LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸ್ವಾಸ್ಥ್ಯ ಸಂಕಲ್ಪ ಯೋಜನೆ ಕಾರ್ಯಕ್ರಮ


ಯರಗಟ್ಟಿ,ಜು,೨೫ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರೂಪಿಸಿರುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಇದರ ಯಶಸ್ವಿ ಅನುಷ್ಟಾನಕ್ಕೆ ವ್ಯಾಪಕ ಪ್ರಚಾರ ಮತ್ತು ಅನುಸರಣಾ ಕಾರ್ಯ ರೂಢಿಸಲಾಗುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯರಗಟ್ಟಿ ತಾಲೂಕಿನ ಕೃಷಿ ಅಧಿಕಾರಿ ಬಸವರಾಜ ಶಿಗ್ಗಾಂವಿ ತಿಳಿಸಿದರು.
ಸಮೀಪದ ತಲ್ಲೂರು ಗ್ರಾಮದ ಬಸವೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾದ ಸ್ವಾಸ್ಥ್ಯ ಸಂಕಲ್ಪ ಯೋಜನೆಯನ್ನು ಯರಗಟ್ಟಿ ಬಾಲಕಿಯರ ವಸತಿ ನಿಲಯ ಪಾಲಕರಾದ ಹಾಗೂ ಸಂಪನ್ಮೂಲ ವ್ಯಕ್ತಿಯಾದ ಆಶಾ ಪರೀಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕುಟುಂಬದ ಕಣ್ಮಣಿಗಳಾಗಿದ್ದು ಪೋಷಕರ ಅಭಿಲಾಷೆಯಂತೆ ಅವರು ವಿದ್ಯಾಭ್ಯಾಸದಲ್ಲಿ ತೊಡಗಿ ಪ್ರಗತಿ ಸಾಧಿಸಬೇಕು. ವಿದ್ಯಾರ್ಥಿಗಳು ತಮ್ಮ ಆರೋಗ್ಯ ಪಾಲನೆಗೆ ಹಲವು ಮೂಲ ತಿಳುವಳಿಕೆಗಳನ್ನು ಗಳಿಸುವ ಅಗತ್ಯವಿದೆ ಎಂದರು.
ಇಂದಿನ ದಿನಮಾನದಲ್ಲಿ ಮದ್ಯವ್ಯಸನ, ಗುಟ್ಕಾ, ಧೂಮಪಾನಗಳಿಂದ ಯುವ ಜನತೆಯ ಜೀವನ ಹಾಳಾಗುತ್ತಿದೆ. ಸಹವಾಸ ದೋಷ, ಆಕಸ್ಮಿಕ ಆಕರ್ಷಣೆಗಳ ಕಾರಣ ದುಶ್ಚಟ ಒಮ್ಮೆ ಆರಂಭವಾದರೆ ಬದುಕು ವಿನಾಶದ ಹಾದಿಯಲ್ಲಿ ಸಾಗುತ್ತದೆ  ಇದರಿಂದ ವೈಯಕ್ತಿಕ ಜೀವನದ ಜೊತೆ ಜೊತೆಗೆ ಸಮಾಜದ ಸ್ವಾಸ್ಥ್ಯ ಸಹ ಹಾಳಾಗುತ್ತದೆ ಎಂದು ವಿವರಿಸಿದರು. ವಿದ್ಯಾರ್ಥಿ ಜೀವನದ ದೆಸೆಯಿಂದಲೇ ಉತ್ತಮ ಕ್ರಿಯಾಶೀಲ ಹವ್ಯಾಸಗಳನ್ನು ರೂಢಿಸಿಕೊಂಡು ಉತ್ತಮ ಸಮಾಜ ಕಟ್ಟುವ ಕಾರ್ಯಕ್ರಮಕ್ಕೆ ದೃಢ ಸಂಕಲ್ಪ ಕೈಗೊಳ್ಳಬೇಕು ಎಂದರು. 
ಮುಖ್ಯ ಶಿಕ್ಷಕ ಎಂ. ಎಚ್. ದುಂಡನಕೊಪ್ಪ, ಎ. ಜೆ. ಕಾಂಬಳೆ, ಎಸ್. ಎಫ್. ಬಡಿಗೇರ, ಜೆ. ಎ. ಕೊಟ್ರಶೆಟ್ಟಿ, ಎಲ್. ವ್ಹಿ. ಪಾಟೀಲ, ಬಿ. ಸಿ. ಸೂಣದೊಳ್ಳಿ, ಎ. ಎಚ್. ಕುದರಿ, ಸೇವಾನಿರತ  ಹಾಗೂ ಪ್ರಗತಿ ಬಂಧು ತಂಡದ ಸದಸ್ಯರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್