LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೆಪಿಎಸ್​ಸಿ ವಿರುದ್ಧ ಕಿಡಕಾರಿದ ಹೆಚ್​ಡಿ ಕುಮಾರಸ್ವಾಮಿ

ಬೆಂಗಳೂರು, ಆಗಸ್ಟ್​ 15: ಕರ್ನಾಟಕ ಲೋಕಸೇವಾ ಆಯೋಗ ಈ ತಿಂಗಳ 27ರಂದು 2023-24ರ ಕೆಎಎಸ್​​ ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ ಮತ್ತೊಂದು ದಿನಾಂಕ ನಿಗದಿ ಮಾಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡುತ್ತಿದ್ದರೂ ಕೆಪಿಎಸ್​ಸಿ ಹಟಕ್ಕೆ ಬಿದ್ದಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ ಕೆಪಿಎಸ್​ಸಿಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಅನೇಕ ಆಕಾಂಕ್ಷಿಗಳಿಗೆ ಪರೀಕ್ಷೆ ಬರೆಯಲಿಕ್ಕೇ ಸಾಧ್ಯವಾಗುತ್ತಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ, ಅದರಲ್ಲೂ ಅಂಧ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದು ಬಹುದೊಡ್ಡ ಸಮಸ್ಯೆಯಾಗಿದೆ ಎಂದು ತಿಳಿಸಿದ್ದಾರೆ.

ಕೆಲವರು ದುಡ್ಡು ಮಾಡಿಕೊಳ್ಳುವುದಕ್ಕೆ ಈ ಪರೀಕ್ಷೆಯನ್ನು ನಡೆಸುತ್ತಿರುವಂತೆ ಕಾಣುತ್ತಿದೆ. 4-5 ವರ್ಷಗಳಿಂದ ಕಷ್ಟಪಟ್ಟು ಓದಿರುವವರಿಗೆ ಅನ್ಯಾಯ ಮಾಡುವ ದುರಾಸೆ ಒಳ್ಳೆಯದಲ್ಲ. ಕಾಂಗ್ರೆಸ್​ ಸರಕಾರ ಹಾಗೂ ಕೆಪಿಎಸ್​ಸಿ ಕೂಡಲೇ ಪರೀಕ್ಷೆಯನ್ನು ಮುಂದೂಡಬೇಕು. ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಎಲ್ಲಾ ಆಕಾಂಕ್ಷಿಗಳಿಗೂ ಅನುಕೂಲ ಆಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಲಿ ಎಂದು ಆಗ್ರಹಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್