LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂಕುಸಿತ : ವಾಹನ ಸಂಚಾರಕ್ಕೆ ಅಡ್ಡಿ

ಚಮೋಲಿ ಜುಲೈ 10: ಉತ್ತರಾಖಂಡದ  ಚಮೋಲಿಯಲ್ಲಿ ಇಂದು(ಬುಧವಾರ) ಭಾರೀ ಭೂಕುಸಿತ  ಸಂಭವಿಸಿದ್ದು, ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ  ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಜೋಶಿಮಠದ ಚುಂಗಿ ಧಾರ್‌ನಲ್ಲಿ ಬೆಟ್ಟದ ಬೃಹತ್ ಭಾಗವು ಕುಸಿದು ರಸ್ತೆಯ ಮೇಲೆ ಬೀಳುತ್ತಿರುವುದು, ದೊಡ್ಡ ಬಂಡೆಗಳು ಉರುಳಿ ಬೀಳುತ್ತಿರುವುದನ್ನು 30 ಸೆಕೆಂಡುಗಳ ವಿಡಿಯೊ ತೋರಿಸುತ್ತದೆ. ಜನರು ಭಯಭೀತರಾಗಿ ಸುರಕ್ಷಿತ ಜಾಗಕ್ಕೆ ಓಡುತ್ತಿರುವುದನ್ನು ವಿಡಿಯೊ ತೋರಿಸುತ್ತದೆ. ಅವರಲ್ಲಿ ಹಲವರು ತಮ್ಮ ಫೋನ್‌ಗಳಲ್ಲಿ ಈ ದೃಶ್ಯವನ್ನು ಸೆರೆಹಿಡಿಯುತ್ತಿರುವುದು ಕಂಡುಬಂದಿದೆ.

ಭೂಕುಸಿತದಿಂದ ರಸ್ತೆಯ ಇಕ್ಕೆಲಗಳಲ್ಲಿ ನೂರಾರು ಜನರು ಹಾಗೂ ವಾಹನಗಳು ಸಿಲುಕಿಕೊಂಡಿವೆ. ಬದರಿನಾಥ್ ಹೆದ್ದಾರಿಯಲ್ಲಿ ಸಂಚಾರ ನಿರ್ಬಂಧಿಸಿದ್ದು ಭೂಕುಸಿತ ಸಂಭವಿಸಿದಾಗ ಅಧಿಕಾರಿಗಳು ಅವಶೇಷಗಳನ್ನು ತೆರವುಗೊಳಿಸುತ್ತಿದ್ದರು. ಕೂಡಲೇ ಪೊಲೀಸರು ಮತ್ತು ಆಡಳಿತಾಧಿಕಾರಿಗಳನ್ನು ಕರೆಸಿ ಅವಶೇಷಗಳನ್ನು ತೆರವುಗೊಳಿಸಲಾಗಿದ್ದು, ತಡರಾತ್ರಿ ವೇಳೆಗೆ ರಸ್ತೆ ತೆರೆಯುವ ಸಾಧ್ಯತೆ ಇದೆ.

ಕಳೆದ ಕೆಲವು ದಿನಗಳಿಂದ ಉತ್ತರಾಖಂಡದ ಕೆಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಬೆಟ್ಟಗಳಲ್ಲಿ ಭೂಕುಸಿತಗಳು ಉಂಟಾಗಿದ್ದು, ಬದರಿನಾಥಕ್ಕೆ ಹೋಗುವ ಹೆದ್ದಾರಿಯು ಕಲ್ಲುಮಣ್ಣುಗಳಿಂದ ಮುಚ್ಚಿದ್ದು ಹಲವಾರು ಸ್ಥಳಗಳಲ್ಲಿ ಸಂಚಾರ ನಿರ್ಬಂಧಿಸಲ್ಪಟ್ಟಿದೆ. ನಿರಂತರ ಮಳೆಯಿಂದಾಗಿ ಹೆಚ್ಚಿನ ಸಂಖ್ಯೆಯ ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಅದೇ ವೇಳೆ ಚಂಪಾವತ್ ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳ ಹಲವಾರು ಗ್ರಾಮಗಳು ಭಾರೀ ಪ್ರಮಾಣದಲ್ಲಿ ಜಲಾವೃತವಾಗಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್