LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸೋಮಸಮುದ್ರದಲ್ಲಿ ಅಗರಬತ್ತಿ ತಯಾರಿಕೆ ಶಿಬಿರ

ಬಳ್ಳಾರಿ, ಮೇ.31: :ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ 11 ದಿನ ಅಗರಬತ್ತಿ ತರಬೇತಿ ಪಡೆದ ಶಿಬಿರಾರ್ಥಿಗಳಿಂದ ಅಗರಬತ್ತಿ ಮೇಳ ಹಾಗೂ ಮಹಿಳಾ ಋತುಚಕ್ರ ಜಾಗೃತಿ ಕಾರ್ಯಕ್ರಮ ನಿನ್ನೆ ನಡೆಯಿತು.
ಎನ್.ಆರ್.ಎಲ್.ಎಮ್ ಯೋಜನೆ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಸಂಸ್ಥೆಯ ಶ್ರೀ ಕೊಟ್ಟೂರೇಶ್ವರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಹಾಗೂ ಕೆನರಾ ಬ್ಯಾಂಕ್ ಆರ್ಸೆಟಿ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ಇದನ್ನು ಆಯೋಜಿಸಲಾಗಿತ್ತು.
ಈ ವೇಳೆ ಮಾತನಾಡಿದ ಕುರುಗೋಡು ತಾಲೂಕು ಪಂಚಾಯ್ತಿ ಇಓ ಕೆ.ವಿ.ನಿರ್ಮಲ ಸ್ವಾವಲಂಬಿ ಬದುಕಿಗೆ ಸಾಲ ಸೌಲಭ್ಯಗಳ ಬಳಕೆ ಕುರಿತು ತಿಳಿಸಿದರು
ತರಬೇತಿ ಪಡೆದ ಶಿಬಿರಾರ್ಥಿಗಳು ಸಿದ್ಧಪಡಿಸಿದ ಅಗರಬತ್ತಿಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ವೀಕ್ಷಿಸಿ ತೀವ್ರ ಸಂತಸ ವ್ಯಕ್ತಪಡಿಸಿದರು. ಸ್ವತಃ ತಾವೇ ಅಗರಬತ್ತಿಗಳನ್ನು ಖರೀದಿಸುವ ಮೂಲಕ ಮಹಿಳೆಯರನ್ನು ಪ್ರೋತ್ಸಾಹಿಸಿದರು
"ಸ್ವಸಹಾಯ ಸಂಘಗಳ ಮಹಿಳೆಯರು ಮುಂದಿನ ದಿನಗಳಲ್ಲಿ ಕೇವಲ ತರಬೇತಿಗೆ ಸೀಮಿತವಾಗದೆ, ಎನ್.ಆರ್ ಎಲ್ ಎಂ ಯೋಜನೆಯಡಿ ಸಿಗುವ ಸಾಲ ಸೌಲಭ್ಯಗಳು ಹಾಗೂ ಎಂಪಿಇಜಿಪಿ ಯೋಜನೆಯಡಿ ಸಾಲ ಪಡೆದು ಸ್ವಂತ ಅಗರಬತ್ತಿ ಉದ್ಯಮವನ್ನು ಆರಂಭಿಸಿ ದೊಡ್ಡ ಉದ್ಯಮಿಗಳಾಗಿ ಬೆಳೆಯಬೇಕು ಎಂದರು
ಋತುಚಕ್ರದ ಸಮಯದಲ್ಲಿ ಮಹಿಳೆಯರು ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಬಳಸಿದ ಪ್ಯಾಡ್ಗಳನ್ನು ಎಲ್ಲೆಂದರಲ್ಲಿ ಬಿಸಾಡದೆ, ಸ್ವಚ್ಛತಾ ವಾಹನಗಳಿಗೆ ನೀಡಬೇಕು ಅಥವಾ ಶಾಲಾ ಮಟ್ಟದಲ್ಲಿರುವ ಬರ್ನಿಂಗ್ ಮಿಷನ್ ಬಳಸಿ ಸುಟ್ಟು ವಿಲೇವಾರಿ ಮಾಡಬೇಕು ಎಂದು ಜಾಗೃತಿ ಮೂಡಿಸಿದರು.
ಈ ವೇಳೆ ಗ್ರಾಪಂ ಕಾರ್ಯದರ್ಶಿ ಗೋವಿಂದಪ್ಪ,
ಉಪನ್ಯಾಸಕ ದಿನೇಶ್, ಕರವಸೂಲಿಗಾರ ಹೊನ್ನೂರಸ್ವಾಮಿ, ಹೆಚ್. ಅಡಿವೆಪ್ಪ, ಆಶಾ ಕಾರ್ಯಕರ್ತೆಯರು ಹಾಗೂ ತರಬೇತಿ ಪಡೆದ ಮಹಿಳಾ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್