LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಆನೆಗುಂದಿ ಉತ್ಸವ ಮರೆತ ಸರ್ಕಾರ: ಅಧಿವೇಶನದಲ್ಲಿ ಜನಾರ್ದನ ರೆಡ್ಡಿಯ ಅಬ್ಬರದ ಪ್ರಶ್ನೆ







ಬಳ್ಳಾರಿ: 20.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಳೆದ ಮೂರು ವರ್ಷಗಳಲ್ಲಿ ವಿಜಯನಗರ ಸಾಮ್ರಾಜ್ಯದ ಮೊದಲ ರಾಜಧಾನಿಯಾದ ಆನೆಗುಂದಿಯಲ್ಲಿ ಉತ್ಸವವನ್ನು ಕೇವಲ ಒಂದೇ ಬಾರಿ ಮಾತ್ರ ಆಚರಿಸಿರುವುದು ರಾಜ್ಯದ ಸಾಂಸ್ಕೃತಿಕ ಪರಂಪರೆಯ ಮೇಲಿನ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಮಾಜಿ ಸಚಿವ ಹಾಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸಭಾ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಅವರು, “ವಿಜಯನಗರ ಸಾಮ್ರಾಜ್ಯದ ಇತಿಹಾಸವನ್ನು ಪ್ರತಿಬಿಂಬಿಸುವ ಆನೆಗುಂದಿ ಉತ್ಸವವು ಕೇವಲ ಒಂದು ಕಾರ್ಯಕ್ರಮವಲ್ಲ, ಅದು ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಗೌರವದ ಪ್ರತೀಕ. ಆದರೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಈ ಮಹತ್ವದ ಉತ್ಸವವೇ ಮಂಕಾಗುತ್ತಿದೆ” ಎಂದು ಕಿಡಿಕಾರಿದರು.

ಕಳೆದ ವರ್ಷ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಆನೆಗುಂದಿ ಉತ್ಸವವನ್ನು ಭರ್ಜರಿಯಾಗಿ ಆಚರಿಸುವುದಾಗಿ ಸಾರ್ವಜನಿಕವಾಗಿ ಭರವಸೆ ನೀಡಿದ್ದರು. ಆದರೆ ಆ ಭರವಸೆ ಕಾಗದದಲ್ಲೇ ಉಳಿದುಕೊಂಡಿದ್ದು, ಕಾರ್ಯರೂಪಕ್ಕೆ ಬರದೇ ಇರುವುದನ್ನು ರೆಡ್ಡಿ ಅವರು ತೀವ್ರವಾಗಿ ಪ್ರಶ್ನಿಸಿದರು.

“ಜನತೆಗೆ ಕೊಟ್ಟ ಮಾತು ಉಳಿಸಿಕೊಳ್ಳುವುದು ಸರ್ಕಾರದ ಕರ್ತವ್ಯ. ಉತ್ಸವವನ್ನು ನಡೆಸುವುದಾಗಿ ಹೇಳಿ ನಂತರ ಮೌನವಾಗಿರುವುದು ಜನರನ್ನು ಮೋಸಗೊಳಿಸುವಂತಾಗಿದೆ. ಇದು ಸರ್ಕಾರದ ನಿರ್ಲಕ್ಷ್ಯವೋ, ಅಸಮರ್ಥತೆಯೋ?” ಎಂದು ಅವರು ಪ್ರಶ್ನೆಗಳ ಮಳೆಗರೆದರು.

ಇದೇ ವೇಳೆ, ಈ ವರ್ಷವಾದರೂ ಆನೆಗುಂದಿ ಉತ್ಸವವನ್ನು ಆಯೋಜಿಸುವ ಬಗ್ಗೆ ಸರ್ಕಾರದ ಸ್ಪಷ್ಟ ನಿಲುವೇನು ಎಂಬುದನ್ನು ತಿಳಿಯಲು ಅವರು ಸಭೆಯಲ್ಲಿ ನೇರ ಪ್ರಶ್ನೆ ಕೇಳಿದರು. “ಇನ್ನೂ ಎಷ್ಟು ಕಾಲ ಆನೆಗುಂದಿಯಂತಹ ಐತಿಹಾಸಿಕ ನೆಲೆಯನ್ನು ಕಡೆಗಣಿಸಲಾಗುತ್ತದೆ? ಈ ವರ್ಷ ಉತ್ಸವ ನಡೆಯುತ್ತದೆಯೇ ಇಲ್ಲವೇ?” ಎಂದು ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಸ್ಥಳೀಯರ ಆಶಾಭಾವನೆಗೂ ಧಕ್ಕೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. “ಆನೆಗುಂದಿ ಉತ್ಸವವು ಸ್ಥಳೀಯ ಜನತೆಗೆ ಆರ್ಥಿಕ ಹಾಗೂ ಸಾಂಸ್ಕೃತಿಕವಾಗಿ ದೊಡ್ಡ ಶಕ್ತಿಯಾಗಿತ್ತು. ಆದರೆ ಕಳೆದ ಮೂರು ವರ್ಷಗಳಿಂದ ಸರ್ಕಾರದ ನಿರ್ಲಕ್ಷ್ಯದಿಂದ ಜನರಲ್ಲಿ ನಿರಾಸೆ ಮನೆ ಮಾಡಿದೆ” ಎಂದು ಹೇಳಿದರು.

ಸರ್ಕಾರ ತಕ್ಷಣವೇ ಸ್ಪಷ್ಟ ನಿರ್ಧಾರ ತೆಗೆದುಕೊಂಡು ಆನೆಗುಂದಿ ಉತ್ಸವವನ್ನು ಭರ್ಜರಿಯಾಗಿ ನಡೆಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಜನರ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಎಚ್ಚರಿಕೆ ನೀಡಿದರು.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ