LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಇರಾನ್‌ನ ಪರಮಾಣು ನೆಲೆಗಳ ಮೇಲೆ ಇಸ್ರೇಲ್‌ ಅಟ್ಯಾಕ್‌ : ನಸುಕಿನ ಜಾವ ಇರಾನ್‌ ಶೇಕ್‌!

ಜೆರುಸಲೇಂ, ಜೂನ್ 13: ಇರಾನ್‌ನ ಪರಮಾಣು ನೆಲೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್  ಸೇನೆಯು ಶುಕ್ರವಾರ ಬೆಳಗಿನ ಜಾವ ಹಠಾತ್ ದಾಳಿ ನಡೆಸಿದೆ. ಇರಾನ್ ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವು ಕಡೆಗಳಲ್ಲಿ ಸ್ಫೋಟದ ಸದ್ದುಗಳು ಕೇಳಿವೆ. ಈ ದಾಳಿಯಲ್ಲಿ ಇರಾನ್ ಸೇನೆಯ ಪ್ರಮುಖ ಅಧಿಕಾರಿಗಳು, ಪರಮಾಣು ವಿಜ್ಞಾನಿಗಳು ಸೇರಿದಂತೆ ಅನೇಕ ಪ್ರಮುಖರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ದಾಳಿಯಲ್ಲಿ ಇರಾನ್‌ಗೆ ಭಾರೀ ಹಾನಿಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ.









ಪರಮಾಣು ಚಟುವಟಿಕೆಗಳನ್ನು ಇರಾನ್ ಹೆಚ್ಚಿಸಿರುವುದು ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿತ್ತು. ಅದರ ಬೆನ್ನಲ್ಲೇ ಈ ದಾಳಿ ನಡೆದಿದೆ. ಇರಾನ್ ಶೀಘ್ರದಲ್ಲೇ ಅತ್ಯಂತ ಬಲಿಷ್ಠ ಪರಮಾಣು ಶಕ್ತಿಯಾಗಲಿದೆ ಎಂಬ ವರದಿಗಳು ಇತ್ತೀಚೆಗೆ ನಿರಂತರವಾಗಿ ಬಿತ್ತರವಾಗುತ್ತಿದ್ದವು. ಇರಾನ್ ಈ ದಿಕ್ಕಿನಲ್ಲಿ ವೇಗವಾಗಿ ಕೆಲಸ ಮಾಡುತ್ತಿತ್ತು. ಇದರ ಬೆನ್ನಲ್ಲೇ ಇಸ್ರೇಲ್ ಈಗ ಆ ಪರಮಾಣು ನೆಲೆಗಳನ್ನು ಗುರಿಯಾಗಿಸಿಕೊಂಡಿದೆ.

ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ತಯಾರಿಸಲು ಬಿಡುವುದಿಲ್ಲ ಎಂದು ಇಸ್ರೇಲ್ ಕೆಲವು ವರ್ಷಗಳಿಂದಲೂ ಎಚ್ಚರಿಕೆ ನೀಡುತ್ತಾ ಬಂದಿತ್ತು. ಇದೀಗ ಇಸ್ರೇಲ್ ಅದರಂತೆಯೇ ಕಾರ್ಯಪ್ರವೃತ್ತವಾಗಿದೆ. ಇರಾನ್ ಪರಮಾಣು ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST