LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನಗರಾಭಿವೃದ್ದಿ ಪ್ರಾಧಿಕಾರದ ನೂತನ ಕಛೇರಿ ಉದ್ಘಾಟನೆ


ಇಂಡಿ: ನಗರದ ಯೋಜನಾಬದ್ದ ಅಭಿವೃದ್ದಿಗಾಗಿ ಕಾಮಗಾರಿಗಳ ಕೆಲಸವನ್ನು ನಗರಾಭಿವೃದ್ದಿ ಪ್ರಾಧಿಕಾರ ಮೂಲಕ ಮಾಡಲಾಗುತ್ತದೆ. ಇದರ ಪ್ರಯೋಜನ ಪಡೆದುಕೊಂಡು ನಗರದ ಅಭಿವೃದ್ದಿ ಕಾರ್ಯಕ್ರಮಗಳನ್ನು ರೂಪಿಸಿ ನಗರ ಸರ್ವಾಂಗಿಣ ಅಭಿವೃದ್ದಿ ಪಡಿಸುವ ನೀಟ್ಟಿನಲ್ಲಿ ಗುರಿಯಾಗಿಸಿಕೊಂಡು ಕಾರ್ಯಪ್ರವತ್ತರಾಗಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಅವರು ಬುಧವಾರರಂದು ನಗರದ ಆಡಳಿತ ಸೌಧದ ಮೂರನೇಯ ಮಹಡಿಯಲ್ಲಿ ಇಂಡಿ ನಗರಾಭಿವೃದ್ದಿ ಪ್ರಾಧಿಕಾರದ ನೂತನ ಕಛೇರಿ ಉದ್ಘಾಟಿಸಿ ಮಾತನಾಡಿದರು.
ರಾಜ್ಯದ ಗಡಿ ಭಾಗದ ಇಂಡಿ ನಗರ ಕೂಡಾ ಒಂದು ಮಾದರಿ ನಗರವನ್ನಾಗಿ ಮಾಡಬೇಕು ಎಂಬ ಪರಿಕಲ್ಪನೆಯಾಗಿದೆ. ಹಾಗಾಗಿ ಜಿಲ್ಲಾ ಮಟ್ಟದ ಹಲವು ಇಲಾಖೆಗಳು ಕಾರ್ಯ ನಿರ್ವಹಿಸುತ್ತಿವೆ. ಇದರ ಸದುಪಯೋಗವನ್ನು ಜನ ಪಡೆದುಕೊಳ್ಳಬೇಕು ಎಂಬ ಸದಾಶಯ ನನ್ನದು.  ಸಾರ್ವಜನಿಕರ ಕೇಲಸ ಕಾರ್ಯಗಳು ತ್ವರಿತವಾಗಿ ಆಗಬೇಕು ಅಭಿವೃದ್ದಿ ಪುರಕವಾಗಿ ಇಂಡಿ ಅಭಿವೃದ್ದಿ ಪ್ರಾಧಿಕಾರ ಮತ್ತು ಇಂಡಿ ನಗರಸಭೆ ಕಾರ್ಯನಿರ್ವಹಿಸುತ್ತವೆ ಎಂದರು.
ಇದೇ ವೇಳೆ ನೂತನ ಅಧ್ಯಕ್ಷರಾಗಿ ಅಜೀತ ಧನಶೆಟ್ಟಿ, ಸದಸ್ಯರಾಗಿ ಚನ್ನಪ್ಪ ಮಲ್ಲಪ್ಪ ಬೋಡಿ, ರವೀಂದ್ರ ನಿಗಡಿ, ದತ್ತಾತ್ರೇಯ ಜೋಶಿ ಅಧಿಕಾರ ಸ್ವೀಕರಿಸಿ ಮಾತನಾಡಿದರು. 
ಜಿಲ್ಲಾಧಿಕಾರಿ ಕೆ.ಆನಂದ, ಪೌರಾಯುಕ್ತ ಶಿವಾನಂದ ಪೂಜಾರಿ, ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ತಹಸೀಲ್ದಾರ ಬಿ.ಎಸ್.ಕಡಕಬಾವಿ, ಕೃಷಿ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ಇಲಿಯಾಸ ಬೋರಾಮಣಿ, ವಕೀಲರ ಸಂಘದ ಅಧ್ಯಕ್ಷ ಸಿದ್ದಣ್ಣ ಬೂದಿಹಾಳ, ಅಶೋಕ ಗಜಾಕೋಶ, ಸಂದೀಪ ಧನಶೆಟ್ಟಿ, ಶಾಂತುಗೌಡ ಬಿರಾದಾರ ಶ್ರೀಕಾಂತ ಕುಡಿಗನೂರ, ಸತೀಶ ಕುಂಬಾರ ಮತ್ತಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್