LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಾಡೆಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಂದ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಪ್ರದರ್ಶನ

ಇಂಡಿ: ಪಟ್ಟಣದ ಮಾಡೆಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ. ವಿಶೇಷವಾಗಿ ಉರ್ದು ಮಾಧ್ಯಮದ ವಿದ್ಯಾರ್ಥಿಗಳು ಟಾಪ್ ಟೆನ್ ಪಟ್ಟಿಯಲ್ಲಿ ಸ್ಥಾನ ಪಡೆದು ಡಿಸ್ಟಿಂಕ್ಷನ್ ಫಲಿತಾಂಶ ಗಳಿಸಿರುವುದು ಹೆಮ್ಮೆಯ ಸಂಗತಿಯಾಗಿದೆ.
ಇಂಡಿ ತಾಲೂಕು ಮಟ್ಟದಲ್ಲಿ ಉರ್ದು ಮಾಧ್ಯಮದ ವಿದ್ಯಾರ್ಥಿಗಳು 
ಉಮ್ಮೆರೋಮಾನ ಬಾಗವಾನ ಶೇ. ೯೭.೬೦%  ೬೧೦ ಅಂಕ ಪಡೆದು ಪ್ರಥಮ. ರುಕ್ಸಾನಾ ಬಾಗವಾನ ಶೇ. ೯೭.೧೨% ೬೦೭ ಅಂಕ ಪಡೆದು ದ್ವಿತೀಯ ಹಾಗೂ ಮಹೇಕ ನದಾಫ ಶೇ. ೯೬.೪೮% ೬೦೩ ಅಂಕ ಪಡೆದು ತೃತೀಯ ಸ್ಥಾನಗಳನ್ನು ಪಡೆದು ಮೆರೆದಿದ್ದಾರೆ. ಅಲ್ಲದೆ ವಿಜಯಪುರ ಜಿಲ್ಲೆ ಮಟ್ಟದಲ್ಲಿಯೂ ದ್ವಿತೀಯ, ತೃತೀಯ ಹಾಗೂ ನಾಲ್ಕನೇ ಸ್ಥಾನಗಳನ್ನು ತಮ್ಮದಾಗಿಸಿಕೊಂಡು ಶ್ರೇಷ್ಠ ಸಾಧನೆ ತೋರಿದ್ದಾರೆ.
ಈ ಸಾಧನೆಗೆ ಗೌರವ ಸೂಚಕವಾಗಿ ಶಾಲೆಯ ವತಿಯಿಂದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಪರಿಶ್ರಮ ಮತ್ತು ಸಾಧನೆಯನ್ನು ಪ್ರಶಂಸಿಸಿದರು.
ಶಾಲೆಯ ಮುಖ್ಯ ಶಿಕ್ಷಕರು ಶ್ರೀ ಮೊಹಮ್ಮದರಫೀಕ ಮುಲ್ಲಾ ಮಾತನಾಡಿ, “ವಿದ್ಯಾರ್ಥಿಗಳ ಕಠಿಣ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಮತ್ತು ಪೋಷಕರ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ” ಎಂದು ಹೇಳಿದರು. ಮುಂದಿನ ದಿನಗಳಲ್ಲಿಯೂ ಇದೇ ರೀತಿ ಉತ್ತಮ ಫಲಿತಾಂಶ ತರಲು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಶ್ರೀ ಮುಫ್ತಿ ಅಬ್ದುಲ ರಹಮಾನ ಅರಬ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದರು ಅದೇ ರೀತಿ ಶ್ರೀ ಪರವೀಜ ಪಟೇಲ ಸಿ ಆರ್ ಪಿ ಇಂಡಿ ಉರ್ದು ಕ್ಲಸ್ಟರ ಶ್ರೀ ಅಲ್ಲಾಭಕ್ಷ ವಾಲಿಕಾರ ಶ್ರೀ ಅಲಹಾಜ ನಿಸಾರಅಹ್ಮದ ಬಾಗವಾನ ಶ್ರೀ ಜಾಕೀರ ಶೇಖ ಶ್ರೀ ಇಮ್ತಿಯಾಜ ಸೌದಾಗರ  ಮುಖ್ಯ ಅತಿಥಿಗಳ ಸ್ಥಾನವನ್ನು ವಹಿಸಿದರು ಈ ಸಮಾರಂಭದಲ್ಲಿ ಮುಖ್ಯ ಶಿಕ್ಷಕರಾದ ಶ್ರೀ ಮಹಮ್ಮದ ರಫೀಕ ಮುಲ್ಲಾ ಸಹ ಶಿಕ್ಷಕರಾದ ಅಬ್ದುಲ್ಲಾ ಪಟೇಲ  ಸಲಾವುದ್ದೀನ ನಾಗೂರ ಮುಜೀಬುರ ರಹಮಾನ ಅಫ್ಜಲಪೂರ
 ಶಿರಾಜಅಹ್ಮದ ಚಟ್ಟರ್ಕಿ
ಮಹಮ್ಮದ ರಫಿಕ ಅವಟಿ ಬಶೀರಅಹ್ಮದ ಗಾಲಿಬವಾಲೆ ಮತ್ತು ಶಾಲೆಯ ಸಹಶಿಕ್ಷಕಿಯರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ಈ ಸಾಧನೆಯಿಂದ ಮಾಡೆಲ್ ಪಬ್ಲಿಕ್ ಶಾಲೆ ಮತ್ತೊಮ್ಮೆ ತನ್ನ ಶೈಕ್ಷಣಿಕ ಗುಣಮಟ್ಟವನ್ನು ಸಾಬೀತುಪಡಿಸಿದೆ.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್