LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

 ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಸೂಚನೆ

ವಿಜಯಪುರ,ಜೂ.೧೫: ಜಿಲ್ಲೆಯಲ್ಲಿ ಮುಂಬರುವ ಜೂನ್ ೨೭-ನಾಡಪ್ರಭು ಕೆಂಪೇಗೌಡ ಜಯಂತಿ,ಜೂನ್ ೨೭ರಂದು ನಾಡಪ್ರಭು ಕೆಂಪೇಗೌಡ ಹಾಗೂ ಜುಲೈ ೦೨ರಂದು ಡಾ. ಫ.ಗು. ಹಳಕಟ್ಟಿ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಯಾವುದೇ ಲೋಪವಿಲ್ಲದೆ, ಅತ್ಯಂತ ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಯೋಜಿಸುವಂತೆ ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ  ಜಯಂತಿ ಕಾರ್ಯಕ್ರಮಗಳ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು. ಜಯಂತಿ ಕಾರ್ಯಕ್ರಮಗಳ ಯಶಸ್ವಿ ಆಯೋಜನೆಗಾಗಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ವಹಿಸಲಾಗಿರುವ ಜವಾಬ್ದಾರಿಗಳನ್ನು ಎಲ್ಲರೂ ಸಮರ್ಪಕವಾಗಿ ನಿರ್ವಹಿಸಬೇಕು. ಕಾರ್ಯಕ್ರಮಗಳ ನಿಮಿತ್ತ ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮುಂಚಿತವಾಗಿಯೇ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಜೂನ್ ೨೭-ನಾಡಪ್ರಭು ಕೆಂಪೇಗೌಡ ಜಯಂತಿ,ಜೂನ್ ೨೭ರಂದು ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮದೊಂದಿಗೆ ಆಚರಿಸಲಾಗುವುದು. ಜುಲೈ ೦೨-ಡಾ. ಫ.ಗು. ಹಳಕಟ್ಟಿ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಉಪನ್ಯಾಸ ಕಾರ್ಯಕ್ರಮದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗುವುದು. ಜುಲೈ ೨೯-ಹಡಪದ ಅಪ್ಪಣ್ಣ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ವಿವರಿಸಿದರು.
ಈ ಪೂರ್ವಭಾವಿ ಸಭೆಯಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣನವರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪುಂಡಲೀಕ ಮಾನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಎಸ್. ಅಶೋಕಕುಮಾರ, ಎಸ್.ಜಿ. ಸುರಪುರ, ಎ.ಬಿ. ಅಂಕದ, ಗಿರೀಶ ಕುಲಕರ್ಣಿ, ದೇವೇಂದ್ರ ಮೆರೇಕರ, ಡಾ. ಎಂ.ಆರ್. ಗುರಿಕರ, ವಿದ್ಯಾವತಿ ಅಂಕಲಗಿ,ಸೋಮನಗೌಡ ಕಲ್ಲೂರ,ಭೀಮರಾಯ ಜಿಗಜಿಣಗಿ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಮಾಜದ ಮುಖಂಡರು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ