ನೌಕರರ ಮಾಸಿಕ ಸಂಬಳದೊಂದಿಗೆ ಪಾವತಿಯಾಗಲಿದೆ. ಇನ್ನು ಏಪ್ರಿಲ್ 1, 2025 ರಿಂದ ಜೂನ್ 30, 2026 ರ ವರೆಗಿನ 15 ತಿಂಗಳ ಹಿಂಬಾಕಿಯನ್ನು ಸಂಸ್ಥೆಗಳ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಪಾವತಿಸಲು ಸರ್ಕಾರ ತೀರ್ಮಾನಿಸಿದೆ.

ಹೆಚ್ಚುವರಿ ವೆಚ್ಚ ಎಷ್ಟು?

ಈ ವೇತನ ಪರಿಷ್ಕರಣೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಸೇರಿ ನಾಲ್ಕು ಸಾರಿಗೆ ನಿಗಮಗಳಿಗೆ ಪ್ರತಿ ತಿಂಗಳು 72.80 ಕೋಟಿ ರೂ ಮತ್ತು ವಾರ್ಷಿಕ 873.64 ಕೋಟಿ ರೂ. ಹೆಚ್ಚುವರಿ ವೆಚ್ಚವಾಗಲಿದೆ. ಈ ಪರಿಷ್ಕರಣೆ ಒಟ್ಟು 1 ಲಕ್ಷದ 5 ಸಾವಿರ ಸಿಬ್ಬಂದಿಗಳಿಗೆ ಅನ್ವಯವಾಗಲಿದೆ.

ಹಿಂಬಾಕಿ ವೇತನ ಜಮೆ;

ಈಗಾಗಲೇ 2023ರ ಮಾರ್ಚ್ ವೇತನ ಪರಿಷ್ಕರಣೆಯ 26 ತಿಂಗಳ ಹಿಂಬಾಕಿ ಮೊತ್ತ 1,271.92 ಕೋಟಿ ರೂ ಇದ್ದು, ಮೊದಲ ಕಂತಿನ 450 ಕೋಟಿ ರೂ ಸರ್ಕಾರ ಬಿಡುಗಡೆ ಮಾಡಿದ್ದು, ನೌಕರರ ಖಾತೆಗಳಿಗೆ ಜಮಾ ಮಾಡಲಾಗಿದೆ.

ಕೆಎಸ್ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ನೌಕರರು ಶೇ.25ರಷ್ಟು ವೇತನ ಪರಿಷ್ಕರಣೆಗೆ ಪಟ್ಟು ಹಿಡಿದಿದ್ದರು. ರಾಜ್ಯಾದ್ಯಂತ ಮುಷ್ಕರ ಮಾಡಲಾಗಿತ್ತು. ಈ ಹಿಂದೆ ಬಿಜೆಪಿ ಸರ್ಕಾರ 2023 ಮಾರ್ಚ್​​ 15ರಂದು ಶೇ.15ರಷ್ಟು ವೇತನ ಹೆಚ್ಚಿಸಿತ್ತು. ನೌಕರರ ಬೇಡಿಕೆ ಶೇ.25 ಇದ್ದರೂ, ಸದ್ಯ ಶೇ.12.50 ಹೆಚ್ಚಳಕ್ಕೆ ರಾಜ್ಯ ಸರ್ಕಾರ ಸಮ್ಮತಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್