LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Business News

ಪೆಟ್ರೋಲ್, ಡೀಸೆಲ್  ಮತ್ತು ಸಿಎನ್‌ ಜಿ ದರದಲ್ಲಿ ಹೆಚ್ಚಳ

ನವದೆಹಲಿ, ಮೇ 15: ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್​ಗೆ 3 ರೂ. ಹೆಚ್ಚಳ ಮಾಡಲಾಗಿದೆ.  ಶುಕ್ರವಾರ ಬೆಳಗ್ಗೆ ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು ಘೋಷಿಸಿದ್ದು, ತಕ್ಷಣದಿಂದಲೇ ಜಾರಿಗೆ ತಂದಿವೆ. ಜಾಗತಿಕ ಬೆಲೆ ಏರಿಕೆಯ ಒಂದು ಭಾಗವನ್ನು ತೈಲ ಕಂಪನಿಗಳು ಈಗ ಬೆಲೆ ಹೆಚ್ಚಳದ ಮೂಲಕ ಗ್ರಾಹಕರಿಗೆ ವರ್ಗಾಯಿಸಿವೆ. ಸದ್ಯ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಈಗ ಲೀಟರ್‌ಗೆ 97.77 ರೂ.ಗಳಿಂದ 94.77 ರೂ.ಗಳಿಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ  87.67 ರೂ.ಗಳಿಂದ 90.67 ರೂ.ಗಳಿಗೆ ಏರಿಕೆಯಾಗಿದೆ. ಆಯಾ ರಾಜ್ಯಗಳಲ್ಲಿ ಸ್ಥಳೀಯ ತೆರಿಗೆಗೆ ಅನುಗುಣವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಲ್ಲಿ ತುಸು ವ್ಯತ್ಯಾಸ ಕಾಣಬಹುದು.

ಭಾರತದಲ್ಲೂ ಪೆಟ್ರೋಲ್, ಡೀಸೆಲ್ನೊಂದಿಗೆ ಸಿಎನ್‌ಜಿ ದರವೂ ಹೆಚ್ಚಳ ಕಂಡಿದೆ. ಸಿಎನ್‌ಜಿ ದರವನ್ನು ಕೆಜಿಗೆ ರೂ.2ರಷ್ಟು ಹೆಚ್ಚಿಸಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಪೆಟ್ರೋಲ್ ದರ ಲೀಟರ್​​ಗೆ 3.27 ರೂಪಾಯಿ ಹೆಚ್ಚಳವಾಗಿದ್ದು, ಡಿಸೇಲ್ ಬೆಲೆ ಲೀಟರ್​​ಗೆ 3.12 ರೂಪಾಯಿ ಹೆಚ್ಚಳವಾಗಿದೆ. ಈ ಹಿಂದೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 102.90 ರೂ. ಇತ್ತು. ಈಗ 106.17 ರೂ.ಗೆ ಹೆಚ್ಚಳ ಆಗಿದೆ. ಡಿಸೇಲ್ ಬೆಲೆ 90.98 ರೂ. ಇತ್ತು. ಈಗ 94.10 ರೂ. .ಗೆ ಹೆಚ್ಚಳವಾಗಿದೆ.

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಕಚ್ಚಾ ತೈಲ ದರದಲ್ಲಿ ಭಾರೀ ಹೆಚ್ಚಳವಾಗಿದೆ. ಇದರ ಹೊರತಾಗಿಯೂ ಭಾರತದಲ್ಲಿ ಈವರೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿರಲಿಲ್ಲ. ಜನರ ಮೇಲೆ ದರ ಹೆಚ್ಚಳದ ಹೋರೆಯನ್ನು ತಪ್ಪಿಸಲಾಗಿತ್ತು. ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ತೆರಿಗೆ ಹೊಂದಾಣಿಕೆ ಮೂಲಕ ಮತ್ತು ಪೂರೈಕೆ ನಿರ್ವಹಣಾ ಕ್ರಮಗಳ ಮೂಲಕ ದರ ಹೆಚ್ಚಳದ ಒತ್ತಡವನ್ನು ನಿಭಾಯಿಸಿದ್ದವು. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗದಂತೆ ನೋಡಿಕೊಳ್ಳುವ ಸಲುವಾಗಿ ಕೇಂದ್ರವು ಕಳೆದ ಮಾರ್ಚ್ 27 ರಂದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 10 ರೂಪಾಯಿಗಳಷ್ಟು ಕಡಿತಗೊಳಿಸಿ, ಪ್ರತಿ ಲೀಟರ್ ಪೆಟ್ರೋಲ್‌ಗೆ ಅಬಕಾರಿ ಸುಂಕ 3 ರೂಪಾಯಿಗೆ ಮತ್ತು ಡೀಸೆಲ್‌ಗೆ ಶೂನ್ಯಕ್ಕೆ ಇಳಿಸಿತ್ತು. ಈ ಮೂಲಕ ಕೇಂದ್ರ ಸರಕಾರವು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಳದಿಂದ ತೈಲ ಕಂಪನಿಗಳಿಗೆ ಆಗಬಹುದಾದ ನಷ್ಟವನ್ನು ಕಡಿಮೆ ಮಾಡಲು ಹಾಗೂ ದೇಶದಲ್ಲಿ ತೈಲ ಬೆಲೆ ಏರಿಕೆ ತಡೆಯಲು ಸಾಧ್ಯವಾಯಿತು.

ಪ್ರಧಾನಿ ಕೆಲ ದಿನ ಹಿಂದೆ ಒಂದು ವರ್ಷ ಬಂಗಾರ ಖರೀದಿಯನ್ನ ನಿಲ್ಲಿಸಿ, ಹೆಚ್ಚೆಹೆಚ್ಚು ಸಾರ್ವಜನಿಕ ಸಾರಿಗೆ ಬಳಕೆ ಮಾಡಿ ಎಂದು ದೇಶದ ಜನರಲ್ಲಿ ಮನವಿ ಮಾಡಿದ್ದರು. ದೇಶದ ಆರ್ಥಿಕತೆ ಕಾಪಾಡಲು ಪೆಟ್ರೋಲ್​, ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಬೇಕಾಗುವುದು ಅನಿವಾರ್ಯವಾಗಿದೆ ಎಂದು ನಿನ್ನೆಯೇ ಆರ್​​​ ಬಿಐ ಗವರ್ನರ್​ ಹೇಳಿದ್ದರು. ಈ ಬೆನ್ನಲ್ಲೇ ಇಂದು ಪೆಟ್ರೋಲ್, ಡೀಸೆಲ್​ ಬೆಲೆಯಲ್ಲಿ ಏರಿಕೆ ಆಗಿದೆ.

ಕೇಂದ್ರ ಸರಕಾರದ ವಿರುದ್ದ ಕಾಂಗ್ರೆಸ್‌ ವಾಗ್ದಾಳಿ :

ಕೇಂದ್ರ ಸರ್ಕಾರ ದೇಶಾದ್ಯಂತ ತೈಲ ಬೆಲೆ ಹೆಚ್ಚಿಸಿರುವ ಕ್ರಮವನ್ನು ಖಂಡಿಸಿರುವ ಕಾಂಗ್ರೆಸ್‌ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮೋದಿ ವಸೂಲಿ ಆರಂಭವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಣದುಬ್ಬರದ ವ್ಯಕ್ತಿ ಮೋದಿ ಮತ್ತೊಮ್ಮೆ ಪೆಟ್ರೋಲ್​ ಬೆಲೆಯನ್ನು ಏರಿಕೆ ಮಾಡುವ ಮೂಲಕ ಸಾರ್ವಜನಿಕರ ಮೇಲೆ ಚಾಟಿ ಬೀಸಿದ್ದಾರೆ. ಪೆಟ್ರೋಲ್​ ಮತ್ತು ಡೀಸೆಲ್​ ಕ್ರಮವಾಗಿ 3 ರೂಪಾಯಿ ಏರಿಕೆ ಮಾಡಲಾಗಿದೆ. ಜೊತೆಗೆ ಸಿಎನ್​ಜಿ ಬೆಲೆಯನ್ನು ಸಹ 2 ರೂ ಹೆಚ್ಚಳ ಮಾಡಿದೆ. ಪಂಚ ರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆ ಮೋದಿಯ ಸುಲಿಗೆ ಆರಂಭವಾಗಿದೆ ಎಂದು ಟೀಕಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್