LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಎಚ್ಎಂಟಿ ಅರಣ್ಯ ಭೂಮಿ ವಿವಾದ ಪ್ರಕರಣ: ಅಧಿಕಾರಿಗಳಿಗೆ ಶೋಕಾಸ್ ನೋಟಿಸ್

ಬೆಂಗಳೂರು, ನವೆಂಬರ್ 12: ಎಚ್ಎಂಟಿ ಅರಣ್ಯ ಭೂಮಿ ವಿವಾದ ಪ್ರಕರಣ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ, ಹಾಲಿ ಐಎಫ್ಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಸಂದೀಪ್ ದವೆ, ವಿಜಯಕುಮಾರ್ ಗೋಗಿ, ಸ್ಮಿತಾ ಬಿಜ್ಜೂರ್, ಆರ್ ಗೋಕುಲ್​ಗೆ ಕಾರಣ ಕೇಳಿ ಅರಣ್ಯ ಇಲಾಖೆ ನೋಟಿಸ್ ಜಾರಿ ಮಾಡಿದೆ.





ಐಎಎಸ್ ಅಧಿಕಾರಿಗಳು ಹಾಗೂ ಐಎಫ್ಎಸ್ ಅಧಿಕಾರಿಗಳು ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರ ಜಮೀನು ಅರಣ್ಯದ ಸ್ವರೂಪ ಕಳೆದುಕೊಂಡಿದೆ ಎಂದು ಡಿನೋಟಿಫಿಕೇಷನ್​ಗೆ ಕೋರಿದ್ದರು. ಅರಣ್ಯದ ಸ್ವರೂಪ ಕಳೆದುಕೊಂಡಿದೆ ಎಂಬ ಬಗ್ಗೆ ಕೇವಲ ಅಧಿಕಾರಿಗಳ ಮಟ್ಟದಲ್ಲೇ ನಿರ್ಧಾರ ಕೈಗೊಳ್ಳಲಾಗಿತ್ತು. ಸುಪ್ರೀಂಕೋರ್ಟ್​ಗೆ ಮೇಲಿನ ಐಎಫ್ಎಸ್ ಅಧಿಕಾರಿಗಳು ಐಎ ಸಲ್ಲಿಸಿದ್ದರು. ಅರ್ಜಿ ಸಲ್ಲಿಸುವ ಪೂರ್ವದಲ್ಲಿ ಅಂದಿನ ಅರಣ್ಯ ಸಚಿವರ ಅಥವಾ ಸಚಿವ ಸಂಪುಟದ ಪೂರ್ವಾನುಮತಿಯನ್ನೂ ಪಡೆದಿರಲಿಲ್ಲ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST