LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಪಾಕ್‌ಗೆ 9 ರಾಜತಾಂತ್ರಿಕ ಹೊಡೆತ; ಯುದ್ಧಯಿಲ್ಲದೇ ಗುದ್ದಿದ ಭಾರತ

ನವದೆಹಲಿ, ಮೇ 3: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಭೀತಿ ಆವರಿಸಿದೆ. ಯಾವುದೇ ಕ್ಷಣದಲ್ಲಾದರೂ ಭಾರತೀಯ ಸೇನೆ ಪ್ರತೀಕಾರಕ್ಕೆ ಮುಂದಾಗಬಹುದು ಎಂಬ ಭೀತಿ ಪಾಕಿಸ್ತಾನವನ್ನು ಆವರಿಸಿದೆ. ಹೀಗಾಗಿ, ಸಂಭಾವ್ಯ ಯುದ್ಧ ಎದುರಿಸಲು ಪಾಕಿಸ್ತಾನ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಆದರೆ, ಇತ್ತ ಭಾರತ ಯುದ್ಧ ಮಾಡುವುದು ಬಿಡಿ; ಅದಕ್ಕೂ ಮೊದಲೇ ರಾಜತಾಂತ್ರಿಕ ನಿರ್ಧಾರಗಳು ಹಾಗೂ ಇತರ ಕೆಲವು ಕಠಿಣ ಕ್ರಮಗಳನ್ನು ಕೈಗೊಳ್ಳುವ ಮೂಲಕ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದೆ.









ಭಾರತ ಈಗಾಗಲೇ ಕೈಗೊಂಡಿರುವ ಕೆಲವು ಕ್ರಮಗಳು ಪಾಕಿಸ್ತಾನವನ್ನು ಆರ್ಥಿಕವಾಗಿ ಮತ್ತು ಇತರ ಕೆಲವು ಆಯಾಮಗಳಲ್ಲಿ ಪ್ರಪಾತಕ್ಕೆ ತಳ್ಳಿದೆ. ಆ ಮೂಲಕ, ಉಗ್ರಗಾಮಿಗಳನ್ನು ಪೋಷಿಸುವ ಪಾಕಿಸ್ತಾನ ಸೇನೆ ಹಾಗೂ ಗುಪ್ತಚರ ಸಂಸ್ಥೆ ಐಎಸ್‌ಐಯ ಊಹೆಗೂ ನಿಲುಕದ ತಿರುಗೇಟನ್ನು ಭಾರತ ನೀಡುತ್ತಿದೆ.

ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ 9 ಕ್ರಮಗಳು: ಅಟ್ಟಾರಿ-ವಾಘಾ ಗಡಿ ಬಂದ್.ಭಾರತೀಯ ರಾಜತಾಂತ್ರಿಕರ ವಾಪಸ್ ಕರೆಸಿಕೊಂಡಿರುವುದು.ಪಾಕಿಸ್ತಾನಿ ಹೈಕಮಿಷನ್‌ ಸಿಬ್ಬಂದಿ ಸಂಖ್ಯೆಯಲ್ಲಿ ಕಡಿತ.ಸಾರ್ಕ್ ವೀಸಾ ವಿನಾಯಿತಿ ನಿಷೇಧ.ಸಿಂಧೂ ನದಿ ನೀರು ಒಪ್ಪಂದ ರದ್ದು.ಪಾಕಿಸ್ತಾನದ ಡಿಜಿಟಲ್ ಮಾಧ್ಯಮ ವೇದಿಕೆಗಳಿಗೆ ನಿಷೇಧ.ಉಗ್ರರ ಹಾಗೂ ಭಯೋತ್ಪಾದಕರನ್ನು ಪೋಷಿಸುವವರ ವಿರುದ್ಧಯಾವುದೇ ರೀತಿಯ ಕಾರ್ಯಾಚರಣೆಗೆ ಭಾರತೀಯ ಸೇನೆಗೆ ಸಂಪೂರ್ಣ ಪರಮಾಧಿಕಾರ.ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಪ್ರತಿ ದಾಳಿ.ಪಾಕಿಸ್ತಾನದ ವಿಮಾನಗಳಿಗೆ ಭಾರತದ ವಾಯು ಪ್ರದೇಶ ನಿರ್ಬಂಧ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್