LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

80ರ ದಶದಲ್ಲೇ ಸಿಡಿ ಕಾರ್ಖಾನೆ ತೆರೆದ ಡಿಸಿಎಂ ಬಳಿ ಭಯೋತ್ಪಾದಕರ ಗುಂಪಿದೆ: ಹೆಚ್‌ಡಿಕೆ ಆರೋಪ

ಮೈಸೂರು,22: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರ ಬಳಿ ಇರುವವರೆಲ್ಲ ಭಯೋತ್ಪಾದಕರು, ನನಗೆ ಡಿಕೆ ಶಿವಕುಮಾರ್ ಕಂಡರೆ ಅಸೂಯೆ ಎಂದು ಹೇಳಿದ್ದಾರೆ. ನಾನು ಯಾಕೆ ಅವರನ್ನು ನೋಡಿ ಅಸೂಯೆ ಪಡಲಿ? ವಿಡಿಯೋ ಮಾಡಿರುವುದು ಒಂದು ಭಾಗ, ವಿಡಿಯೋವನ್ನು ಚುನಾವಣೆಗಾಗಿ ವಿತರಿಸಿದ್ದು ಅಪರಾಧ ಅಲ್ವಾ? ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿರೋಧಿಗಳಿಗೆ ತೊಂದರೆ ಕೊಡುವುದು. ದ್ವೇಷದ ರಾಜಕಾರಣ ಮಾಡುವುದಷ್ಟೆ ಸರ್ಕಾರದ ಕೆಲಸ ಆಗಿದೆ. ಸರ್ಕಾರದ ಪ್ರಾಯೋಜಕತ್ವದಲ್ಲಿ ಮೇ 30 ರಂದು ಹಾಸನದಲ್ಲಿ ಪ್ರತಿಭಟನೆ ಆಯೋಜನೆ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತರನ್ನು ಪ್ರತಿಭಟನೆಗೆ ಕರೆ ತರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ನನಗೆ ಹೇಳಿದ್ದರೆ ನಾನೇ ಒಂದಿಷ್ಟು ಮಹಿಳೆಯರನ್ನು ಪ್ರತಿಭಟನೆಗೆ ಕಳುಹಿಸುತ್ತಿದ್ದೆ ಎಂದು ವಾಗ್ದಾಳಿ ನಡೆಸಿದರು.

ನಾನು ಸಂಸದ ಪ್ರಜ್ವಲ್ ರೇವಣ್ಣ ಪರವಾಗಿ ಇಲ್ಲ. ಆತನ ತಪ್ಪು ಸಾಬೀತಾದರೆ ಶಿಕ್ಷೆ ಕೊಡಿ. ಮುಖ್ಯಮಂತ್ರಿಗಳೇ ಅಧಿಕಾರ ಶಾಶ್ವತವಲ್ಲ. ನಿಮ್ಮ ಅಧಿಕಾರ ದುರುಪಯೋಗದ ವಿರುದ್ಧ ಕಾನೂನು ಹೋರಾಟ ಮಾಡಬೇಕಾಗುತ್ತದೆ. ದೇವರಾಜೇಗೌಡ, ಶಿವರಾಮೇಗೌಡ, ಡಿಕೆ ಶಿವಕುಮಾರ್ ಪೆನ್ ಡ್ರೈವ್ ವಿತರಣೆ ಹಿಂದೆ ಇದ್ದಾರೆ. ಅರ್ಧ ನಿಮಿಷದಲ್ಲೆ ಎಲ್ಲವೂ ತೀರ್ಮಾನವಾಗಿದೆ. ಪೊಲೀಸರ ರಕ್ಷಣೆಯಲ್ಲಿ ಎಂಟು ಜನ ಸೇರಿದಂತೆ ಕಾರ್ತಿಕ್ ಸಹ ಇದ್ದಾನೆ. ಯಾವ ಕಾರಣಕ್ಕೆ ಇನ್ನೂ ಕಾರ್ತಿಕ್ ಬಂಧನ ತೋರಿಸಿಲ್ಲ? ನ್ಯಾಯಾಲಯಕ್ಕೆ ಹಾಜರು ಪಡಿಸಿಲ್ಲ ಹೇಳಿ? ಎಂದು ಪ್ರಶ್ನಿಸಿದ್ದಾರೆ.

ಮಹಾನುಭಾವರು 1980 ರಲ್ಲೇ ಸಿಡಿ ಫ್ಯಾಕ್ಟರಿ ಓಪನ್ ಮಾಡಿದ್ದರು. ಅಧಿಕಾರ ಯಾರ ಅಪ್ಪನ ಮನೆ ಆಸ್ತಿಯೂ ಅಲ್ಲ. ರಾಜಕೀಯದಲ್ಲಿ ಏಳು ಬೀಳು ಅದು ಭಗವಂತನ ಇಚ್ಚೆ. ಇದರಲ್ಲಿ ಅಸೂಯೆ ಯಾಕೆ? ಪ್ರಧಾನಿ ಸ್ಥಾನವನ್ನೇ ಅತ್ಯಂತ ಸುಲಭವಾಗಿ ತೆರವು ಮಾಡಿದ ವಂಶ ನಮ್ಮದು. ಎಲ್ಲ ಅಧಿಕಾರವನ್ನು ನಾವು ನೋಡಿಯಾಗಿದೆ. ನಮಗೆ ಅಧಿಕಾರ ಬೇಡ ಅಂದರೂ ಬಂದಿದೆ. ನಾವು ಅಧಿಕಾರ ಹುಡುಕಿಕೊಂಡು ಹೋಗಿಲ್ಲ. ನಿಮಗೆ ಇದು ಗೊತ್ತಿರಲಿ ಎಂದರು.

ಪೆನ್ ಡ್ರೈವ್ ಮೂಲ ವ್ಯಕ್ತಿ ಕಾರ್ತಿಕ್. ಕಾರ್ತಿಕ್ ಹಾಸನದ ಕಾಂಗ್ರೆಸ್ ಅಭ್ಯರ್ಥಿ ಇಟ್ಟುಕೊಂಡು ಡಿಕೆ ಸುರೇಶ್‌ ಬಳಿಗೆ ಮೊದಲು ಹೋಗಿದ್ದನು. ನಂತರ ವಿಡಿಯೋಗಳನ್ನು ಸಿಡಿ ಶಿವಕುಮಾರ್ ಕಾಪಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ನನ್ನ ಬಳಿ ಇರುವ ಪೆನ್​ಡ್ರೈವ್ ನಿಮ್ಮ ಸರ್ಕಾರದ ವರ್ಗಾವಣೆಯ ಭ್ರಷ್ಟಾಚಾರದ್ದು. ಅದನ್ನು ನಾನು ಈಗ ಬಿಟ್ಟರೆ ಅದು ನನ್ನದೇ ಸೃಷ್ಟಿ ಅಂತ ನೀವು ಹೇಳುತ್ತೀರಿ. ಎಸ್​ಐಟಿಗೆ ಇದುವರೆಗೂ ಕೊಟ್ಟ ಯಾವ ಪ್ರಕರಣ ತಾರ್ಕಿಕ ಅಂತ್ಯ ಕಂಡಿದೆ ಹೇಳಿ? ನನ್ನ ಅವಧಿಯಲ್ಲಿ ಯಾವ ಪ್ರಕರಣವನ್ನು ಎಸ್​ಐಟಿಗೆ ಕೊಟ್ಟಿರಲಿಲ್ಲ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್