LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬೆಳಗಾವಿ ಅಭಿವೃದ್ಧಿಗೆ ಸೌಹಾರ್ದತೆ ಅಗತ್ಯ: ಸಂಸದ ಜಗದೀಶ್ ಶೆಟ್ಟರ

ಬೆಳಗಾವಿ: ಮರಾಠಿ ಭಾಷಿಕರು ಪಾಕಿಸ್ತಾನದಲ್ಲಿಲ್ಲ, ಭಾರತದಲ್ಲೇ ಇದ್ದಾರೆ. ಬೆಳಗಾವಿಯಲ್ಲಿ ಕನ್ನಡ ಮತ್ತು ಮರಾಠಿ ಭಾಷಿಕರು ಪರಸ್ಪರ ಸೌಹಾರ್ದತೆಯಿಂದ ಬದುಕುತ್ತಿದ್ದು, ನಗರದ ಅಭಿವೃದ್ಧಿಯ ಹಿತದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಿನಿಂದ ಚಿಂತನೆ ನಡೆಸಬೇಕಿದೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.
ಶನಿವಾರ ನಗರದ ಖಾಸಗಿ ಹೋಟೆಲ್ ನಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದ್ದು, ಗಡಿ ವಿವಾದದ ಕುರಿತಾಗಿ ಮಹಾಜನ್ ವರದಿ ಅಂತಿಮ ಎಂಬ ಗೊತ್ತುವಳಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿಯಲ್ಲಿ ಕನ್ನಡ ಮತ್ತು ಮರಾಠಿ ಬಾಂಧವರು ಪರಸ್ಪರ ಅಣ್ಣ-ತಮ್ಮಂದಿರಂತೆ ಬದುಕುತ್ತಿದ್ದಾರೆ. 
ಈ ಸೌಹಾರ್ದತೆಯ ವಾತಾವರಣದಿಂದಲೇ ಬೆಳಗಾವಿಯ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಚಿಂತನೆ ಮಾಡಬೇಕಿದೆ. ಬೆಳಗಾವಿ ಕರ್ನಾಟಕದ್ದು ಎಂಬ ವಿಚಾರದಲ್ಲಿ ಯಾವುದೇ ಪ್ರಶ್ನೆಯೇ ಇಲ್ಲ. ರಾಜ್ಯ ಸರ್ಕಾರದ ವಿಧಾನಮಂಡಲ ಅಧಿವೇಶನವೇ ಬೆಳಗಾವಿಯಲ್ಲಿ ನಡೆಯುತ್ತದೆ ಎಂದು ಹೇಳಿದರು.
ಮರಾಠಿ ಭಾಷಿಕರು ಭಾರತ ದೇಶದ ಪ್ರಜೆಗಳಾಗಿದ್ದು, ಅವರನ್ನು ಬೇರ್ಪಡಿಸುವ ಮನೋಭಾವ ಸಲ್ಲದು ಎಂದರು. ಮರಾಠಿ ಭಾಷಿಕರು ಭಾರತದಲ್ಲಿಯೇ ಇದ್ದಾರೆ, ಪಾಕಿಸ್ತಾನದಲ್ಲಿಲ್ಲ. ಭಾಷೆಯ ಆಧಾರದ ಮೇಲೆ ಭಿನ್ನಾಭಿಪ್ರಾಯ ಬೆಳೆಸುವ ಬದಲು ಅಭಿವೃದ್ಧಿಯತ್ತ ಗಮನ ಹರಿಸಬೇಕು ಎಂದು ಅಭಿಪ್ರಾಯಪಟ್ಟರು.
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರ ಠರಾವು ಅಂಗೀಕಾರಕ್ಕೆ ಸಂಬಂಧಿಸಿದಂತೆ ಮಹಾಪೌರರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು. ಬೆಳಗಾವಿ ಮಹಾನಗರ ಪಾಲಿಕೆಯನ್ನು ಸೂಪರ್ ಸೀಡ್ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಳಗಾವಿಯ ಸಮಗ್ರ ಅಭಿವೃದ್ಧಿ ಹಾಗೂ ಭಾಷಾ ಸೌಹಾರ್ದತೆಯೇ ನಗರದ ಪ್ರಗತಿಗೆ ಮುಖ್ಯ ಅಡಿಪಾಯವಾಗಿದ್ದು, ಎಲ್ಲ ಸಮುದಾಯದವರು ಸಹಕಾರದಿಂದ ಮುನ್ನಡೆಯಬೇಕು ಎಂದು ಕರೆ ನೀಡಿದರು.
   ಇದೆ ಸಂದರ್ಭದಲ್ಲಿ 12 ವರ್ಷ ಸುದೀರ್ಘ ಕಾಲ ಧಾಖಲೆ ದೇಶದ  ಅಭಿವೃದ್ಧಿ ಪಡಿಸಿದ ಪ್ರಧಾನಿ ನರೇಂದ್ರ ಮೋಧೀಜಿ ಅವರ ಸಾಧನೆ ಕುರಿತು ಸಾಧನೆ ಕೈಪಿಡಿ ಬಿಡುಗಡೆ ಮಾಡಲಾಯಿತು.
   ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ವಿಠ್ಠಲ್ ಹಲಗೇಕರ, ಜಿಲ್ಲಾ ಅಧ್ಯಕ್ಷ ಸುಭಾಷ ಪಾಟೀಲ,ಅರವಿಂದ ಪಾಟೀಲ, ಉಪ ಮಹಾಪೌರ ಹಣಮಂತ ಕೊಂಗಾಲಿ, ಮಹಾನಗರ ಅಧ್ಯಕ್ಷ ಗೀತಾ ಸುತಾರ, ಎಂ ಬಿ ಜಿರಲಿ,ಮಾಜಿ ಶಾಸಕ ಸಂಜಯ ಪಾಟೀಲ, ಡಾ. ರವಿ ಪಾಟೀಲ, ಮುರಗೇಂದ್ರಗೌಡ ಪಾಟೀಲ ಸೇರಿದಂತೆ ಜಿಲ್ಲಾ ಬಿಜೆಪಿ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್