LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಗುರುಪೂರ್ಣಿಮೆ ಕೃತಜ್ಞತೆ ಸಲ್ಲಿಸುವ ಪವಿತ್ರ ಹಬ್ಬ-ರಾಮಲಿಂಗಯ್ಯಶ್ರೀ

ತಾಳಿಕೋಟೆ,  ಗುರುಪೂರ್ಣಿಮೆ ಭಾರತೀಯ ಸಂಸ್ಕೃತಿಯಲ್ಲಿ ಗುರುಗಳಿಗೆ ಗೌರವ ಮತ್ತು ಕೃತಜ್ಞತೆ ಸಲ್ಲಿಸುವ ಪವಿತ್ರ ದಿನವಾಗಿದೆ. ಈ ದಿನವನ್ನು ಆಷಾಢ ಮಾಸದ ಪೂರ್ಣಿಮೆಯಂದು ಆಚರಿಸಲಾಗುತ್ತದೆ ಎಂದು ಚಬನೂರ ಸಿದ್ದಿ ಪುರುಷ ಶ್ರೀ ರಾಮಲಿಂಗೇಶ್ವರ ಮಠದ ಧರ್ಮಾಧಿಕಾರಿ ಶ್ರೀ ರಾಮಲಿಂಗಯ್ಯ ಮಹಾಸ್ವಾಮಿಗಳು ಹೇಳಿದರು.
     ಗುರುಪೂರ್ಣಿಮೆ ಅಂಗವಾಗಿ ಸಿದ್ದಿಪುರುಷ ಶ್ರೀ ರಾಮಲಿಂಗೇಶ್ವರ ಮಠದಲ್ಲಿ ಏರ್ಪಡಿಸಲಾದ ಗುರು ನಮನ ಕಾರ್ಯಕ್ರಮದಲ್ಲಿ ಇಷ್ಟಲಿಂಗ ಮಹಾಪೂಜೆ ಹಾಗೂ ಗುರುವಿನ ಪಾದಪೂಜೆ ಕಾರ್ಯಕ್ರಮದಲ್ಲಿ ಸಾನಿದ್ಯ ವಹಿಸಿ ಮಾತನಾಡುತ್ತಿದ್ದ ಅವರು ಈ ಗುರುಪೂರ್ಣಿಮೆಯು ಮಹರ್ಷಿ ವೇದವ್ಯಾಸರ ಜನ್ಮದಿನವೆಂದು ನಂಬಲಾಗುವುದರಿಂದ ಇದನ್ನು ವ್ಯಾಸ ಪೂರ್ಣಿಮೆ ಎಂದೂ ಕರೆಯುತ್ತಾರೆ. ಗುರು ಎಂದರೆ ಕೇವಲ ಶಾಲೆಯ ಶಿಕ್ಷಕರಲ್ಲ ಜೀವನದಲ್ಲಿ ಜ್ಞಾನ, ಸಂಸ್ಕಾರ, ಮೌಲ್ಯಗಳು ಮತ್ತು ಸತ್ಪಥವನ್ನು ತೋರಿಸುವ ಎಲ್ಲರೂ ಗುರುಗಳೇ. ತಾಯಿ-ತಂದೆ, ಶಿಕ್ಷಕರು, ಆಧ್ಯಾತ್ಮಿಕ ಗುರುಗಳು ಹಾಗೂ ಜೀವನದಲ್ಲಿ ಮಾರ್ಗದರ್ಶನ ನೀಡುವ ಪ್ರತಿಯೊಬ್ಬರಿಗೂ ಈ ದಿನ ಗೌರವ ಸಲ್ಲಿಸಲಾಗುತ್ತದೆ. ಗುರುಪೂರ್ಣಿಮೆಯಂದು ಶಿಷ್ಯರು ತಮ್ಮ ಗುರುಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆಯುತ್ತಾರೆ, ಹೂಮಾಲೆ ಅರ್ಪಿಸುತ್ತಾರೆ, ಸನ್ಮಾನ ಮಾಡುತ್ತಾರೆ ಹಾಗೂ ತಮ್ಮ ಜೀವನವನ್ನು ಉತ್ತಮ ಮಾರ್ಗದಲ್ಲಿ ನಡೆಸುವ ಸಂಕಲ್ಪ ಮಾಡುತ್ತಾರೆಂದರು.
        ಇದೇ ಸಮಯದಲ್ಲಿ ಶ್ರೀಮಠಕ್ಕೆ ಆಗಮಿಸಿದ ಚಬನೂರ ಗ್ರಾಮದ ಭಕ್ತವೃಂದದವರು ಶ್ರೀ ರಾಮಲಿಂಗಯ್ಯ ಮಹಾಸ್ವಾಮಿಗಳ ಪಾದ ಪೂಜೆ ನೆರವೇರಿಸಿ ಆಶಿರ್ವಾದ ಪಡೆದುಕೊಂಡರು.
      ಈ ಸಮಯದಲ್ಲಿ ಕುಂಟೋಜಿಯ ವೀರೇಶ್ ಶಾಸ್ತ್ರಿಗಳು, ಸಿದ್ದು ಶಾಸ್ತ್ರಿಗಳು, ಪ್ರದೀಪ್ ಶಾಸ್ತ್ರಿಗಳು, ಮಲ್ಲಯ್ಯ ಶಾಸ್ತ್ರಿಗಳು, ಹಾಗೂ ಸೋಮನಗೌಡ ಪಾಟೀಲ, ಮಂಜುನಾಥ ಕವಡಿಮಟ್ಟಿ, ರಾಮನಗೌಡ ನಾರಾಪಾಟೀಲ, ರಾಮನಗೌಡ ಚೌಧರಿ, ಸಂಗನಗೌಡ ಕೋಳೂರು, ಅಮಿತ್‌ಗೌಡ ಪಾಟೀಲ, ಚಬನೂರ ಗ್ರಾಮದ ಸಮಸ್ತ ಶಿಷ್ಯ ವೃಂದದವರು, ತಾಯಂದಿರರು ಉಪಸ್ಥಿತರಿದ್ದರು.
---
      "ಗುರು ಬ್ರಹ್ಮಾ ಗುರು ವಿಷ್ಣು ಗುರು ದೇವೋ ಮಹೇಶ್ವರಃ-ಗುರುಃ ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ" ಎಂಬಂತೆ ಗುರುಪೂರ್ಣಿಮೆ ಜ್ಞಾನ, ಸಂಸ್ಕಾರ, ವಿನಯ ಮತ್ತು ಕೃತಜ್ಞತೆಯ ಮಹತ್ವವನ್ನು ಸಾರುವ ಪವಿತ್ರ ಹಬ್ಬವಾಗಿದೆ. ಗುರುಗಳ ಮಾರ್ಗದರ್ಶನವೇ ಜೀವನದ ಯಶಸ್ಸಿನ ನಿಜವಾದ ದಾರಿದೀಪವಾಗಿದೆ.
                                                               ಶ್ರೀ ರಾಮಲಿಂಗಯ್ಯಶ್ರೀ
                                                            ಶ್ರೀಮಠದ ಧರ್ಮಾಧಿಕಾರಿಗಳು

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ