LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ತೆಕ್ಕಲಕೋಟೆಯಲ್ಲಿ ಜಂಟಿ ದಾಳಿ – ಇಬ್ಬರು ಬಾಲಕಾರ್ಮಿಕರ ರಕ್ಷಣೆ


ಬಳ್ಳಾರಿ,ಜೂ.30 : ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ವಿವಿಧ ಇಲಾಖೆಗಳ ಜಂಟಿ ಆಶ್ರಯದಲ್ಲಿ ಸೋಮವಾರ ಹಠಾತ್ ದಾಳಿ ನಡೆಸಿ, ಇಬ್ಬರು ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಹಾಗೂ ಚೈಲ್ಡ್ಲೈನ್ ಸಹಯೋಗದೊಂದಿಗೆ ತೆಕ್ಕಲಕೋಟೆ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ನಡೆಸಲಾಯಿತು.
ನಂತರ ಪಟ್ಟಣದ ವ್ಯಾಪ್ತಿಯಲ್ಲಿ ಬರುವ ಗ್ಯಾರೇಜ್, ಹೋಟೆಲ್, ಬೇಕರಿ, ಕಿರಾಣಿ ಅಂಗಡಿ, ಬಟ್ಟೆ ಅಂಗಡಿ ಸೇರಿದಂತೆ ಸುಮಾರು 20 ಉದ್ದಿಮೆಗಳ ಮೇಲೆ ಅಧಿಕಾರಿಗಳ ತಂಡ ಜಂಟಿ ದಾಳಿ ನಡೆಸಿತು.
*ಮರು ದಾಖಲಾತಿ ಮತ್ತು ಕಾನೂನು ಕ್ರಮ:*
ದಾಳಿಯ ವೇಳೆ ಪತ್ತೆಯಾದ ಇಬ್ಬರು ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ಅಧಿಕಾರಿಗಳು ಸುರಕ್ಷಿತವಾಗಿ ರಕ್ಷಿಸಿ, ಕೆಲಸದಿಂದ ಬಿಡುಗಡೆಗೊಳಿಸಿದರು. ಬಳಿಕ ಆ ಮಕ್ಕಳನ್ನು ಅವರು ಈ ಹಿಂದೆ ವ್ಯಾಸಂಗ ಮಾಡುತ್ತಿದ್ದ ಶಾಲೆಗೇ ಮರು ದಾಖಲಿಸುವ ಮೂಲಕ ಶಿಕ್ಷಣದ ಮುಖ್ಯವಾಹಿನಿಗೆ ತರಲಾಯಿತು. ಸದ್ಯ ಮಕ್ಕಳ ವಯಸ್ಸಿನ ದಾಖಲಾತಿಗಳನ್ನು ಪಡೆದುಕೊಳ್ಳಲಾಗುತ್ತಿದ್ದು, ಕಾನೂನು ಉಲ್ಲಂಘಿಸಿದ ಅಂಗಡಿ ಮಾಲೀಕರ ವಿರುದ್ಧ ಸಂಬAಧಪಟ್ಟ ಪೊಲೀಸ್ ಠಾಣೆಯಲ್ಲಿ ಬಾಲಕಾರ್ಮಿಕ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಯ ಜೊತೆಗೆ, ಪಟ್ಟಣದ ಅಂಗಡಿ ಮತ್ತು ಉದ್ದಿಮೆಗಳ ಮಾಲೀಕರಿಗೆ ಯಾವುದೇ ಕಾರಣಕ್ಕೂ ಬಾಲಕಾರ್ಮಿಕರನ್ನು ಹಾಗೂ ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳಬಾರದು ಎಂದು ಎಚ್ಚರಿಕೆ ನೀಡಲಾಯಿತು. ಈ ಕುರಿತು ಜಾಗೃತಿ ಪೋಸ್ಟರ್‌ಗಳನ್ನು ವಿತರಿಸುವ ಮೂಲಕ ಮಾಲೀಕರಲ್ಲಿ ಅರಿವು ಮೂಡಿಸಲಾಯಿತು.
ಈ ಟಾಸ್ಕ್ ಫೋರ್ಸ್ ಕಾರ್ಯಾಚರಣೆಯಲ್ಲಿ ಸಿರುಗುಪ್ಪ ಕಾರ್ಮಿಕ ನಿರೀಕ್ಷಕ ತಿರುಮಲೇಶ್, ತೆಕ್ಕಲಕೋಟೆ ಪಟ್ಟಣ ಪಂಚಾಯತಿಯ ಮುಖ್ಯ ಅಧಿಕಾರಿ ಪರಶುರಾಮ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಂ. ಸಿದ್ದಯ್ಯ, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ. ಮೌನೇಶ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ರೆಡ್ಡಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಾರಾಯಣ ಸ್ವಾಮಿ, ಕಂದಾಯ ನಿರೀಕ್ಷಕ ಎನ್.ವಿ. ಪ್ರಸನ್ನ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಹೇಮಾವತಿ, ಪಟ್ಟಣ ಪಂಚಾಯತಿ ಸಿಬ್ಬಂದಿ ಸುಮಲತಾ, ಮಕ್ಕಳ ಸಹಾಯವಾಣಿ (ಚೈಲ್ಡ್ಲೈನ್) ಸಿಬ್ಬಂದಿ ಕಾರ್ತಿಕ್, ಪ್ಯಾರಾ ಲೀಗಲ್ ವಾಲೆಂಟಿಯರ್ ಲಕ್ಷಿö್ಮ ಸೇರಿದಂತೆ ಇತರರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್