LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸೆನ್ ಠಾಣೆಗಳಿಗೆ ಎಸ್.ಪಿ. ರ್ಯಾಂಕನ ಅಧಿಕಾರಿಗಳನ್ನು ನೇಮಿಸಲಾಗುವುದು: ಗೃಹ ಸಚಿವ ಜಿ. ಪರಮೇಶ್ವರ

ಧಾರವಾಡ : ಹೆಚ್ಚುತ್ತಿರುವ ಸೈಬರ್ ಅಪರಾಧಗಳ ತಡೆಗಟ್ಟಲು ಈಗಾಗಲೇ ಅಸ್ತಿತ್ವದಲ್ಲಿರುವ ಸೆನ್ ಠಾಣೆ (ಅಇಓ, ಸೈಬರ್ ಆರ್ಥಿಕ ಹಾಗೂ ನಾರ್ಕೊಟಿಕ್ಸ) ಠಾಣೆಗಳಿಗೆ ಎಸ್.ಪಿ. ರ್ಯಾಂಕನ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ಗೃಹ ಸಚಿವರಾದ ಜಿ. ಪರಮೇಶ್ವರ ಅವರು ಇಂದು ತಿಳಿಸಿದರು.

ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳು ಎಲ್ಲೆಡೆ ಯಾವುದೇ ಅಡೆತಡೆಗಳಿಲ್ಲದೇ ರಾಜ್ಯ, ದೇಶ, ವಿದೇಶದಾದ್ಯಂತ ನಡೆಯುತ್ತಿವೆ. ಈ ಹಿನ್ನಲೆಯಲ್ಲಿ ಆಧುನಿಕ ಅಪರಾಧ ತನಿಖೆಗಳಿಗೆ ತಕ್ಕಂತೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು ಯಾವುದೇ ಸೈಬರ್ ಅಪರಾಧವಾದರೆ ಹೊಸ ಕಾನೂನುಗಳನ್ವಯ ತನಿಖೆ ನಡೆಸಬೇಕಾಗುತ್ತದೆ ಎಂದರು.

ಪ್ರತಿ ಜಿಲ್ಲೆಗೊಂದರಂತೆ ರಾಜ್ಯದಲ್ಲಿ ಒಟ್ಟು 43 ಸೆನ್ ಪೊಲೀಸ್ ಠಾಣೆಗಳಿದ್ದು, ಸದ್ಯ ಡಿವೈಎಸ್ಪಿ ಅಧಿಕಾರಿಗಳು ಇರುತ್ತಾರೆ. ಮುಂದಿನ ದಿನಗಳಲ್ಲಿ ಎಸ್.ಪಿ ರ್ಯಾಂಕ್ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ತಿಳಿಸಿದರು. ಸೆನ್ ಠಾಣೆಯ ಸಿಬ್ಬಂದಿಗಳಿಗೆ ಹಾಗೂ ಅಧಿಕಾರಿಗಳಿಗೆ ವಿಶೇಷ ರೀತಿಯ ತರಬೇತಿಗಳನ್ನು ರೂಪಿಸಲಾಗುವುದು. ಈ ಹಿನ್ನಲೆಯಲ್ಲಿ ವಿಧಿ ವಿಜ್ಞಾನ ಸಂಸ್ಥೆಯು ರಾಜ್ಯದ ಪೊಲೀಸ್ ಇಲಾಖೆಗೆ ಹೆಚ್ಚು ಉಪಯೋಗವಾಗಲಿದೆ ಎಂದರು.

ದಿನೇ ದಿನೇ ಅಪರಾಧಗಳ ರೂಪರೇಷೆ ಬದಲಾಗುತ್ತಿದೆ. ತನಿಖೆಯ ಮಾರ್ಗಗಳು ಸಹ ಬದಲಾಗುತ್ತಿವೆ. ಆಧುನಿಕ ತಂತ್ರಜ್ಞಾನದ ಹಿನ್ನಲೆಯಲ್ಲಿ ಗುಪ್ತಚರ ವಿಭಾಗದಲ್ಲಿ ಪ್ರತ್ಯೇಕ ತರಬೇತಿ ನೀಡಿದಂತೆ ಸೆನ್ ಠಾಣೆ ಸಿಬ್ಬಂದಿಗಳಿಗೆ ಪ್ರತ್ಯೇಕ ತರಬೇತಿ ನೀಡಲಾಗುವುದೆಂದು ಸಚಿವರು ತಿಳಿಸಿದರು.

ಸೈಬರ್ ಕ್ರೈಂಗಳಿಗೆ ಯಾವುದೇ ಅಡೆತಡೆ ಇಲ್ಲದೇ ವಿಶ್ವವ್ಯಾಪಿಯಾಗಿವೆ. ಗುಜರಾತನಲ್ಲಿ ಸೈಬರ್ ವಿಶ್ವ ವಿದ್ಯಾಲಯ ನಿರ್ಮಿಸಲಾಗಿದ್ದು ವಿವಿಧ ದೇಶಗಳಿಂದ ಬಂದು ತರಬೇತಿ ಪಡೆಯುತ್ತಿದ್ದಾರೆ. ಇದರ ಭಾಗವಾಗಿ ಧಾರವಾಡದಲ್ಲಿ ವಿಧಿ ವಿಜ್ಞಾನ ಸಂಸ್ಥೆ ಸ್ಥಾಪಿಸಲಾಗಿದ್ದು ರಾಜ್ಯದ ಪೊಲೀಸ್ ಇಲಾಖೆಗೆ ಆಧುನಿಕ ವಿಧಿ ವಿಜ್ಞಾನವು ಅತೀ ಹೆಚ್ಚು ಮಹತ್ವ ಪಡೆದುಕೊಳ್ಳಲಿದೆಯೆಂದರು.

ಡ್ರಗ್ಸ ವಿರುದ್ಧ ಸಮರ: ರಾಜ್ಯ ಸರಕಾರವು ಡ್ರಗ್ಸ ವಿರುದ್ಧ ಸಮರ ಸಾರಿದ್ದು ಸ್ವತಃ ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಈ ಬಗ್ಗೆ ವಿಶೇಷ ಕಾರ್ಯಪಡೆ ರಚಿಸಿದ್ದಾರೆ. ಕಳೆದೊಂದು ವರ್ಷದಲ್ಲಿ 150 ಕೋಟಿ ರೂ. ಡ್ರಗ್ಸ ಬರುತ್ತಿದ್ದು ಸಾಕಷ್ಟು ಎಚ್ಚರದ ಕ್ರಮಗಳನ್ನು ವಹಿಸಲಾಗುತ್ತಿದೆ. ಈಗಾಗಲೇ ಹೈಡ್ರೊ ಗಾಂಜಾ ಎಲ್ಲೆಂದರಲ್ಲಿ ನಾಲ್ಕು ಕೋಣೆಗಳಲ್ಲಿ ಬೆಳೆಯಲಾಗುತ್ತಿದ್ದು ಇದನ್ನು ಕಂಡು ಹಿಡಿಯುವುದು ಸವಾಲಾಗಿದೆಯೆಂದರು. ಸಾಕಷ್ಟು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ 10 ಸಾವಿರ ವಿದೇಶಿಗರು ವಾಸಿಸುತ್ತಿದ್ದು ಆಫ್ರಿಕಾ ಪ್ರಜೆಗಳ ಮೇಲೆ ಹೆಚ್ಚು ನಿಗಾ ಇಡಲಾಗಿದೆ. ಕಳೆದೊಂದು ವರ್ಷದಲ್ಲಿ ಡ್ರಗ್ಸ ಧಂದೆಯಲ್ಲಿ ತೊಡಗಿದ ನೂರಾರು ವಿದ್ಯಾರ್ಥಿಗಳನ್ನು ಅವರವರ ದೇಶಕ್ಕೆ ವಾಪಸ್ ಕಳಸಲಾಗಿದೆಂದು ತಿಳಿಸಿದರು.

ಪ್ರಯೋಗಾಲಯ ಹಾಗೂ ಪ್ರಾತ್ಯಕ್ಷಿಕೆಗಳನ್ನು ಸಚಿವರು ವೀಕ್ಷಿಸಿದರು. ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರಡ್ಡಿ, ಬೆಳಗಾವಿ ವಿಭಾಗದ ಐಜಿಪಿ ವಿಕಾಸಕುಮಾರ, ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್