LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಹುಬ್ಬಳ್ಳಿಯಿಂದ 3 ಹೊಸ ನಿಯಮಿತ ರೈಲುಗಳಿಗೆ ಜೋಶಿ ಚಾಲನೆ

ಹುಬ್ಬಳ್ಳಿ: 

ಹುಬ್ಬಳ್ಳಿ ಮತ್ತು ಉತ್ತರ ಕರ್ನಾಟಕ ಭಾಗಕ್ಕೆ ರೈಲ್ವೆ ಇಲಾಖೆ ಬಂಪರ್ ಕೊಡುಗೆ ನೀಡಿದ್ದು, 3 ಹೊಸ ವಿಶೇಷ ರೈಲುಗಳನ್ನು ಖಾಯಂಗೊಳಿಸಲು ಸೋಮವಾರ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹಸಿರು ನಿಶಾನೆ ತೋರಿಸಿದ್ದಾರೆ.

ಉತ್ತರ ಕರ್ನಾಟಕದ ಜನರ ದಶಕಗಳ ಬೇಡಿಕೆಗೆ ಮನ್ನಣೆ ಸಿಕ್ಕಿದ್ದು, ಈ ಹಿಂದೆ ವಿಶೇಷ ರೈಲುಗಳಾಗಿ ಸಂಚರಿಸುತ್ತಿದ್ದ 3 ರೈಲುಗಳನ್ನು ಈಗ ಕಾಯಂ ಆಗಿ ಓಡಿಸಲು ಹಸಿರು ನಿಶಾನೆ ತೋರಿಸಲಾಗಿದೆ. ಇದರಿಂದ ಹಬ್ಬ ಮತ್ತು ರಜೆಯ ದಿನಗಳಲ್ಲಿ ಟಿಕೆಟ್ ಅಭಾವ ತಗ್ಗಲಿದ್ದು, ಟಿಕೆಟ್ ದರದಲ್ಲೂ ಸುಮಾರು 25-30% ರಷ್ಟು ಇಳಿಕೆಯಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹೇಳಿದರು.

ಇಂದು ಇಲ್ಲಿನ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ ಹುಬ್ಬಳ್ಳಿ -ವಿಜಯಪುರ ನೂತನ ನಿಯಮಿತ ರೈಲಿಗೆ (ಮೆಮು ರೈಲು, MEMU-Mainline Electric Multiple Unit.) (ರೈಲು ಸಂಖ್ಯೆ: 66501) ಹಸಿರು ನಿಶಾನೆ ತೋರಿಸಿ ಮಾತನಾಡಿದರು. ಹೈದರಾಬಾದ್‌ಗೆ ನೇರ ಸಂಪರ್ಕ ಕಲ್ಪಿಸುವ ರೈಲುಗಳು ಸೇರಿದಂತೆ ಒಟ್ಟು 3 ವಿಶೇಷ ರೈಲುಗಳನ್ನು ಖಾಯಂ ಮಾಡಲಾಗಿದೆ. ಈ ರೈಲುಗಳ ಓಡಾಟದಿಂದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಪ್ರಯಾಣಿಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ಉದ್ಯೋಗಿಗಳಿಗೆ ದೊಡ್ಡ ಅನುಕೂಲವಾಗಲಿದೆ.news_1778563822_0_448.webp

ಉತ್ತರ ಕರ್ನಾಟಕದ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ನೈಋತ್ಯ ರೈಲ್ವೆಯ ಪ್ರಮುಖ ವಿಶೇಷ ರೈಲುಗಳನ್ನು ಇಂದಿನಿಂದ 'ನಿಯಮಿತ ಸೇವೆ' ಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಇದು ಉತ್ತರ ಕರ್ನಾಟಕದ ಜಿಲ್ಲೆಗಳ ಸಂಪರ್ಕ ಕ್ರಾಂತಿಗೆ ಹೊಸ ವೇಗ ನೀಡಲಿದೆ ಎಂದು ಹೇಳಿದರು.

ವ್ಯಾಪಾರಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ

ಹುಬ್ಬಳ್ಳಿ ವಿಜಯಪುರ ನಡುವೆ ಸಂಚರಿಸುವ ರೈಲು ಸಂಖ್ಯೆ 56919/20 ಹಾಗೂ 66501/02 ರೈಲುಗಳು ಇನ್ನು ಮುಂದೆ ನಿಯಮಿತವಾಗಿ ಸಂಚರಿಸಲಿದ್ದು ಇದರಿಂದ ಹುಬ್ಬಳ್ಳಿ, ಗದಗ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ನಿತ್ಯ ಪ್ರಯಾಣಿಕರಿಗೆ, ವ್ಯಾಪಾರಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ರೈಲುಗಳ ನಿಯಮಿತ ಸೇವೆಯಿಂದಾಗಿ ಪ್ರಯಾಣಿಕರಿಗೆ ಆರ್ಥಿಕವಾಗಿಯೂ ದೊಡ್ಡ ಲಾಭವಾಗಲಿದೆ. ಸಾಮಾನ್ಯ ದರ್ಜೆಯ ಪ್ರಯಾಣಿಕರಿಗೆ ಸೂಪ‌ರ್ ಫಾಸ್ಟ್ ಹೆಚ್ಚುವರಿ ಶುಲ್ಕ ಇರುವುದಿಲ್ಲ.

ಮೀಸಲು ದರ್ಜೆಯ ಟಿಕೆಟ್ ದರದಲ್ಲಿ ಸುಮಾರು ಶೇ30 ರಷ್ಟು ಕಡಿತವಾಗಲಿದ್ದು, ಪ್ರಯಾಣವು ಅತ್ಯಂತ ಸುಲಭ ದರದಲ್ಲಿ ಸಿಗಲಿದೆ. ಹೃಷಿಕೇಶಕ್ಕೆ ನೇರ ರೈಲು ಸಂಪರ್ಕ ರೈಲು ಸಂಖ್ಯೆ 17363/64 ಹುಬ್ಬಳ್ಳಿ - ಯೋಗ ನಗರಿ ಹೃಷಿಕೇಶ ವಾರಕ್ಕೊಮ್ಮೆ ಸಂಚರಿಸುವ ರೈಲು ಈಗ ನಿಯಮಿತ ಸೇವೆಯಾಗಿದ್ದು, ಉತ್ತರ ಭಾರತಕ್ಕೆ ತೆರಳುವ ಯಾತ್ರಾರ್ಥಿಗಳು ಹಾಗೂ ಪ್ರವಾಸಿಗರಿಗೆ ವರ್ಷಪೂರ್ತಿ ಸುಲಭ ಪ್ರಯಾಣ ಒದಗಿಸಲಿದೆ ಎಂದೂ ಹೇಳಿದರಲ್ಲದೇ, ಅಮೃತ ಭಾರತ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಅಳ್ಳಾವರ ರೈಲು ನಿಲ್ದಾಣ ಈಗ ಉದ್ಘಾಟನೆಗೆ ಸಿದ್ದವಾಗಿದೆ ಸದ್ಯದಲ್ಲೇ ಲೋಕಾರ್ಪಣೆಗೊಳ್ಳಲಿದೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತೀಯ ರೈಲ್ವೇ ವ್ಯವಸ್ಥೆ ದೇಶದ ಅಭಿವೃದ್ಧಿಗೆ ಮತ್ತಷ್ಟು ವೇಗ ತುಂಬುತ್ತಿದ್ದು, ನೂತನ ರೈಲು ಸೇವೆಗಳ ಮೂಲಕ ಸಾಮಾನ್ಯ ಜನರ ಪ್ರಯಾಣ ಸುಗಮ, ಸುರಕ್ಷಿತ ಹಾಗೂ ವೇಗದಾಯಕವಾಗುತ್ತಿದೆ ಎಂದೂ ಸಚಿವ ಜೋಶಿಯವರು ಹೇಳಿದರು.

ಈ ಸಂದರ್ಭದಲ್ಲಿ ಮೈಋತ್ಯ ರೈಲ್ವೆ ಮಹಾ ಪ್ರಬಂಧಕ ಪಿ. ಅನಂತ, ಸೇರಿದಂತೆ ಇನ್ನಿತರ ರೈಲ್ವೇ ಅಧಿಕಾರಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್