LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಜಾಸ್ತಿ ಪ್ರೀತಿಗೆ ಸ್ಪೂರ್ತಿಯಾಯ್ತು  ಫೇಸ್‌ಬುಕ್ ಪೇಜ್ !



       ಪೂರ್ಣ ಶ್ರೀ ಎಂಟರ್‌ಪ್ರೈಸಸ್ ಮುಖಾಂತರ ಸಿದ್ದಗೊಂಡಿರುವ  ’ಜಾಸ್ತಿ ಪ್ರೀತಿ’ ಚಿತ್ರದ ಟ್ರೇಲರ್ ಹಾಗೂ ಹಾಡು ಬಿಡುಗಡೆ ಸಮಾರಂಭ ಬೆಂಗಳೂರಿನ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು.


    'ಜಾಸ್ತಿ ಪ್ರೀತಿ' ಹೆಸರಿಗೆ ’ಮಿಡಿದ ಹೃದಯಗಳ ಮೌನರಾಗ’ ಎಂಬ ಅಡಿಬರಹವಿದೆ. ರಿಯಲ್ ಎಸ್ಟೇಟ್ ಉದ್ಯಮಿ ಶಿವರಾಂ ಕೊಡತಿ ಬಂಡವಾಳ ಹೂಡಿರುವುದು ಹೊಸ ಅನುಭವ. ಎಸ್‌ಆರ್‌ಕೆ ಕೃಷ್ಣಪ್ಪ ಸರ್ಜಾಪುರ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಸಿನಿಮಾಕ್ಕೆ ಕಥೆ,ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿರುವುದು ಅರುಣ್ ಮಾನವ್.

       ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು "ಪ್ರೀತಿಯ ಅವ್ಯಕ್ತಭಾವ 'ಜಾಸ್ತಿ ಪ್ರೀತಿ'ಯಾಗಿದೆ. ಸಿನಿಮಾ ಹುಟ್ಟಲು ಫೇಸ್‌ಬುಕ್ ಪೇಜ್ ಕಾರಣವಾಗಿದೆ. ಹೀಗೆ ಒಮ್ಮೆ ಎಫ್‌ಬಿ ನೋಡುವಾಗ ಒಂದು ಹುಡುಗಿಯ ಫೋಟೋ ನೋಡಿ ಕರುಳು ಚುರ್ ಅನಿಸಿತು. ಅದರ ಏಳೆಯನ್ನು ತೆಗೆದುಕೊಂಡು ಕಾಲ್ಪನಿಕ ಚಿತ್ರಕಥೆಯನ್ನು ಬರೆಯಲಾಯಿತು. ಎಲ್ಲಿಯೂ ನೋಡದೆ ಇರತಕ್ಕಂತ ಪ್ರೀತಿಯನ್ನು ಇದರಲ್ಲಿ ನೋಡಬಹುದು. ಒಳ್ಳೆ ಮರವಾಗಬಲ್ಲ ಜಾಸ್ತಿ ಪ್ರೀತಿ ಆಗಿದೆ. ಯಾವುದೇ ವ್ಯಕ್ತಿಗೆ ಸಂಬಂದಪಟ್ಟಿರುವುದಿಲ್ಲ. ಬಂದಿರತಕ್ಕಂತ ಕಥೆಗಳು ಇರುವುದಿಲ್ಲ. ಯಾವ ದೃಶ್ಯವು ಹಿಂದಿನ ಚಿತ್ರದಲ್ಲಿ ನೋಡಿದಂತೆ ಭಾಸವಾಗುವುದಿಲ್ಲ. ವಿಭಿನ್ನ ನಿರೂಪಣೆ ಹೊಂದಿದ್ದು, ಪ್ರಾರಂಭದಿಂದ ಕೊನೆತನಕ ಊಹಿಸಲು ಕಷ್ಟವಾಗುತ್ತದೆ. ಪ್ರೀತಿಯನ್ನು ತೋರ್ಪಡಿಸಲಿಕ್ಕೆ ಆಗುವುದಿಲ್ಲವೋ, ಆಗ ಸೋತು ಹೋಗುತ್ತಾನೆ. ಅದನ್ನು ಇಲ್ಲಿ ಕಾಣಬಹುದು. ಬೆಂಗಳೂರು, ಬಂಗಾರಪೇಟೆ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಆದಷ್ಟು ಬೇಗನೆ ತೆರೆಗೆ ತರಲು ಯೋಜನೆ ರೂಪಿಸಲಾಗಿದೆ. ಮಾಧ್ಯಮದ ಸಹಕಾರ ಬೇಕು" ಎಂದು ಕೋರಿದರು.

     ಸಾಹಿತಿ, ಕವಿ, ಚಿಂತಕ, ವಿಮರ್ಶಕ ಹಾಗೂ ಚಿತ್ರ ನಿರ್ದೇಶಕ ಎಲ್ ಎನ್ ಮುಕುಂದರಾಜ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇವರು ಹೇಳುವಂತೆ ಕನ್ನಡ "ಸಿನಿಮಾ ಬೇರೆ ಬೇರೆ ರೀತಿಯಲ್ಲಿ ಬೆಳೆದಿದೆ. ಅನೇಕ ಚಿತ್ರಗಳು ಜಗತ್ತಿನ ಸಿನಿಮಾಗಳ ಎದುರು ಸವಾಲು ಒಡ್ಡುವಂತ ಕೆಲಸ ಮಾಡುತ್ತಿದೆ. ಅದೇ ಸಾಲಿನಲ್ಲಿ ಜಾಸ್ತಿ ಪ್ರೀತಿ ಸೇರುತ್ತದೆ. ಸಿನಿಮಾ ಎಂಬುದು ಉದ್ಯಮವಾಗಿದೆ. ನೂರಾರು ಜನರ ಪ್ರತಿಭೆ ಮತ್ತು ಪರಿಶ್ರಮ ಒಳಗೊಂಡಿದೆ. ತಮಿಳು, ಮಲೆಯಾಳಂ ಚಿತ್ರಗಳಲ್ಲಿ ಅಲ್ಲಿನ ಪ್ರಸಿದ್ದ ಕವಿಗಳು ಸಾಹಿತ್ಯ ರಚಿಸುತ್ತಾರೆ. ನಮ್ಮಲ್ಲಿ ಕಡಿಮೆ ಇದ್ದಾರೆ. ಕುಮಾರವ್ಯಾಸ ಹೆಸರಿನಲ್ಲಿ ಚಿತ್ರಪ್ರಶಸ್ತಿ ನೀಡಬೇಕು.  ಅರುಣ್‌ಗೆ ಭವಿಷ್ಯವಿದೆ. ಒಳ್ಳೆಯದಾಗಲಿ" ಎಂದರು.

      "ಇಂಟೆನ್ಸ್ ಲವ್‌ಸ್ಟೋರಿ ಏಳೆ ತುಂಬಾ ಚೆನ್ನಾಗಿ ಬಂದಿದೆ. ಸಿನಿಮಾಗೆ ಏನು ಕಮ್ಮಿ ಮಾಡಿಲ್ಲ. ಎಲ್ಲರೂ ಫ್ಯಾಶನ್‌ನಿಂದ ಮಾಡಿದ್ದಾರೆ. ಇಂದು ಚಿತ್ರಮಂದಿರಗಳಿಗೆ ಪ್ರೇಕ್ಷಕರ ಕೊರತೆ ಇದೆ. ಯಾರು ಸಿನಿಮಾ ನೋಡಲು ಬರುತ್ತಿಲ್ಲ. ಆದರೂ ನಿರ್ಮಾಪಕರು ಧೈರ್ಯ ಮಾಡಿ, ನಂಬಿಕೆಯಿಂದ ಹಣ ಹೂಡಿದ್ದಾರೆ. ಒಳ್ಳೆ ಅಂಶಗಳು ಇರುವುದರಿಂದ ಚಿತ್ರ ನೋಡಲು ಬರುತ್ತಾರೆಂಬ ವಿಶ್ವಾಸವಿದೆ. ನನ್ನ ಅಭಿನಯದ ಕೆಲವು ಚಿತ್ರಗಳು ಬಿಡುಗಡೆಯಾಗಬೇಕಿದೆ. ನನಗೂ ಬ್ರೇಕ್ ಸಿಗಬೇಕಂಬ ಹಂಬಲವಿದೆ. ಇದರಿಂದ ಸಿಗಬಹುದು. ಅದಕ್ಕಾಗಿ ಕಾಯ್ತಾ ಇದ್ದೇನೆ" ಎಂಬುದು ನಾಯಕ ಧರ್ಮಕೀರ್ತಿರಾಜ್ ನುಡಿಯಾಗಿತ್ತು.

      ಕೃಷಿ ತಪಂಡ ನಾಯಕಿ. ಮತ್ತೋಂದು ಜೋಡಿಗಳಾಗಿ ಮುರಳಿರಾಮ್-ಶೋಭರಾಣಿ. ಇವರೊಂದಿಗೆ ಬ್ಯಾಂಕ್‌ಜನಾರ್ಧನ್, ಸುಚೇಂದ್ರಪ್ರಸಾದ್, ಮೈಸೂರು ರಮಾನಂದ್, ಎಂ.ಎನ್.ಲಕ್ಷೀದೇವಿ, ಮಧುಮಂದಗೆರೆ ಮುಂತಾದವರು ನಟಿಸಿದ್ದಾರೆ. ವಿನೀತ್ ರಾಜ್ ಮೆನನ್ ಆರು ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ಸತೀಶ್.ಸಿ.ಎಸ್-ಬಿ ಆರ್ ಮಲ್ಲಿಕಾರ್ಜುನ್, ಸಂಕಲನ ವೆಂಕಟೇಶ್.ಯುಡಿವಿ, ನೃತ್ಯ ಗೋವಿಂದ್ ವಿ ಮಾಲೂರು, ಸಾಹಸ ಕುಂಗು ಫೂ ಚಂದ್ರು. ಜೇಂಕಾರ್ ಮ್ಯೂಸಿಕ್ ಸಂಸ್ಥೆಯು ಆಡಿಯೋ ಹಕ್ಕುಗಳನ್ನು ಪಡೆದುಕೊಂಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್