LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

"ಯಡಿಯೂರಪ್ಪನವರ ವಿರುದ್ಧ ದೂರು ಕೊಟ್ಟು ಮುಜುಗರ ಉಂಟು ಮಾಡಿದ್ದಾರೆ"

ಬೆಂಗಳೂರು: ಒಬ್ಬ ಹೆಣ್ಣು ಮಗಳು ಬೇರೆ ಬೇರೆ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ನಮ್ಮ ತಂದೆಯವರ ಮನೆಗೆ ಬಂದಿದ್ದರು. ಆದರೆ ದುರುದ್ದೇಶದಿಂದ ಆ ಮಹಿಳೆ ದೂರು ಕೊಟ್ಟು ಮುಜುಗರ ಮಾಡಿದ್ದಾರೆ. ಇದರಿಂದ ನಮ್ಮ ಇಡೀ ಕುಟುಂಬಕ್ಕೆ ಹಾಗೂ ಕಾರ್ಯಕರ್ತರಿಗೆ ಬಹಳ‌ ನೋವುಂಟಾಗಿದೆ ಎಂದು ಸಂಸದ, ಬಿಎಸ್​ವೈ ಪುತ್ರ ಬಿ.ವೈ. ರಾಘವೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.


ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ನ್ಯಾಯಾಲಯದ ಮೇಲೆ ನಮಗೆ ವಿಶ್ವಾಸ ಇದೆ. ಜಾಮೀನು ರೀತಿಯಲ್ಲಿ ನಮಗೆ ಅವಕಾಶ ಸಿಕ್ಕಿದೆ. ಬರುವಂತ ದಿನಗಲ್ಲಿ ಸತ್ಯಾಸತ್ಯತೆಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವ ಕೆಲಸವನ್ನು ವಕೀಲರು ಮಾಡ್ತಾರೆ. ಸುಳ್ಳು ಆರೋಪದ ಮೂಲಕ ನಮ್ಮನ್ನು ರಾಜಕೀಯವಾಗಿ ಮಣಿಸುವಂತ ಪ್ರಕರಣಗಳು ನಮ್ಮ ಮೇಲೆ ಬಹಳಷ್ಟು ನಡೆದಿವೆ. ಆಗ ನಮಗೆ ನ್ಯಾಯಾಲಯದಿಂದ ನ್ಯಾಯ ಸಿಕ್ಕಿದೆ. ಈಗಲೂ ಸಹ ವಿಶ್ವಾಸ ಇದೆ, ಈ ಸುಳ್ಳು ಆರೋಪದಿಂದ ನಮ್ಮ ತಂದೆಯವರು ಮುಕ್ತರಾಗುತ್ತಾರೆ ಎಂದು ಹೇಳಿದರು.


ಯಡಿಯೂರಪ್ಪನವರು ಜೀವನ ಪೂರ್ತಿ ಹೋರಾಟದ ಮೂಲಕ ಈ ನಾಡಿಗೆ ನ್ಯಾಯ ಕೊಟ್ಟವರು. ದಕ್ಷಿಣ ಭಾರತದಲ್ಲಿ ಬಿಜೆಪಿ ಭದ್ರಕೋಟೆಯಾಗಿ ಕರ್ನಾಟಕ ಇದೆ. ಹೀಗಾಗಿ ಇವರ ವಿರುದ್ಧ ಕಾಣದ ಕೈಗಳು ಈ ರೀತಿ ಮಾಡಿದ್ದಾರೆ. ನ್ಯಾಯಾಲಯ ನಮಗೆ ರಕ್ಷಣೆ ಕೊಟ್ಟಿದೆ. ಮುಂದೆ ನ್ಯಾಯಾಲಯಕ್ಕೂ‌ ನಾವು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡುತ್ತೇವೆ. ಯಡಿಯೂರಪ್ಪ ಕೂಡ ಇಂದು ಮನೆಗೆ ಬರುತ್ತಿದ್ದಾರೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ