LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಲಡಾಕ್‌ ಸ್ಥಿತಿಯ ಶಾಂತತೆಗೆ ಭಾರತ - ಚೀನಾ 23ನೇ ಸುತ್ತಿನ ಮಾತುಕತೆ

ನವದೆಹಲಿ: ಪೂರ್ವ ಲಡಾಖ್‌ನಲ್ಲಿನ ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಶಾಂತಿ ಮತ್ತು ಭದ್ರತೆ ಕಾಪಾಡಿಕೊಳ್ಳುವತ್ತ ಗಮನಹರಿಸುವ ನಿಟ್ಟಿನಲ್ಲಿ ಭಾರತ ಮತ್ತು ಚೀನಾದ ಉನ್ನತ ಮಟ್ಟದ ಸೇನಾಧಿಕಾರಿಗಳು ಮಾತುಕತೆ ನಡೆಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಬುಧವಾರ ತಿಳಿಸಿದೆ.


"ಭಾರತ - ಚೀನಾ ಕಾರ್ಪ್ಸ್ ಕಮಾಂಡರ್​​ಗಳು ಅಕ್ಟೋಬರ್ 25 ರಂದು ಚುಶುಲ್ - ಮೋಲ್ಡೊ ಗಡಿಯಲ್ಲಿ 23ನೇ ಸುತ್ತಿನ ಮಾತುಕತೆ ನಡೆಸಿದರು. ಆಗಸ್ಟ್ 19 ರಂದು ನಡೆದ ವಿಶೇಷ ಪ್ರತಿನಿಧಿಗಳ ಮಾತುಕತೆಯ ನಂತರದ ಬೈಠಕ್​​ ಇದಾಗಿದೆ ಎಂದು ಹೇಳಿದೆ.


"ಮಾತುಕತೆಗಳು ಸ್ನೇಹಪರ ಮತ್ತು ಸೌಹಾರ್ದಯುತವಾಗಿ ನಡೆದವು. 2024ರ ಅಕ್ಟೋಬರ್​ನಲ್ಲಿ ನಡೆದ 22ನೇ ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಸಭೆಯ ನಂತರದ ಪ್ರಗತಿಯನ್ನು ಎರಡೂ ಕಡೆಯವರು ಗಮನಿಸಿದರು. ಭಾರತ - ಚೀನಾ ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಯ್ದುಕೊಳ್ಳಲಾಗಿದೆ ಎಂಬ ಅಭಿಪ್ರಾಯವನ್ನು ಹಂಚಿಕೊಂಡರು. ಸ್ಥಿರತೆ ಕಾಪಾಡಿಕೊಳ್ಳಲು ಗಡಿಯಲ್ಲಿ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಈಗಿರುವ ಕಾರ್ಯವಿಧಾನಗಳನ್ನು ಬಳಸುವುದನ್ನು ಮುಂದುವರಿಸಲು ಎರಡೂ ಕಡೆಯವರು ಒಪ್ಪಿಕೊಂಡರು" ಎಂದು ಎಂಇಎ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್