LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಗೃಹಲಕ್ಷ್ಮಿ  ಡಿಜಿಟಲ್ ಮಾರ್ಕೆಟಿಂಗ್ ಆಪ್: ಹೆಸರು ನೋಂದಣಿಗೆ ಆಹ್ವಾನ

ಬಳ್ಳಾರಿ,ಫೆ.12 -ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2025-26 ನೇ ಸಾಲಿಗೆ ಮಹಿಳಾ ಉದ್ದಿಮೆದಾರರನ್ನು ನೋಂದಾಯಿಸಲು ಗೃಹಲಕ್ಷ್ಮಿಯ ಡಿಜಿಟಲ್ ಮಾರ್ಕೆಟಿಂಗ್ ಆಪ್ ರೂಪಿಸಿದ್ದು, ಅರ್ಹರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ಮಹಿಳೆಯರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಆಭಿವೃದ್ಧಿಗೊಳಿಸಲು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರನ್ನು ಮಹಿಳಾ ಉದ್ಯಮಿದಾರರನ್ನಾಗಿ ಮಾಡಲು ಹಾಗೂ ಮಹಿಳೆಯರು ಉತ್ಪಾದಿಸುವ ಹಾಗೂ ತಯಾರಿಸುವ ವಿವಿಧ ವಸ್ತುಗಳಿಗೆ ಉಚಿತ ಮಾರುಕಟ್ಟೆ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಗೃಹಲಕ್ಷಿö್ಮ ಡಿಜಿಟಲ್ ವೇದಿಕೆಯ ಸೌಲಭ್ಯದಲ್ಲಿ ಕಲ್ಪಿಸಲಾಗಿದ್ದು, ಇದರ ಪೂರಕಗಾಗಿ ಗೃಹಲಕ್ಷಿö್ಮ ಡಿಜಿಟಲ್ ಮಾರ್ಕೆಟಿಂಗ್ ಆಪ್ ಅನ್ನು ಲಾಂಚ್ ಮಾಡಲಾಗಿದೆ. ಹಾಗಾಗಿ ಅರ್ಹ ಮಹಿಳಾ ಉದ್ಯಮಿಗಳು ನೋಂದಾಯಿಸಿಕೊಳ್ಳಲು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹರು: ಸ್ತ್ರೀ ಶಕ್ತಿ ಸ್ವಸಹಾಯ ಗುಂಪಿನ ಸದಸ್ಯರು, ಎನ್‌ಆರ್‌ಎಲ್‌ಎಂ ಫಲಾನುಭವಿಗಳು ಹಾಗೂ ಉದ್ಯಮಿಗಳು, ಅಕ್ಕ ಕೆಫೆ ಘಟಕಗಳನ್ನು ನಿರ್ವಹಿಸುತ್ತಿರುವ ಮಹಿಳೆಯರು, ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಂಘ-ಘಟಕಗಳ ಮಹಿಳಾ ಉದ್ಯಮಿಗಳು, ರುಡ್‌ಸೆಟ್ (ಧರ್ಮಸ್ಥಳ) ಮೂಲಕ ತರಬೇತಿ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಮಹಿಳೆಯರು ಅರ್ಹರಾಗಿರುತ್ತಾರೆ.
ನಿಗಮದಿಂದ ಹಾಗೂ ಸರ್ಕಾರದ ವಿವಿಧ ನಿಗಮ ಮಂಡಳಿ ಮತ್ತು ಇಲಾಖೆಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆದ ಮಹಿಳಾ ಫಲಾನುಭವಿಗಳು, ಜಿಲ್ಲಾ ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರೆ ಯಶಸ್ವಿ ಮಹಿಳಾ ಉದ್ದಿಮೆದಾರರು ತಾವು ತಯಾರಿಸುವ ಉತ್ಪನ್ನಗಳ ಮಾಹಿತಿಯನ್ನು ನಗರದ ಎಸ್.ಪಿ ವೃತ್ತದ ಬಳಿಯ ದೇವಿನಗರದ ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಆಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್