LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಯುದ್ಧದಿಂದ ಇಸ್ರೇಲ್ ಜಿಡಿಪಿ ಶೇ 1.4ರಷ್ಟು ಕುಸಿತ


ಜೆರುಸಲೇಂ : ಇಸ್ರೇಲ್​ನ ಆರ್ಥಿಕತೆಯಲ್ಲಿ ತೀವ್ರ ಕುಸಿತ ಕಂಡು ಬಂದಿದೆ ಎಂದು ದೇಶದ ಸೆಂಟ್ರಲ್ ಬ್ಯೂರೋ ಆಫ್ ಸ್ಟ್ಯಾಟಿಸ್ಟಿಕ್ಸ್ ಭಾನುವಾರ ಬಿಡುಗಡೆ ಮಾಡಿದ ವರದಿ ತಿಳಿಸಿದೆ. ಮೊದಲ ತ್ರೈಮಾಸಿಕದಲ್ಲಿ ತೀವ್ರ ಏರಿಕೆಯ ನಂತರ ದೇಶದ ಆರ್ಥಿಕತೆಯು ತೀವ್ರವಾಗಿ ಕುಸಿದಿದೆ ಎಂದು ವರದಿ ತಿಳಿಸಿದೆ. ಮೊದಲ ತ್ರೈಮಾಸಿಕದ ಜಿಡಿಪಿಗೆ ಹೋಲಿಸಿದರೆ ಎರಡನೇ ತ್ರೈಮಾಸಿಕದಲ್ಲಿ ಇಸ್ರೇಲ್​ನ ಜಿಡಿಪಿ ಶೇಕಡಾ 1.2 ರಷ್ಟು ಏರಿಕೆಯಾಗಿ ಶೇಕಡಾ 17.3 ಕ್ಕೆ ತಲುಪಿತ್ತು. ವಾರ್ಷಿಕ ಆಧಾರದ ಮೇಲೆ, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಇಸ್ರೇಲ್ ಜಿಡಿಪಿ ಶೇಕಡಾ 1.4 ರಷ್ಟು ಕುಸಿತ ಕಂಡಿದೆ.


ಇಸ್ರೇಲ್​ನಲ್ಲಿ ಖಾಸಗಿ ಬಳಕೆಯ ವೆಚ್ಚವು ಎರಡನೇ ತ್ರೈಮಾಸಿಕದಲ್ಲಿ ಶೇಕಡಾ 12 ರಷ್ಟು ಹೆಚ್ಚಾಗಿದೆ ಎಂದು ಡೇಟಾ ತೋರಿಸಿದೆ. ಇದು ಮೊದಲ ತ್ರೈಮಾಸಿಕದಲ್ಲಿ ದಾಖಲಾಗಿದ್ದ ಶೇಕಡಾ 26.3 ರಷ್ಟು ಏರಿಕೆಗಿಂತ ಕಡಿಮೆಯಾಗಿದೆ. ಕಳೆದ ವರ್ಷ ಅಕ್ಟೋಬರ್ 7 ರಂದು ನಡೆದ ಹಮಾಸ್ ದಾಳಿಯ ಪರಿಣಾಮಗಳಿಂದ ಇಸ್ರೇಲಿ ಆರ್ಥಿಕತೆಯು ಚೇತರಿಸಿಕೊಂಡಿಲ್ಲವೆಂಬುದನ್ನು ಈ ಕಡಿಮೆ ಬೆಳವಣಿಗೆಯ ಅಂಕಿಅಂಶಗಳು ಸೂಚಿಸುತ್ತವೆ ಎಂದು ಯೆಡಿಯೋತ್ ಅಹ್ರೋನೋತ್ ಪತ್ರಿಕೆಯ ಹಿರಿಯ ವಿಶ್ಲೇಷಕ ಗ್ಯಾಡ್ ಲಿಯೋರ್ ಕ್ಸಿನ್ಹುವಾಗೆ ತಿಳಿಸಿದರು.


ಸರಕು ಮತ್ತು ಸೇವೆಗಳ ಆಮದುಗಳು ಕೂಡ ಕಡಿಮೆಯಾಗಿದ್ದು, ಮೊದಲ ತ್ರೈಮಾಸಿಕದಲ್ಲಿ ಶೇಕಡಾ 32.7 ರಷ್ಟು ಹೆಚ್ಚಳದ ನಂತರ ಎರಡನೇ ತ್ರೈಮಾಸಿಕದಲ್ಲಿ ಆಮದುಗಳು ಶೇಕಡಾ 11.1 ರಷ್ಟು ಕಡಿಮೆಯಾಗಿವೆ. ವಜ್ರಗಳು ಮತ್ತು ಸ್ಟಾರ್ಟ್ ಅಪ್ ಕಂಪನಿಗಳನ್ನು ಹೊರತುಪಡಿಸಿ ಸರಕು ಮತ್ತು ಸೇವೆಗಳ ರಫ್ತು ಎರಡನೇ ತ್ರೈಮಾಸಿಕದಲ್ಲಿ ಶೇಕಡಾ 7.1 ರಷ್ಟು ಕಡಿಮೆಯಾಗಿದೆ. ಮೊದಲ ತ್ರೈಮಾಸಿಕದಲ್ಲಿ ಇದು ಶೇಕಡಾ 10.4 ರಷ್ಟು ಇಳಿಕೆಯಾಗಿತ್ತು.






ಅಕ್ಟೋಬರ್ 7, 2023 ರಿಂದ ಇಸ್ರೇಲ್​ ಗಾಜಾ ಪಟ್ಟಿಯಲ್ಲಿ ಯುದ್ಧ ನಡೆಸುತ್ತಿದೆ. ಈ ಯುದ್ಧದಲ್ಲಿ ಈವರೆಗೆ ಸುಮಾರು 40,100 ಜನ ಸಾವಿಗೀಡಾಗಿದ್ದು, 92,600 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಪ್ರಸ್ತುತ ಯುದ್ಧಕ್ಕೆ ಮಾಡಲಾಗುತ್ತಿರುವ ವೆಚ್ಚ ಕೂಡ ಇಸ್ರೇಲ್​ ಆರ್ಥಿಕತೆ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ.


ಗಾಜಾ ಯುದ್ಧದ ಬಗ್ಗೆ ಹಮಾಸ್ ಜೊತೆ ನಡೆಯುತ್ತಿರುವ ಮಾತುಕತೆಯಲ್ಲಿ ಕದನ ವಿರಾಮ ಒಪ್ಪಂದಕ್ಕೆ ಬರುವ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ಇಸ್ರೇಲ್ ವಿರೋಧ ಪಕ್ಷದ ನಾಯಕ ಯೈರ್ ಲ್ಯಾಪಿಡ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಒತ್ತಾಯಿಸಿದ್ದಾರೆ. "ಇದು ಕೊನೆಯ ಅವಕಾಶವಾಗಬಹುದು ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಇಂದು ಬೆಳಿಗ್ಗೆ ಹೇಳಿದ್ದಾರೆ. ಈ ಅವಕಾಶ ಕಳೆದುಕೊಳ್ಳಬೇಡಿ ಎಂದು ನೆತನ್ಯಾಹು ಅವರಿಗೆ ಮನವಿ" ಎಂದು ಯೈರ್ ಲ್ಯಾಪಿಡ್ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಬರೆದಿದ್ದಾರೆ



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ