LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರೂಪನಗುಡಿ ಸಿ.ಎಚ್.ಸಿ ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

ಬಳ್ಳಾರಿ,ಫೆ.06..  ರೂಪನಗುಡಿ ಸಮುದಾಯ ಆರೋಗ್ಯ ಕೇಂದ್ರವು ಸುತ್ತಮುತ್ತಲಿನ 18 ಹಳ್ಳಿಗಳ ಜನರಿಗೆ ಆರೋಗ್ಯ ಸೇವೆ ನೀಡುತ್ತಿರುವ ಪ್ರಮುಖ ಆಸ್ಪತ್ರೆಯಾಗಿದ್ದು, ಕಳೆದ ತಿಂಗಳ ಹಿಂದೆ ವೈದ್ಯರ ಕೊರತೆ, ಮೂಲಸೌಕರ್ಯಗಳ ಅಭಾವ ಸೇರಿದಂತೆ ಹಲವು ಸಮಸ್ಯೆಗಳ ಪರಿಹಾರಕ್ಕಾಗಿ  ಗ್ರಾಮಸ್ಥರು ಹಾಗೂ ಮುಖಂಡರು ಸೇರಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮಾಂತರ ಕ್ಷೇತ್ರದ ಹಾಲಿ ಶಾಸಕರಾದ ಬಿ. ನಾಗೇಂದ್ರ ಅವರಿಗೆ ಮನವಿ ಸಲ್ಲಿಸಿದ್ದರು.

ಈ ಮನವಿಗೆ ತಕ್ಷಣ ಸ್ಪಂದಿಸಿದ ಶಾಸಕ ಬಿ. ನಾಗೇಂದ್ರ ಅವರು ಜಿಲ್ಲಾ ಆರೋಗ್ಯಾಧಿಕಾರಿ ವೈ.ಎಲ್.ರಮೇಶ್ ಬಾಬು ಅವರ ಗಮನಕ್ಕೆ ಈ ವಿಷಯವನ್ನು ತಂದು, ಕ್ಷೇತ್ರದ ಜನತೆಗೆ ಯಾವುದೇ ತೊಂದರೆ ಆಗದಂತೆ ಆಸ್ಪತ್ರೆಯ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಸೂಚನೆ ನೀಡಿದ್ದರು.

ಅದರ ಹಿನ್ನೆಲೆ ಶಾಸಕರ ಆದೇಶದಂತೆ ರೂಪನಗುಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ 30 ಲಕ್ಷ ರೂ.ವೆಚ್ಚದಲ್ಲಿ ಗರ್ಭಿಣಿ ಮಹಿಳೆಯರಿಗಾಗಿ ಸ್ಕ್ಯಾನಿಂಗ್ ಸೆಂಟರ್,

5 ಲಕ್ಷ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಆರೋ ಘಟಕ, ವೈದ್ಯರ ಕೊರತೆಯನ್ನು ನೀಗಿಸಲು ಇಬ್ಬರು ಎಂಬಿಬಿಎಸ್ ವೈದ್ಯರ ನೇಮಕ, ಔಷಧಿ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕೆ ಅನುದಾನ ಬಿಡುಗಡೆ ಗೊಳಿಸಿದರು ಅಷ್ಟೇ ಅಲ್ಲದೆ  ಮುಂದಿನ ದಿನಗಳಲ್ಲಿ ಹೊಸ ಆಂಬುಲೆನ್ಸ್ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದಾರೆ ಎಂದು ಜಯರಾಮಪ್ಪ ತಿಳಿಸಿದರು.

ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಒಳಗಡೆ ಹಮ್ಮಿಕೊಂಡಿದ್ದ ಸರಳವಾದ ಸಮಾರಂಭದಲ್ಲಿ ಊರಿನ ಹಿರಿಯ ಮುಖಂಡರು, ಮಾಜಿ ಮಂಡಲ ಅಧ್ಯಕ್ಷ ಜಯರಾಮಪ್ಪ, ಇಂಟೆಕ್ ಜಿಲ್ಲಾಧ್ಯಕ್ಷ ರಾಮಾಂಜನಿ, ಮಾಜಿ ಗ್ರಾಮ ಪಂಚಾಯತಿ ಸದಸ್ಯರು, ಕಾಂಗ್ರೆಸ್ ಹಿರಿಯ ಮುಖಂಡ ಅಕ್ಕಿ ಶಿವರಾಜ್ ಗೌಡ, ಗ್ರಾಮ ಪಂಚಾಯತಿ ಸದಸ್ಯ ಅಂಜಿನಿ ಸೇರಿದಂತೆ ಹಲವು ಮುಖಂಡರು ತಮ್ಮ ಸಂತಸವನ್ನು ವ್ಯಕ್ತಪಡಿಸಿದರು.

ತಾಲೂಕಿನ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ರೂಪನಗುಡಿ ಗ್ರಾಮದ ಸರ್ಕಾರಿ  ಸಮುದಾಯ ಆರೋಗ್ಯ ಮತ್ತು ಕ್ಷೇಮ  ಕೇಂದ್ರ (ಸಿ.ಎಚ್.ಸಿ) ಆಸ್ಪತ್ರೆಯಲ್ಲಿ ಶುದ್ಧ ಕುಡಿಯುವ ನೀರಿನ  (RO) ಘಟಕವನ್ನು ಇಂದು ಉದ್ಘಾಟಿಸಲಾಯಿತು.

ಈ ಕಾರ್ಯಕ್ರಮವನ್ನು ಗ್ರಾಮದ ಹಿರಿಯ ಮುಖಂಡ ಹಾಗೂ ಮಾಜಿ ಮಂಡಲ ಅಧ್ಯಕ್ಷ ಜಯರಾಮಪ್ಪ, ಕಾಂಗ್ರೇಸ್ ಇಂಟೆಕ್ ಜಿಲ್ಲಾಧ್ಯಕ್ಷ ರಾಮಾಂಜನಿ, ಮಾಜಿ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡ ಅಕ್ಕಿ ಶಿವರಾಜ್ ಗೌಡ,  ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ವರ್ಗದವರು ಮತ್ತು ಊರಿನ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಯುವ ಮುಖಂಡ ಜಗನ್ನಾಥ, ಊರಿನ ಹಿರಿಯ ಮುಖಂಡರುಗಳಾದ ಶರ್ಮಾಸ್ (ಮಾಮ), ರಫೀಕ್, ಶಿವರಾಜ್, ನಾಗೇಂದ್ರ, ಹೊನ್ನಳ್ಳಿ ಸೀನ, ಚಂದ್ರಸ್ವಾಮಿ, ಸಂಕಣ್ಣ, ಅಮಕ್ಷವಳಿ, ತಿಪ್ಪಯ್ಯ, ಯಶವಂತ್, ಗೋಪಿ, ರಾಮಕೃಷ್ಣ ಸೇರಿದಂತೆ ಹಮಾಲಿ ಸಂಘದ ಮುಖಂಡರು, ಗ್ರಾಮಸ್ಥರು ಹಾಗೂ ಆಸ್ಪತ್ರೆ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್