LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಇಬ್ಬನಿ ತಬ್ಬಿದ ಇಳೆಯಲಿ  ರೆಟ್ರೋ ಸ್ಟೈಲ್ ನ ಹಾಡು



     ವಿಹಾನ್, ಅಂಕಿತಾ ಅಮರ್ ಪ್ರಮುಖ ಭೂಮಿಕೆಯಲ್ಲಿರುವ 'ಇಬ್ಬನಿ ತಬ್ಬಿದ ಇಳೆಯಲಿ' ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ.

     ಚಂದ್ರಜಿತ್ ಬೆಳಿಯಪ್ಪ ನಿರ್ದೇಶನವಿರುವ ಈ ಸಿನಿಮಾದ ‘ಹೇಳು ಗೆಳತಿ’ ಎಂಬ ಮೆಲೋಡಿ ಹಾಡನ್ನು  ಇತ್ತೀಚೆಗಷ್ಟೇ ಬಿಡುಗಡೆ ಮಾಡಿದೆ ಚಿತ್ರತಂಡ. ಈ ಹಿಂದೆ ಹರಿಬಿಟ್ಟಿದ್ದ ಹಾಡುಗಳಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ‘ಹೇಳು ಗೆಳತಿ’ ಹಾಡಿಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂಬುದು ತಂಡದ ಅನಿಸಿಕೆ.

     ರೆಟ್ರೋ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಈ ಮಾಧುರ್ಯಭರಿತ ಗೀತೆಯನ್ನು ಪರವಃ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಮಾಡಿದೆ. ಚರಣ್‌ರಾಜ್ ಈ ಗೀತೆಗೆ ದನಿಗೂಡಿಸಿರುವುದು ವಿಶೇಷ.

      ನಾಗಾರ್ಜುನ ಶರ್ಮಾ ಸಾಹಿತ್ಯವಿರುವ ಈ ಹಾಡಿಗೆ ಗಗನ್ ಬಡೇರಿಯಾ ಸಂಗೀತ ಸಂಯೋಜಿಸಿದ್ದಾರೆ. ಟ್ರೆಂಡ್ ಹುಟ್ಟು ಹಾಕಿರುವ ಈ ಗೀತೆಗೆ ದೀಕ್ಷಿತ್ ಕುಮಾರ್ ನೃತ್ಯ ನಿರ್ದೇಶನವಿದೆ.

      ಕಿರಿಕ್ ಪಾರ್ಟಿ ಹಾಗೂ ಅವನ್ನೇ ಶ್ರೀಮನ್ನಾರಾಯಣ ಚಿತ್ರಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದ ಚಂದ್ರಜಿತ್ ಬೆಳಿಯಪ್ಪ, ರಕ್ಷಿತ್‌ರ ‘ಸೆವೆನ್ ಆಡ್ಸ್’ ಬರಹಗಾರರ ತಂಡದ ಪ್ರಮುಖ ಸದಸ್ಯ ಹಾಗೂ ಕಥಾಸಂಗಮ ಚಿತ್ರದ ನಿರ್ದೇಶಕರಲ್ಲೊಬ್ಬರಾಗಿದ್ದರು. ಇದೀಗ ಇಬ್ಬನಿ ತಬ್ಬಿದ ಇಳೆಯಲಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಪರವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್.ಗುಪ್ತ, ರಕ್ಷಿತ್ ಶೆಟ್ಟಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

       ತೆಲುಗಿನ ಸೂಪರ್‌ಹಿಟ್ ‘ಗೀತಾಂಜಲಿ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ಗಿರಿಜಾ ಶೆಟ್ಟರ್ ಬಹಳ ವರ್ಷಗಳ ನಂತರ ನಟನೆಗೆ ಮರಳಿ ಬಂದಿದ್ದಾರೆ. ಮಯೂರಿ ನಟರಾಜ್, ಅನಿರುದ್ಧ್ ಭಟ್, ದಾಮಿನಿ ಧನರಾಜ್ ಮೊದಲಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕಾರ್ಯದಲ್ಲಿ ಚಿತ್ರತಂಡ ಮಗ್ನವಾಗಿದ್ದು, ವಿಎಫ್‌ಎಕ್ಸ್ ಕೆಲಸ ಪಿನಾಕ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಶ್ರೀವತ್ಸನ್ ಸೆಲ್ವರಾಜನ್ ಛಾಯಾಗ್ರಹಣ, ರಕ್ಷಿತ್ ಕಾಪ್ ಸಂಕಲನ ಚಿತ್ರಕ್ಕಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್