LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರಾಂಪೂರ ಗ್ರಾ.ಪಂ ಸೇರಿದಂತೆ ವಿವಿಧ ಕಾಮಗಾರಿ ಪರಿಶೀಲನೆ



ಬಾಗಲಕೋಟೆ, ಜುಲೈ ೨೨ : ತಾಲೂಕಿನ ರಾಮಪುರ ಗ್ರಾಮಕ್ಕೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅವರು ಮಂಗಳವಾರ ಭೇಟಿ ನೀಡಿ ರಾಂಪೂರ ಗ್ರಾಮ ಪಂಚಾಯಿತಿ, ಡಿಜಿಟಲ್ ಗ್ರಂಥಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ತಿಮ್ಮಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೇವೆಗಳ ಪ್ರಗತಿಯನ್ನು ಪರಿಶೀಲಿಸಿದರು.    
ರಾಮಪುರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಂಚಾಯಿತಿಯ ಆಡಳಿತಾತ್ಮಕ ಕಾರ್ಯನಿರ್ವಹಣೆ, ಸಾರ್ವಜನಿಕ ಸೇವೆಗಳ ವಿತರಣೆ, ಸ್ವಚ್ಛತೆ, ತೆರಿಗೆ ಸಂಗ್ರಹಣೆ, ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನ ಹಾಗೂ ದಾಖಲೆಗಳ ನಿರ್ವಹಣೆಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಗ್ರಾಮಸ್ಥರಿಗೆ ಗುಣಮಟ್ಟದ ಸೇವೆಗಳನ್ನು ಸಮಯಕ್ಕೆ ಸರಿಯಾಗಿ ಒದಗಿಸುವಂತೆ ಸೂಚಿಸಿದರು. ನಂತರ ಡಿಜಿಟಲ್ ಗ್ರಂಥಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಯುವಜನರಿಗೆ ಲಭ್ಯವಿರುವ ಸೌಲಭ್ಯಗಳು, ಕಂಪ್ಯೂಟರ್ ವ್ಯವಸ್ಥೆ, ಇಂಟರ್ನೆಟ್ ಸಂಪರ್ಕ ಹಾಗೂ ಓದುಗರ ಬಳಕೆಯ ಕುರಿತು ಮಾಹಿತಿ ಪಡೆದು, ಡಿಜಿಟಲ್ ಗ್ರಂಥಾಲಯವನ್ನು ಹೆಚ್ಚು ಪರಿಣಾಮಕಾರಿಯಾಗಿ ಬಳಸುವಂತೆ ಪ್ರೋತ್ಸಾಹಿಸಿದರು.
ರಾಮಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ವೇಳೆ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಆರೋಗ್ಯ ಸೇವೆಗಳು, ವೈದ್ಯಕೀಯ ಸಿಬ್ಬಂದಿಯ ಹಾಜರಾತಿ, ಔಷಧಗಳ ಲಭ್ಯತೆ, ಸ್ವಚ್ಛತೆ ಹಾಗೂ ರೋಗಿಗಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿದರು. ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಯಾವುದೇ ನಿರ್ಲಕ್ಷ್ಯ ತೋರಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಳಿಕ ತಿಮ್ಮಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಗೆ ಭೇಟಿ ನೀಡಿ ಶಾಲೆಯ ಶೈಕ್ಷಣಿಕ ವಾತಾವರಣ, ಮೂಲಸೌಕರ್ಯ, ವಿದ್ಯಾರ್ಥಿಗಳ ಹಾಜರಾತಿ ಹಾಗೂ ಮಧ್ಯಾಹ್ನ ಉಪಾಹಾರ ವ್ಯವಸ್ಥೆಯನ್ನು ಪರಿಶೀಲಿಸಿದರು. ಇದೇ ವೇಳೆ ಶಾಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕಂಪೌಂಡ್ ಗೋಡೆ ಕಾಮಗಾರಿಯನ್ನು ವೀಕ್ಷಿಸಿ, ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿತ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಇಒ ಗಜಾನನ ಬಾಳೆ ಅವರು ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಪಂಚಾಯಿತಿ ಸೇವೆಗಳ ಗುಣಮಟ್ಟವನ್ನು ಮತ್ತಷ್ಟು ಉತ್ತಮಗೊಳಿಸಲು ಜಿಲ್ಲಾಡಳಿತ ಬದ್ಧವಾಗಿದ್ದು, ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸರ್ಕಾರದ ಯೋಜನೆಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸಬೇಕು ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್