LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪರಿಹಾರ ಮೊತ್ತಕ್ಕೆ ಜಿಎಸ್‌ಟಿ ವಿಧಿಸುವಂತಿಲ್ಲ: ಹೈಕೋರ್ಟ್‌

ಬೆಂಗಳೂರು: ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ರೈತರು ಸೇರಿದಂತೆ ಇತರರಿಂದ ಭೂಮಿ ವಶಪಡಿಸಿಕೊಳ್ಳುವವರಿಗೆ ಪರಿಹಾರ ರೂಪದಲ್ಲಿ ನೀಡುವ ಮೊತ್ತಕ್ಕೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ವಿಧಿಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.


ವಾಣಿಜ್ಯ ತೆರಿಗೆ ಇಲಾಖೆ ನೀಡಿದ್ದ ಶೋಕಾಸ್ ನೋಟಿಸ್​​ಗಳನ್ನು ಪ್ರಶ್ನಿಸಿ ಬೆಂಗಳೂರಿನ ನಿವಾಸಿಗಳಾದ ಆರ್.ಆಶಾ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.


ಈ ಆದೇಶದಿಂದ ರೈತರು ತಾವು ಪಡೆಯುವ ಪರಿಹಾರಕ್ಕೆ ಜಿಎಸ್ಟಿ ತೆರಿಗೆ ಪಾವತಿಸುವ ಅಗತ್ಯ ವಿರುವುದಿಲ್ಲ. ಅಲ್ಲದೆ, ಇಷ್ಟವಿಲ್ಲದಿದ್ದರೂ ಭೂಮಿಯನ್ನು ಕಳೆದುಕೊಂಡಿರುವ ಮತ್ತು ಅದರ ಜತೆ ಭಾವನಾತ್ಮಕ ಸಂಬಂಧ ಹೊಂದಿರುವ ರೈತರು ಕಳೆದುಕೊಳ್ಳುವ ಭೂಮಿಗೆ ಪರ್ಯಾಯವಾಗಿ ನಷ್ಟ ತುಂಬಿಕೊಡಲು ಪರಿಹಾರ ಪಡೆಯುತ್ತಾರೆ. ಅದಕ್ಕೆ ಜಿಎಸ್​ಟಿ ಅಡಿ ತೆರಿಗೆ ವಿಧಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.


ಅರ್ಜಿದಾರರು ಮತ್ತು ಕೆಐಎಡಿಬಿಇ ನಡುವೆ ಆಗಿರುವ ಒಪ್ಪಂದದಲ್ಲಿ ಹಲವು ಷರತ್ತುಗಳು ಒಳಗೊಂಡಿರಬಹುದು. ಆದರೆ ಅದಕ್ಕೂ ಅರ್ಜಿದಾರರಿಗೆ ನೀಡುವ ಪರಿಹಾರ ಮೊತ್ತಕ್ಕೂ ಸಂಬಂಧವಿಲ್ಲ. ಅದನ್ನು ಸಿಜಿಎಸ್​ಟಿ/ಕೆಜಿಎಸ್​​ಟಿ ಶೆಡ್ಯೂಲ್-2ರಡಿ ಎಂಟ್ರಿ 5(ಇ) ಅಡಿ ಸೇವೆ ಎಂದು ಪರಿಗಣಿಸಲಾಗದು ಎಂದು ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST