LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಪೊಲೀಸ್ ಖದರ್ ನಲ್ಲಿ  ನೆನಪಿರಲಿ ಪ್ರೇಮ್ ಹೊಸ ಸಿನಿಮಾ


     ಲವ್ಲಿ ಸ್ಟಾರ್ ಪ್ರೇಮ್ ಈಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಬಾರಿ ಅವರು ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿಲ್ಲ. ಬದಲಾಗಿ ರಗಡ್ ಅವತಾರ ತಾಳಿದ್ದಾರೆ.


     ಪ್ರೇಮ್ ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಹೊಸ ಸಿನಿಮಾದ ಮುಹೂರ್ತ  ಬೆಂಗಳೂರಿನ ಬಂಡಿ ಮಹಾಕಾಳಿ ದೇಗುಲದಲ್ಲಿ ನೆರವೇರಿದೆ.

     ಈ ಸಂದರ್ಭದಲ್ಲಿ ಪ್ರೇಮ್ ಮಾತನಾಡಿ "ನಾನು ಹುಟ್ಟಿದ ದಿನ ಮುಹೂರ್ತ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿತ್ತು. 2.0 ರೀಬ್ರ್ಯಾಂಡಿಂಗ್ ಅಂತಾ ನನ್ನ ಸ್ನೇಹಿತರು ಕೇಳಿದರು.


ಈ ಮೊದಲು ಆಕ್ಷನ್ ಸಿನಿಮಾ ಮಾಡಿದ್ದೇವು. ಆದರೆ ಬಹಳಷ್ಟು ಗ್ಯಾಪ್ ಆಗಿತ್ತು. ಲವ್ ಬ್ರ್ಯಾಂಡ್ ಆಗಿದ್ದರಿಂದ ಈಗ ಒಂದೊಳ್ಳೆ ಕಥೆಯೊಂದಿಗೆ ನಿರ್ದೇಶಕರು ಬಂದರು. ಹೀಗಾಗಿ ಈ ಚಿತ್ರ ಒಪ್ಪಿಕೊಂಡೆ. ಸಿನಿಮಾದಲ್ಲಿ ಸ್ಟ್ರೀಕ್ಟ್ ಪೊಲೀಸ್ ಅಧಿಕಾರಿ ಪಾತ್ರ ನಿರ್ವಹಿಸುತ್ತಿದ್ದೇನೆ. ಸ್ಕ್ರೀಪ್ಟ್ ರೆಡಿಯಾಗ್ತಿದೆ. ಕ್ಲೈಮ್ಯಾಕ್ಸ್ ಚರ್ಚೆ ಹಂತದಲ್ಲಿದೆ. ಪೂರ್ಣ ಪ್ರಮಾಣದಲ್ಲಿ ಸ್ಟಾರ್ ಕಾಸ್ಟ್ ಡಿಸೈಡ್ ಆಗಿಲ್ಲ" ಎಂದರು.


     ತೇಜೇಶ್ "ಇದು ನನ್ನ ಮೊದಲ ಸಿನಿಮಾ. ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಇದಾಗಿದೆ. ಟೈಟಲ್ ಚರ್ಚೆಯಲ್ಲಿದೆ. ಕಥೆಗೆ ಪ್ರೇಮ್ ಸರ್ ಸೂಟ್ ಆಗಿರುವುದರಿಂದ ಅವರನ್ನು ಆಯ್ಕೆ ಮಾಡಿದ್ದೇವೆ. ರಂಗಾಯಣ ರಘು ಸರ್ ಚಿತ್ರದ ಭಾಗವಾಗಿದ್ದಾರೆ. ಈ ತಿಂಗಳಾತ್ಯಂಕ್ಕೆ ಶೂಟಿಂಗ್ ಗೆ ಹೊರಡಲಿದ್ದೇವೆ" ಎಂದು ಮಾಹಿತಿ ನೀಡಿದರು.


     ನೆನಪಿರಲಿ ಪ್ರೇಮ್ ಮತ್ತೆ ಪೊಲೀಸ್ ಪಾತ್ರ ಮಾಡಿದ್ದಾರೆ. 11 ವರ್ಷದ ಹಿಂದೆ ಪೊಲೀಸ್ ರೋಲ್ ಮಾಡಿದ್ದರು. ಶತ್ರು ಅನ್ನೋ ಈ ಚಿತ್ರದಲ್ಲಿ ಪೊಲೀಸ್ ಖದರ್ ನಲ್ಲಿ ಪವರ್ ತೋರಿಸಿದ್ದರು. ಆದರೆ ಪ್ರೇಮ್ ಈ ಸಲ ಬೇರೆ ರೀತಿಯ ಪೊಲೀಸ್ ಪಾತ್ರ ಮಾಡಿದ್ದಾರೆ. ರಫ್ ಆ್ಯಂಡ್ ಟಫ್ ಅಲ್ಲದೇ, ರಗಡ್ ಲುಕ್ ಇರೋ ಪೊಲೀಸ್ ರೀತಿನೂ ಕಾಣಿಸುತ್ತಿದ್ದಾರೆ. ಕೈಯಲ್ಲಿ ಸಿಂಗಲ್ ಬ್ಯಾರಲ್ ಗನ್ ಕೂಡ ಇದೆ. ಅದನ್ನ ಸ್ಟೈಲ್ ಆಗಿಯೂ ಪ್ರೇಮ್ ಹಿಡಿದು ಕೊಂಡು, ದೊಂಬಿ ಮಾಡೋರ ಕಡೆಗೆ ಮುಖ ಮಾಡಿ ನಿಂತಿದ್ದಾರೆ.


      ಯುವ ಪ್ರತಿಭೆ ತೇಜಸ್ ಬಿ ಕೆ ಕಥೆ ಚಿತ್ರಕಥೆ ಬರೆದು ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದಾರೆ. ವಾಸುಕಿ ವೈಭವ್ ಸಂಗೀತ, ಆನಂದ್ ಮೀನಾಕ್ಷಿ ಛಾಯಾಗ್ರಹಣವಿದೆ.  ಮಧು ಗೌಡ ಬಂಡವಾಳ ಹೂಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್