LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಚಿತ್ತಾಪುರದಲ್ಲಿ ಆರ್​​ಎಸ್​​ಎಸ್​​ ಪಥಸಂಚಲನ : ಹೈಕೋರ್ಟ್ ಮಹತ್ವದ ಸೂಚನೆ

ಕಲಬುರಗಿ, ಅಕ್ಟೋಬರ್​ 19: ಜಿಲ್ಲೆಯ ಚಿತ್ತಾಪುರದಲ್ಲಿ ಆರ್​​​ಎಸ್​​​ಎಸ್​ ಪಥಸಂಚಲನಕ್ಕೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಿದ ಕಲಬುರಗಿ ಹೈಕೋರ್ಟ್ ಪೀಠ, ಪಥಸಂಚಲನ ಮಾರ್ಗದೊಂದಿಗೆ ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿದೆ. ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಜೊತೆಗೆ ಅಕ್ಟೋಬರ್​​ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದೆ.



ಚಿತ್ತಾಪುರದಲ್ಲಿ ಭಾನುವಾರ ಆರ್​ಎಸ್​ಎಸ್​​ ಪಥ ಸಂಚಲನ ನಡೆಯಬೇಕಿತ್ತು. ಆದರೆ ಅನುಮತಿ ನಿರಾಕರಿಸಿ ತಹಶೀಲ್ದಾರ್​ ನಾಗಯ್ಯ ಹಿರೇಮಠ ಆದೇಶ ಹೊರಡಿಸಿದ್ದರು. ಹೀಗಾಗಿ ಆರ್​ಎಸ್​ಎಸ್ ಕಾರ್ಯಕರ್ತರು ಕಾನೂನು ಹೋರಾಟಕ್ಕೆ ಮುಂದಾಗಿದ್ದರು. ಅದರಂತೆಯೇ ಡಿಸಿ ಕ್ರಮ ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ಪೀಠಕ್ಕೆ ಆರ್​​ಎಸ್​ಎಸ್​ ಕಲಬುರಗಿ ಜಿಲ್ಲಾ ಪ್ರಮುಖರಾದ ಅಶೋಕ್ ಪಾಟೀಲ್ ಎಂಬುವವರು ರಿಟ್ ಅರ್ಜಿ ಸಲ್ಲಿಸಿದ್ದರು.

ನ್ಯಾ. ಎಂಜಿಎಸ್​​ ಕಮಲ್ ಅವರ ಪೀಠದಲ್ಲಿ ತುರ್ತು ವಿಚಾರಣೆ ಮಾಡಲಾಯಿತು. ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ಕಾನೂನಿನ ಪ್ರಕಾರ ಅನುಮತಿ ಕೊಡಬೇಕಾದವರು ಯಾರು ಎಂದು ಜಡ್ಜ್ ಪ್ರಶ್ನಿಸಿದರು. ಪೊಲೀಸರಿಗೆ ಭದ್ರತೆ ನೀಡಲು ಮಾಹಿತಿ ನೀಡಿದ್ದೆವು. ಅ.13ರಂದೇ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೆವು. ಅ.17ರಂದು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್​​​ಗೆ ಅರ್ಜಿ ಸಲ್ಲಿಸಿದ್ದೆವು. ಶನಿವಾರ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದಾರೆ ಎಂದು ಅರುಣ್ ಶ್ಯಾಮ್ ವಾದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್