LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಐದು ದಿನಗಳ ಕಾಲ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಧಿಕ ಮಳೆ

ಬೆಂಗಳೂರ: ಮುಂದಿನ ಐದು ದಿನಗಳ ಕಾಲ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇನ್ನುಳಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ. ಪಣಂಬೂರು, ಭಾಲ್ಕಿ, ಮಂಗಳೂರು ವಿಮಾನ ನಿಲ್ದಾಣ, ಕೊಟ್ಟಿಗೆಹಾರ, ಉಡುಪಿ, ಸುಳ್ಯ, ಬಾದಾಮಿ, ದೇವರಹಿಪ್ಪರಗಿ, ಧರ್ಮಸ್ಥಳ, ಮಂಕಿ, ಪುತ್ತೂರು, ಅಂಕೋಲಾ, ರೋಣ, ಭಾಗಮಂಡಲ, ಆಗುಂಬೆ, ಕಾರವಾರ, ಮುಲ್ಕಿ, ಕುಂದಾಪುರ, ಬೆಳ್ತಂಗಡಿ, ಹೊನ್ನಾವರ, ಕಾರ್ಕಳ, ಉಪ್ಪಿನಂಗಡಿ, ನರಗುಂದ, ಶಾಹಪುರ, ಕುಷ್ಟಗಿ, ಲಿಂಗನಮಕ್ಕಿ, ಪೊನ್ನಂಪೇಟೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ