LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇಂದು ಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು, ಮೇ 13: ಎರಡು ವಾರಗಳಿಂದ ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿಗೆ ಮಳೆರಾಯನ ಆಗಮನವಾಗಿದೆ. ಸೋಮವಾರ ರಾತ್ರಿ ಒಂದು ಗಂಟೆಗಳ ಕಾಲ ಅಲ್ಲಲ್ಲಿ ಮಳೆಸುರಿದಿದೆ. ಇಂದು ಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.





ಎಚ್​ಎಎಲ್​ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST