LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಿಜೆಪಿ ಜಿಲ್ಲಾ  ನೂತನ ಕಾರ್ಯಾಲಯ ಉದ್ಘಾಟನೆ




ಬೆಳಗಾವಿ. ನಗರದ ಧರ್ಮನಾಥ ಭವನದ ಹತ್ತಿರ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ನೂತನ ಕಾರ್ಯಾಲಯವನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ  ಜಗದೀಶ್ ಶೆಟ್ಟರ್ ಅವರು ಉದ್ಘಾಟಿಸಿದರು.


ಸೋಮವಾರದಂದು ಕಾರ್ಯಾಲಯ ಉದ್ಘಾಟನೆ ನೆರವೇರಿಸಿ ಮಾತನಾಡಿ ನೂತನವಾದ ಕಾರ್ಯಾಲಯವು ನಮ್ಮ ಭಾಜಪ ಕಾರ್ಯಕರ್ತರಿಗೆ ಸಭೆ ಹಾಗೂ ಪಕ್ಷದ ಕಾರ್ಯಕ್ರಮವನ್ನು ಮಾಡಲು ಅನುಕೂಲಕರವಾಗಲಿದೆ ಈ ಕಾರ್ಯಾಲಯಕ್ಕೆ ವಾರಕ್ಕೊಮ್ಮೆ ಒಂದು ದಿನ ನಾನು ಭೇಟಿ ನೀಡಿ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸುತ್ತೇನೆ ಎಂದು ಹೇಳಿದರು.ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭ್ರಷ್ಟಾಚಾರ ಪ್ರಕರಣದಲ್ಲಿ ಗೌರವಾನ್ವಿತ ರಾಜ್ಯಪಾಲರು ವಿಚಾರಣೆಗೆ ಅವಕಾಶ ಕೊಟ್ಟಿದ್ದು, ಅದನ್ನು ಸಿದ್ದರಾಮಯ್ಯನವರು ಬಹಳ ನೈತಿಕವಾಗಿ ಪರಿಗಣಿಸಿ ರಾಜೀನಾಮೆ ಕೊಡಬೇಕು ಎಂದು ಹೇಳಿದರು.


ನಂತರ  ಭಾ.ಜ.ಪಾ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ  ಸುಭಾಷ್ ಪಾಟೀಲ ಮಾತನಾಡಿ ಮುಂಬರುವ ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದರು.


ನಂತರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾತನಾಡಿ ಹಿಂದೆ ಇಂಥದ್ದೇ ಪ್ರಕರಣದಲ್ಲಿ ಸಿದ್ದರಾಮ್ಯನವರು ಮಾನ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜೀನಾಮೆಗೆ ಒತ್ತಾಯ ಮಾಡಿದ್ದು ಕೂಡ ಸತ್ಯ. 4 ದಶಕಗಳ ಕಾಲ ಸಾರ್ವಜನಿಕ ಜೀವನ ಮಾಡಿದ ಸಿದ್ದರಾಮ್ಯನವರು, ತಾವು ಪರಿಶುದ್ಧರು ಎಂದು ತಮಗೆ ತಾವೇ ಅಫಿಡವಿಟ್ ಹಾಕಿಕೊಂಡು ಅನೇಕ ಸಂದರ್ಭಗಳಲ್ಲಿ ಅವರ ಮೇಲೆ ಬಂದ ಎಲ್ಲ ಆರೋಪಗಳನ್ನು ಲೋಕಾಯುಕ್ತ ಮುಂದಿದ್ದ 106 ಕೇಸುಗಳಲ್ಲಿ 65 ಪ್ರಕರಣಗಳಲ್ಲಿ ಅವರೇ ಅವುಗಳಿಗೆ ಬಿ ರಿಪೋರ್ಟ್ ಹಾಕಿಸಿಕೊಂಡಿದ್ದರು. ಚಳವಳಿ ರೂಪದಲ್ಲಿ ನಡೆಯುತ್ತಿದ್ದ ಲೋಕಾಯುಕ್ತವನ್ನು (ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ನ್ಯಾ. ವೆಂಕಟಾಚಲಯ್ಯ ಮೊದಲಾದವರ ನೇತೃತ್ವ) ಆ ಸಂಸ್ಥೆಯನ್ನೇ ಮುಚ್ಚಿಸಲು ಕಾರಣರಾಗಿದ್ದರು ಎಂದು ಆರೋಪಿಸಿದರು.


ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಶ್ರೀಮತಿ ಮಂಗಳಾ ಅಂಗಡಿ, ಮಾಜಿ ಸಚಿವರಾದ ಶ್ರೀ ಶ್ರೀಮಂತ ಪಾಟೀಲ್, ಮಾಜಿ ಶಾಸಕರಾದ  ಸಂಜಯ್ ಪಾಟೀಲ್,  ಜಗದೀಶ್ ಮೆಟಗುಡ್, ವಿ. ಐ ಪಾಟೀಲ್, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ  ಅನಿಲ್ ಬೆನಕೆ, ಬಿಜೆಪಿ ರಾಷ್ಟ್ರೀಯ ಓಬಿಸಿ ಮೋರ್ಚಾ ಕಾರ್ಯಕಾರಣಿ ಸದಸ್ಯರಾದ  ಲಕ್ಷ್ಮಣ್ ತಪಸಿ, ಎಂ.ಬಿ ಜಿರಲಿ,  ಬಸವರಾಜ್ ಯಂಕಂಚಿ, ವಿರೂಪಾಕ್ಷ ಮಾಮನಿ,  ಬಸವರಾಜ್ ಹುಂದ್ರಿ,  ರಾಜ್ಯಬಿಜೆಪಿ  ಮಾಧ್ಯಮ ಸಲಹೆಗಾರ  ಎಫ್.ಎಸ್ ಸಿದ್ದನಗೌಡ್ರ,  ಶಕೀಲಾ ದಾರವಾಡೇಕರ್,ಡಾ. ರಾಜಶೇಖರ್ ನೇರ್ಲಿ, ಹಾಗೂ ಬೆಳಗಾವಿಯ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್