LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಅರಿವಿನ  ಗವಿಯಲ್ಲಿ ಹಡಪದ ಅಪ್ಪಣ್ಣ ಮೂರ್ತಿಯನ್ನು ಪುನಃ ಸ್ಥಾಪಿಸಿ : ಹೆಚ್  ಶಿಕುಮಾರ್ ಆಗ್ರಹ 



 ಬಳ್ಳಾರಿ ಏ 08. : ಬೀದರ್ ಜಿಲ್ಲೆಯ ಬಸವಕಲ್ಯಾಣದ ಅನುಭವ ಮಂಟಪದ ತ್ರಿಪುರಾಂತಕ  ಕೆರೆ ಹತ್ತಿರ ಇರುವ ಹಡಪದ ಅಪ್ಪಣ್ಣನವರ ಅರಿವಿನ ಗವಿಯಲ್ಲಿ ಶಿವಶರಣ ಹಡಪದ ಅಪ್ಪಣ್ಣ ಮೂರ್ತಿಯನ್ನು ಸ್ಥಾಪನೆ ಮಾಡಲಾಗಿತ್ತು, ಆದರೆ ಬಸವೇಶ್ವರ ದೇವಸ್ಥಾನದ ಪಂಚ ಕಮಿಟಿಯವರು ಹಸ್ತಕ್ಷೇಪ ಮಾಡಿ ಶಿವಶರಣ ಹಡಪದ ಅಪ್ಪಣ್ಣನವರ ಮೂರ್ತಿಯನ್ನು ತೆರವುಗೊಳಿಸಿ ಆ ಸ್ಥಳದಲ್ಲಿ ಅನ್ಯ ಶರಣರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿರುವುದು ಖಂಡನೀಯ ವಿಷಯ, ಈ ಪಂಚ ಕಮಿಟಿಯವರ ಈ ನಿರ್ಧಾರ ರಾಜ್ಯದ ಎಲ್ಲಾ ಹಡಪದ ಅಪ್ಪಣ್ಣ ಸಮಾಜಕ್ಕೆ  ನೋವುಂಟು ಮಾಡಿರುತ್ತದೆ, ಮೊದಲಿದ್ದಂತೆ ಅರುವಿನ ಗವಿಯಲ್ಲಿ ಪುನಃ ಯಥವತ್ತಾಗಿ ಶಿವಶರಣ ಹಡಪದ ಅಪ್ಪಣ್ಣನವರ ಮೂರ್ತಿಯನ್ನು ಸ್ಥಾಪಿಸಿ ಅಪ್ಪಣ್ಣ ಸಮಾಜದವರಿಗೆ  ನ್ಯಾಯ ಒದಗಿಸಬೇಕೆಂದು ಕರ್ನಾಟಕ ರಾಜ್ಯ ಶಿವಶರಣ  ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಹೆಚ್ ಶಶಿಕುಮಾರ್ ಆಗ್ರಹಿಸಿದರು.


 ಈ ಕುರಿತು ಅವರಿಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ರವಾನಿಸಿ ಮಾತನಾಡಿ, ಬಸವಕಲ್ಯಾಣದ  ಪಂಚ ಕಮಿಟಿಯವರ ನಿರ್ಧಾರ ಹಡಪದ ಅಪ್ಪಣ್ಣ ಸಮಾಜಕ್ಕೆ ನೋವು ತಂದಿದೆ, ಹಡಪದ ಅಪ್ಪಣ್ಣನವರು ವಿಶ್ವಗುರು ಸಾಂಸ್ಕೃತಿಕ ನಾಯಕ ಎಂದು ಹೆಸರಾದ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿದ್ದರು ಈ ಸ್ಮರಣಾರ್ಥವಾಗಿ   ಅಪ್ಪಣ್ಣನವರ ಮೂರ್ತಿಯನ್ನು ಅರಿವಿನ ಗವಿಯಲ್ಲಿ ಪ್ರತಿಷ್ಠಾಪಿಸಲಾಗಿತ್ತು ಆದರೆ ಇತ್ತೀಚಿಗೆ ಪಂಚ ಕಮಿಟಿ ಸದಸ್ಯರು ಹಡಪದ ಅಪ್ಪಣ್ಣನವರ ಮೂರ್ತಿಯನ್ನು ತೆರವುಗೊಳಿಸಿದ್ದಾರೆ, ಈ ವಿಷಯದ ಕುರಿತು ಸಂಬಂಧಿಸಿದ ಅಧಿಕಾರಿಗಳು  ತಕ್ಷಣ ಕ್ರಮ ಕೈಗೊಂಡು ಮೊದಲಿದ್ದಂತೆ ಅದೇ ಸ್ಥಳದಲ್ಲಿ ಹಡಪದ ಅಪ್ಪಣ್ಣನವರ ಮೂರ್ತಿಯನ್ನು ಪ್ರತಿಷ್ಠಾಪಿಸಿ ನಮ್ಮ ಜನಾಂಗಕ್ಕೆ ನ್ಯಾಯ ಕೊಡಿಸಬೇಕೆಂದು ಮುಖ್ಯಮಂತ್ರಿಗಳಲ್ಲಿ ವಿನಂತಿಸಿದರು.

 ಈ ವಿಷಯದ ಕುರಿತು ಈಗಾಗಲೇ ಅನೇಕ ಬಾರಿ  ಮಠಾಧೀಶರು ಸಮಾಜದ ನಾಯಕರು ಹಡಪದ ಅಪ್ಪಣ್ಣ ಪರವಾಗಿ ಹಲವಾರು ಬಾರಿ ಮನವಿ ಮಾಡಿ ಹೋರಾಟ ನಡೆಸಿದರು ಇನ್ನು ನಮಗೆ ನ್ಯಾಯ ಸಿಕ್ಕಿರುವುದಿಲ್ಲ ಕಾರಣ ಆದಷ್ಟು ಶೀಘ್ರದಲ್ಲಿ ಅರಿವಿನ ಗವಿಯಲ್ಲಿ ಹಡಪದ ಅಪ್ಪಣ್ಣನವರ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕೆಂದರು.

 ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಶ್ರೀ ಶಿವಶರಣ  ಹಡಪದ ಅಪ್ಪಣ್ಣ  ಸಮಾಜ ಸೇವಾ ಸಂಘದ  ಜಿಲ್ಲಾಧ್ಯಕ್ಷ ಎಚ್ ರುದ್ರಪ್ಪ , ಜಿಲ್ಲಾ ಸಂಚಾಲಕ ಎಚ್ ಅಮರೇಶ್, ತಾಲೂಕ ಅಧ್ಯಕ್ಷ ಎಚ್ ಶಿವರಾಜ್ ಜಿಲ್ಲಾ ಪ್ರತಿನಿಧಿ ಎಚ್ ಸದಾಶಿವ ಸೇರಿದಂತೆ ಹಲವಾರು ಜನ ಹಡಪದ ಅಪ್ಪಣ್ಣ ಸಮಾಜದ ಜನರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್