ಬಳ್ಳಾರಿ: 30:ಗುರುಪೂರ್ಣಿಮೆ ಹಿನ್ನೆಲೆ ನಗರದ ರೇಡಿಯೋ ಪಾರ್ಕ್ ಗಡoಗ್ ಬೀದಿಯ ಶ್ರೀ ಶಿರಡಿ ಸಾಯಿ ಬಾಬಾ ದೇವಾಲಯದಲ್ಲಿ ಬುಧವಾರ ವಿವಿಧ ಪೂಜೆಗಳು, ವಿಜೃಂಭಣೆಯಿಂದ ನೆರವೇರಿದವು. ಬೆಳಿಗ್ಗೆ ವಿಶೇಷ ಪೂಜೆ, ಅಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ, ಸೇರಿದಂತೆ ವಿವಿಧ ಪೂಜೆಗಳು ನಡೆದವು. ನಗರ ಸೇರಿದಂತೆ ನಾನಾ ಕಡೆಯಿಂದ ಆಗಮಿಸಿದ ನೂರಾರು ಭಕ್ತರು ವಿಶೇಷ ಪೂಜೆ, ಅರ್ಚನೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ಇದಕ್ಕೂ ಮುನ್ನ ಶ್ರೀ ಶಿರಡಿ ಸಾಯಿ ಸoಸ್ಥಾನ ಸೇವಾ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಲಾವಿಧಾರದ ಕೆ.ಸುಧಾ ಹಾಗೂ ಅವರ ತಂಡದ ಸದಸ್ಯರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಗಮನಸೆಳೆಯಿತು. ಕೆಲಕಾಲ ನೆರೆದ ಸಾವಿರಾರು ಭಕ್ತರು ಭಕ್ತಿಯಿಂದ ಮಿಂದೆದ್ದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ್, ಸಾರ್ವಜನಿಕ ಮತ್ತು ಸಂಪರ್ಕ ಇಲಾಖೆ ನಿವೃತ್ತ ಅಧಿಕಾರಿ ಚೋರುನೂರು ಕೊಟ್ರಪ್ಪ, ಶ್ರೀ ಶಿರಡಿ ಸಾಯಿ ಸoಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ
ಮುರಳಿ ಕೃಷ್ಣ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಂತರ ಕಲಾವಿದೆ ಕೆ.ಸುಧಾ ಹಾಗೂ ಅವರ ತಂಡದ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇಗುಲ ಸಮಿತಿ ಪದಾಧಿಕಾರಿಗಳು, ಗಣ್ಯರು, ವಿವಿಧ ಮುಖಂಡರು, ಭಕ್ತರು ಇದ್ದರು.