ನವದೆಹಲಿ, ಮೇ 3: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪಾಕಿಸ್ತಾನದ ವಿರುದ್ಧ ಮತ್ತೊಂದು ಕಠಿಣ ಕ್ರಮವಾಗಿ, ನೆರೆಯ ದೇಶ ಪಾಕಿಸ್ತಾನದಿಂದ ಬರುವ ಎಲ್ಲಾ ಆಮದುಗಳನ್ನು ಭಾರತ ನಿಷೇಧಿಸಿದೆ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಇದು
ಪಾಕಿಸ್ತಾನದಿಂದ ಸಾಗಣೆಯಲ್ಲಿರುವ ಎಲ್ಲಾ ಉತ್ಪನ್ನಗಳಿಗೆ ಅನ್ವಯಿಸುತ್ತದೆ ಎಂದು ಸರ್ಕಾರ ಹೇಳಿದೆ. ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಇಂದು ತಿಳಿಸಿದೆ. ಈ ನಿಟ್ಟಿನಲ್ಲಿ ಹೊಸ ನಿಬಂಧನೆಯನ್ನು ವಿದೇಶಿ ವ್ಯಾಪಾರ ನೀತಿ (FTP) 2023ಗೆ ಸೇರಿಸಲಾಗಿದೆ ಎಂದು ಅದು ಹೇಳಿದೆ. ಈ ನಿಯಮವನ್ನು ತಕ್ಷಣವೇ ಜಾರಿಗೆ ತರಲಾಗುವುದು.
“ಪಾಕಿಸ್ತಾನದಲ್ಲಿ ತಯಾರಾಗುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದು ಅಥವಾ ಸಾಗಣೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ನಿಷೇಧಿಸಲಾಗುವುದು” ಎಂದು ವಾಣಿಜ್ಯ ಸಚಿವಾಲಯದ ಮೇ 2ರ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತಾಸಕ್ತಿಯಲ್ಲಿ ಈ ನಿರ್ಬಂಧವನ್ನು ವಿಧಿಸಲಾಗಿದೆ ಎಂದು ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯ (DGFT) ಅಧಿಸೂಚನೆಯಲ್ಲಿ ತಿಳಿಸಿದೆ. ಈ ನಿಷೇಧಕ್ಕೆ ಯಾವುದೇ ವಿನಾಯಿತಿ ನೀಡಬೇಕಾದರೆ ಭಾರತ ಸರ್ಕಾರದ ಅನುಮೋದನೆಯ ಅಗತ್ಯವಿರುತ್ತದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.