LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಮಳೆಗೆ ರಸ್ತೆಗಳು, ಚರಂಡಿಗಳು ಜಲಾವೃತ; ಅಲ್ಲಲ್ಲಿ ಮನೆಗಳಿಗೆ ನುಗ್ಗಿದ ನೀರು

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಅನೇಕ ರಸ್ತೆಗಳು ಜಲಾವೃತಗೊಂಡಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವೆಡೆ ಶನಿವಾರ ಬೆಳಗ್ಗೆಯೂ ಕೂಡ ವರ್ಷಧಾರೆಯಾಗಿದ್ದು, ಮತ್ತೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ದೆಹಲಿಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ರೆಡ್​ ಆಲರ್ಟ್​ ನೀಡಿತ್ತು. ಉತ್ತರ, ಪಶ್ಚಿಮ, ದಕ್ಷಿಣ, ಆಗ್ನೇಯ ಮತ್ತು ಮಧ್ಯ ದೆಹಲಿಯ ಕೆಲವು ಭಾಗಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಲಾಗಿತ್ತು. ಆದರೆ ಬಳಿಕ ರೆಡ್ ಅಲರ್ಟ್ ಬದಲಿಗೆ ಯೆಲ್ಲೋ ಆಲರ್ಟ್​ ಘೋಷಣೆ ಮಾಡಲಾಗಿದೆ. ಎಚ್ಚರದಿಂದ ಇರುವಂತೆ ಜನರಿಗೆ ತಿಳಿಸಲಾಗಿದೆ.


ಶನಿವಾರ ಬೆಳಗ್ಗೆ 8.30ರ ವರೆಗೆ ಕಳೆದ 24 ಗಂಟೆಗಳ ಅವಧಿಯಲ್ಲಿ, ದೆಹಲಿಯ ಸಫ್ದರ್ಜಂಗ್‌ನಲ್ಲಿರುವ ಪ್ರಾಥಮಿಕ ಹವಾಮಾನ ಕೇಂದ್ರದಲ್ಲಿ 78.7 ಮಿ.ಮೀ., ಪ್ರಗತಿ ಮೈದಾನದಲ್ಲಿ 100 ಮಿ.ಮೀ., ಲೋಧಿ ರಸ್ತೆ 80 ಮಿ.ಮೀ., ಪುಸಾ 69 ಮಿ.ಮೀ. ಮತ್ತು ಪಾಲಂನಲ್ಲಿ 31.8 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ.


ಶುಕ್ರವಾರ ರಾತ್ರಿ 11ರಿಂದ ಪಂಚಕುಯಿಯಾನ್ ಮಾರ್ಗ, ಮಥುರಾ ರಸ್ತೆ, ಶಾಸ್ತ್ರಿ ಭವನ, ಆರ್‌ಕೆ ಪುರಂ, ಮೋತಿ ಬಾಗ್, ಕಿದ್ವಾಯಿ ನಗರ ಮತ್ತು ಇತರ ಹಲವಾರು ಪ್ರದೇಶಗಳು ಸೇರಿದಂತೆ ದೆಹಲಿ-ಎನ್‌ಸಿಆರ್‌ನ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್