LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಿಯೋಲ್ ನಲ್ಲಿ ಭಾರತ ದಿನಾಚರಣೆ ಸಂಭ್ರಮ: ಕೊರಿಯಾ ಕನ್ನಡ ಕೂಟದ ಮೆರಗು

ಬಳ್ಳಾರಿ.ಮೇ.21:.ದಕ್ಷಿಣ ಕೊರಿಯಾದ ಸಿಯೋಲ್ ನ ಯೋಯಿದೋ ಹಾಂಗಾಂಗ್ ಪಾರ್ಕ್ (Yeouido Hangang Park)  ನಲ್ಲಿ ಭಾರತೀಯ ರಾಯಭಾರ ಕಚೇರಿ ಆಯೋಜಿಸಿದ್ದ "ಭಾರತ ದಿನಾಚರಣೆ-2026 (2026 India day)"  ಕಾರ್ಯಕ್ರಮವು ವಿದೇಶಿ ನೆಲದಲ್ಲಿ ಭಾರತೀಯ ಸಂಸ್ಕೃತಿಯ ಸುವಾಸನೆ ಹರಡಿಸಿದ ಸಂಭ್ರಮವಾಗಿ ಮೂಡಿಬಂದಿತು. ಬೆಳಿಗ್ಗೆಯಿಂದ ಸಂಜೆವರೆಗೆ ದಿನಪೂರ್ತಿ ನಡೆದ ಈ ಕಾರ್ಯಕ್ರಮದಲ್ಲಿ ಭಾರತದೆಲ್ಲೆಡೆಯ ಸಂಸ್ಕೃತಿ, ಪರಂಪರೆ, ಹಾಗೂ ಕಲೆಗಳ ವೈವಿಧ್ಯತೆ ಮನಮುಟ್ಟುವ ರೀತಿಯಲ್ಲಿ ಅನಾವರಣಗೊಂಡಿತು.
ಕಾರ್ಯಕ್ರಮಕ್ಕೆ ಭಾರತೀಯ ರಾಯಭಾರಿ ಗೌರಂಗಲಾಲ್ ದಾಸ್ ಉದ್ಘಾಟನಾ ಮಾತುಗಳನ್ನಾಡಿ ಚಾಲನೆ ನೀಡಿದರು. ನಂತರ ದಿನವಿಡೀ ಭರತನಾಟ್ಯ, ಒಡಿಸ್ಸಿ, ಕಥಕ್ ಸೇರಿದಂತೆ ವಿವಿಧ ಶಾಸ್ತ್ರೀಯ ನೃತ್ಯಗಳು, ಯೋಗ ಪ್ರದರ್ಶನಗಳು ಮತ್ತು ಸಂಗೀತ ಕಾರ್ಯಕ್ರಮಗಳು ಪ್ರೇಕ್ಷಕರನ್ನು ರಂಜಿಸಿದವು.
ವಿವಿಧ ಭಾರತೀಯ ಸಮುದಾಯದ ಸದಸ್ಯರು ಭಾಗವಹಿಸಿ ನೃತ್ಯ, ಸಂಗೀತ, ಯೋಗ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸಿದರು. ಭಾರತೀಯ ಸಮುದಾಯದ ಜೊತೆಗೆ ಕೊರಿಯಾದ ಸ್ಥಳೀಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಇದರಲ್ಲಿ ಕೊರಿಯಾ ಕನ್ನಡ ಕೂಟ (ಏಏಏ) ವು ಅತ್ಯಂತ ಉತ್ಸಾಹ ಮತ್ತು ಜವಾಬ್ದಾರಿ ಯಿಂದ ಭಾಗವಹಿಸಿ ತನ್ನ ಸಾಂಸ್ಕೃತಿಕ ಪ್ರದರ್ಶನಗಳ ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು.
ಸೌತ್ ಜೋನ್ ನ ಕರ್ನಾಟಕ ಭೂತ್ ನಲ್ಲಿ ರಾಜ್ಯದ ಸಾಂಸ್ಕೃತಿಕ ವೈಭವವನ್ನು ಪರಿಚಯಿಸುವ ಹಲವು ವಸ್ತುಗಳನ್ನು ಮನಮೋಹಕವಾಗಿ ಪ್ರದರ್ಶಿಸಲಾಗಿತ್ತು. ಬಸವಣ್ಣರಂತಹ ಮಹಾನ್ ಚಿಂತಕರ ಪ್ರತಿರೂಪಗಳು (3D images), , ಮೈಸೂರು ಅರಮನೆ, ಅಂಬಾರಿ, ಗೋಲ್ಗುಂಬಜ್, ಬೇಲೂರು - ಹಳೇಬೀಡು ಶಿಲ್ಪಕಲೆ, ಹಂಪಿಯ ಕಲ್ಲಿನ ರಥ ಇತ್ಯಾದಿ ಪ್ರಮುಖ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪ್ರತೀಕಗಳು ಗಮನ ಸೆಳೆದವು. ಜೊತೆಗೆ ಮೈಸೂರು ಸಿಲ್ಕ್, ಇಲ್ಕಲ್ ಸೀರೆಗಳು ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪರಿಚಯವು ಕರ್ನಾಟಕದ ಶ್ರೀಮಂತ ಪರಂಪರೆಯನ್ನು ಪ್ರತಿಬಿಂಬಿಸಿತು. ಕುವೆಂಪು, ತೇಜಸ್ವಿ, ಶಿವರಾಮ ಕಾರಂತ್ ಮೊದಲಾದ ಮಹನೀಯರ ಕೃತಿಗಳನ್ನು ಪರಿಚಯಿಸುವ ಪುಸ್ತಕಗಳನ್ನೂ ಪ್ರದರ್ಶಿಸಲಾಗಿತ್ತು. ಆನೆಗಳ ಪ್ರತಿರೂಪಗಳು ಮಳಿಗೆಗೆ ಮತ್ತಷ್ಟು ಆಕರ್ಷಣೆಯನ್ನು ತಂದವು.
ಕೊರಿಯಾ ಕನ್ನಡ ಕೂಟ (kkk) ವತಿಯಿಂದ ರಮ್ಯಾ ಗೌಡ ನೇತೃತ್ವದಲ್ಲಿ ಮೂಡಿಬಂದ ಕರ್ನಾಟಕದ ಜನಪದ ನೃತ್ಯ 'ಕೋಲಾಟ'ವು ಉತ್ಸಾಹಭರಿತವಾಗಿ ಪ್ರೇಕ್ಷಕರನ್ನು ರಂಜಿಸಿತು. ಅಧ್ಯಂತ್ ನರಹರಿ ಉಪಾಧ್ಯ ಅವರ ಫೂಟ್ ರೆಸೈಟಲ್ ಕಾರ್ಯಕ್ರಮಕ್ಕೆ ಶಾಂತಮಯ ಸ್ಪರ್ಶ ನೀಡಿದರೆ, ಅುಕ್ತ ಉಪಾಧ್ಯ ಅವರ ಭರತನಾಟ್ಯ ಪ್ರದರ್ಶನ ಶೈಲಿ ಮತ್ತು ಭಾವಾಭಿವ್ಯಕ್ತಿಯಿಂದ ವಿಶೇಷವಾಗಿ ಮೆಚ್ಚುಗೆಗೆ ಪಾತ್ರವಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್