LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

17 ಭಾರತೀಯರನ್ನು ಖಂಡಿತ ಬಿಡುಗಡೆ ಮಾಡುತ್ತೇವೆ: ಸಚಿವ ಜೈಶಂಕರ್​​ ಕರೆ ಗೌರವಿಸಿದ ಇರಾನ್

ಇರಾನ್,ಏಪ್ರಿಲ 15:   ಹಾರ್ಮುಜ್ ಜಲಮಾರ್ಗದ ಬಳಿ ಇಸ್ರೇಲ್​​ ಧ್ವಜವಿದ್ದ ಸರಕು ಸಾಗಿಸುವ ಹುಡಗನ್ನು ವಶಪಡಿಸಿಕೊಂಡಿತ್ತು. ಇದರಲ್ಲಿ 17 ಭಾರತೀಯ ಸಿಬ್ಬಂದಿಗಳಿದ್ದು, ಇದೀಗ ಅವರನ್ನು ಭೇಟಿ ಮಾಡಲು ಅವಕಾಶ ನೀಡಬೇಕು ಹಾಗೂ ಅವರನ್ನು ಬಿಡುಗಡೆ ಮಾಡಬೇಕು ಎಂದು ಭಾರತದ ವಿದೇಶಾಂಗ ಸಚಿವ ಎಸ್​​​. ಜೈಶಂಕರ್​​​ ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದುಲ್ಲಾಹಿಯಾನ್ ಅವರಿಗೆ ಕರೆ ಮಾಡಿದ್ದಾರೆ. ಜೈಶಂಕರ್​​ ಅವರ ಮಾತನ್ನು ಗೌರವಿಸಿ ಇರಾನ್ ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಭೇಟಿ ಮಾಡಲು ಅವಕಾಶ ನೀಡಿದೆ.

ಅಮೀರ್-ಅಬ್ದುಲ್ಲಾಹಿಯಾನ್ ಮತ್ತು ಎಸ್ ಜೈಶಂಕರ್ ಅವರು ಭಾನುವಾರ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಈ ಸಮಯದಲ್ಲಿ 17 ಭಾರತೀಯ ಸಿಬ್ಬಂದಿಗಳನ್ನು ಭಾರತ ಭೇಟಿ ಮಾಡಬಹುದು ಎಂದು ಹೇಳಿದ್ದಾರೆ. ಈ ಮಾತುಕತೆಯಲ್ಲಿ MSC ಏರೀಸ್‌ ಹಡಗಿನಲ್ಲಿರುವ ಭಾರತೀಯರನ್ನು ಬಿಡುಗಡೆ ಮಾಡುವಂತೆ ಕೂಡ ಕೇಳಿಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಮೀರ್-ಅಬ್ದುಲ್ಲಾಹಿಯಾನ್ ಖಂಡಿತವಾಗಿ ಜೈಶಂಕರ್​​ ನಿಮ್ಮ ಮನವಿಯನ್ನು ಗೌರವಿಸುತ್ತೇವೆ. ಈಗಾಗಗಲೇ ನಾವು ವಶಪಡಿಸಿಕೊಂಡಿರುವ ಹಡಗಿನ ಎಲ್ಲ ಮಾಹಿತಿಯನ್ನು ಪಡೆಯುತ್ತಿದ್ದೇವೆ. ನಿಮ್ಮ ಅಧಿಕಾರಿಗಳು ಹಡಗಿನಲ್ಲಿದ್ದ 17 ಭಾರತೀಯರನ್ನು ಭೇಟಿಯಾಗಲು ಅವಕಾಶ ನೀಡುತ್ತೇವೆ ಎಂದು ಹೇಳಿದ್ದಾರೆ. ಇನ್ನು ಇರಾನ್​​​​ ಈ ಕ್ರಮದಿಂದ ಜೈಶಂಕರ್ ಅವರು 17 ಭಾರತೀಯ ಸಿಬ್ಬಂದಿಗಳ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ

ಈಗಾಗಲೇ ಇರಾನ್ ಮತ್ತು ಇಸ್ರೇಲ್​​ ನಡುವೆ ಯುದ್ಧ ಸ್ಥಿತಿ ಇದೆ. ಈ ಕಾರಣದಿಂದ ಇರಾನ್​​​ ಇಸ್ರೇಲ್​​ನ ಈ ಹಡಗನ್ನು ವಶಪಡಿಸಿಕೊಂಡಿದೆ. ಆದರೆ ಅದರಲ್ಲಿರುವ ಎಲ್ಲ ಸಿಬ್ಬಂದಿ ಯೋಗಕ್ಷೇಮ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಇನ್ನು ಈ ಬಗ್ಗೆ ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ಪ್ರಕಾರ ಅಡ್ರಿಯೆನ್ನೆ ವ್ಯಾಟ್ಸನ್ ಹಡಗಿನ ಸಿಬ್ಬಂದಿ ಭಾರತೀಯ, ಫಿಲಿಪಿನೋ, ಪಾಕಿಸ್ತಾನಿ, ರಷ್ಯನ್ ಮತ್ತು ಎಸ್ಟೋನಿಯನ್ ಪ್ರಜೆಗಳು ಎಂದು ಗುರುತಿಸಿದೆ. ಇದರ ಜತೆಗೆ ಭಾರತ ಇರಾನ್​​ ವಶದಲ್ಲಿರುವ ಭಾರತೀಯರನ್ನು ಬಿಡುಗಡೆ ಮಾಡಲು ಇರಾನ್​​ ಜತೆಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್