LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮಾನವ-ಆನೆ ಸಂಘರ್ಷವು ಒಂದು ಸಂಕೀರ್ಣ ಸಮಸ್ಯೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: "ಮಾನವ-ಆನೆ ಸಂಘರ್ಷ ಕೇವಲ ಕರ್ನಾಟಕ ಅಥವಾ ಭಾರತದ ಯಾವುದೋ ಒಂದು ರಾಜ್ಯದ ಸಮಸ್ಯೆಯಲ್ಲ. ಬದಲಾಗಿ ಜಾಗತಿಕ ಸಮಸ್ಯೆಯಾಗಿದೆ. ಮಾನವ-ಆನೆ ಸಂಘರ್ಷವು ಪರಿಸರ, ಸಾಮಾಜಿಕ ಮತ್ತು ಆರ್ಥಿಕ ಅಂಶಗಳನ್ನು ಒಳಗೊಂಡ ಒಂದು ಸಂಕೀರ್ಣ ಸಮಸ್ಯೆಯಾಗಿದೆ" ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.


ಅರಣ್ಯ ಇಲಾಖೆಯು ಗಾಂಧಿ ಕೃಷಿ ವಿಜ್ಞಾನ ಕೇಂದ್ರ(ಜಿಕೆವಿಕೆ)ದಲ್ಲಿ ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸಿರುವುದು ಸಂತಸದ ವಿಷಯವಾಗಿದೆ. ಈ ಸಮ್ಮೇಳನದ ವಿಷಯವೇ ಒಂದು ಮಹತ್ವದ ಸವಾಲನ್ನು ಪ್ರಚುರಪಡಿಸುತ್ತದೆ" ಎಂದು ಅಭಿಪ್ರಾಯಪಟ್ಟರು.


"ಅಮೂಲ್ಯವಾದ ಜೀವ ಹಾನಿ, ಬೆಳೆ ಹಾನಿಗೆ ಕಾರಣವಾಗುತ್ತಿರುವ ಈ ಸಮಸ್ಯೆಗೆ ಸುಸ್ಥಿರ ಪರಿಹಾರಗಳನ್ನು ಕಂಡುಕೊಳ್ಳಲು ನಮ್ಮ ಸಂಘಟಿತ ಮತ್ತು ಸಹಯೋಗದ ಪ್ರಯತ್ನಗಳು ಅಗತ್ಯ ಮತ್ತು ಅನಿವಾರ್ಯ ಎಂದು ನಾನು ಭಾವಿಸುತ್ತೇನೆ. ಕರ್ನಾಟಕ ರಾಜ್ಯ ವೈವಿಧ್ಯಮಯ ಜೀವವೈವಿಧ್ಯ, ಸಸ್ಯ ಸಂಪತ್ತು, ಪ್ರಾಣಿ ಸಂಪತ್ತಿನಿಂದ ಕೂಡಿದೆ. ವಿಶಾಲವಾದ ದಟ್ಟ ಅಡವಿಗಳು, ಪ್ರಾಣಿ ಸಂಕುಲ, ಸಸ್ಯ ಸಂಕುಲ, ಕೀಟ ಸಂಕುಲ ಮತ್ತು ಪಕ್ಷಿ ಸಂಕುಲಕ್ಕೆ ನೆಲೆಯಾಗಿದೆ. ಕರ್ನಾಟಕದಲ್ಲಿ ಸುಮಾರು 43,382 ಚದರ ಕಿಲೋ ಮೀಟರ್ ಅರಣ್ಯ ಪ್ರದೇಶವಿದೆ. ಅಂದರೆ ನಮ್ಮ ಭೌಗೋಳಿಕ ಭೂಭಾಗದ ಶೇ.22ರಷ್ಟು ಹಸಿರು ಹೊದಿಕೆ ಇದೆ" ಎಂದು ಮಾಹಿತಿ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್