LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನ್ಯಾಯಾಂಗ ತನಿಖೆಗೆ ಆಧುನಿಕ ತಂತ್ರಜ್ಞಾನ ಅಗತ್ಯ: ಜಿಲ್ಲಾ ನ್ಯಾಯಾಧೀಶ ಸಿದ್ದಲಿಂಗ ಪ್ರಭು



ಬಳ್ಳಾರಿ,ಜು.31 ಅಮಾಯಕ ಮಕ್ಕಳನ್ನು ಮತ್ತು ದುರ್ಬಲರನ್ನು ಬಲಿಪಶು ಮಾಡುವ ಮಾನವ ಕಳ್ಳಸಾಗಾಣಿಕೆ ಜಾಲಗಳನ್ನು ಭೇದಿಸಲು ಸಾಂಪ್ರದಾಯಿಕ ತನಿಖೆ ಸಾಲದು. ತನಿಖೆಯಲ್ಲಿ ಎಲೆಕ್ಟಾçನಿಕ್ ಸಾಕ್ಷö್ಯಗಳು ಹಾಗೂ ಡಿಎನ್‌ಎ ತಂತ್ರಜ್ಞಾನದ ಬಳಕೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿದ್ದಲಿಂಗ ಪ್ರಭು ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಭಾಗಿದಾರರ ಇಲಾಖೆಗಳ ಸಹಯೋಗದೊಂದಿಗೆ ನಗರದ ಎಸ್‌ಪಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ವಿಶ್ವ ಮಾನವ ಕಳ್ಳಸಾಗಣೆ ತಡೆ ದಿನ' ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕರಾವಳಿ ಭಾಗದಲ್ಲಿ ಖೋಟಾ ನೋಟು ಚಲಾವಣೆಗಾಗಿ ಮಕ್ಕಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಜಾಲಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಸ್ಥಳ ಮಹಜರ್ ಮತ್ತು ವಿಚಾರಣೆಯ ಸಂಪೂರ್ಣ ವಿಡಿಯೋಗ್ರಫಿ ಕಡ್ಡಾಯವಾಗಬೇಕು. ಎಫ್‌ಐಆರ್ ದಾಖಲಾದ ತಕ್ಷಣವೇ ಆನ್‌ಲೈನ್ ಮೂಲಕ ನ್ಯಾಯಾಲಯಕ್ಕೆ ಸಲ್ಲಿಸುವ ವ್ಯವಸ್ಥೆ ಜಾರಿಯಾದಾಗ ಸಾಕ್ಷö್ಯನಾಶ ತಡೆಯಲು ಸಾಧ್ಯ. ಕೇವಲ ಮಕ್ಕಳನ್ನು ಬಂಧಿಸುವುದಕ್ಕಿAತ ಅವರ ಹಿಂದಿರುವ ನಿಜವಾದ ಸೂತ್ರಧಾರರನ್ನು ಪತ್ತೆಹಚ್ಚುವುದು ತನಿಖೆಯ ಮುಖ್ಯ ಗುರಿಯಾಗಬೇಕು ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಅವರು, ಮಾನವ ಕಳ್ಳಸಾಗಾಣಿಕೆ ತಡೆಗೆ ವಿವಿಧ ಇಲಾಖೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪ್ರಕರಣಗಳ ಪರಿಣಾಮಕಾರಿ ತನಿಖೆ, ಕಾನೂನುಗಳ ಸರಿಯಾದ ಅನುಷ್ಠಾನ ಮತ್ತು ನಿಖರ ಸಾಕ್ಷಾö್ಯಧಾರ ಸಂಗ್ರಹಣೆಯ ಮೂಲಕ ನ್ಯಾಯಾಲಯದಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.
ಮಾನವ ಕಳ್ಳಸಾಗಣೆಯಂತಹ ಗಂಭೀರ ಸಾಮಾಜಿಕ ಅಪರಾಧ ಮತ್ತು ಪಿಡುಗುಗಳನ್ನು ನಿರ್ಮೂಲನೆ ಮಾಡಲು ಸರ್ಕಾರಿ ಇಲಾಖೆಗಳು, ಪೊಲೀಸ್ ವ್ಯವಸ್ಥೆ, ನ್ಯಾಯಾಂಗ ಹಾಗೂ ಸಾರ್ವಜನಿಕರು ಒಟ್ಟಾಗಿ ಶ್ರಮಿಸುವುದು ಅತ್ಯಗತ್ಯ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ ಅವರು ಉಪಸ್ಥಿತರಿದ್ದು, ಮಾನವ ಕಳ್ಳಸಾಗಣಿಕೆ ತಡೆ ಕುರಿತು ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜಿಲ್ಲಾ ನ್ಯಾಯಾಲಯದ ವಕೀಲರಾದ ಶಿವಲೀಲ ಅವರು ಮಾತನಾಡಿ, ಕುಟುಂಬ, ಶಾಲೆ-ಕಾಲೇಜುಗಳು ಮತ್ತು ಸಾರ್ವಜನಿಕರ ಜಂಟಿ ಭಾಗವಹಿಸುವಿಕೆಯಿಂದ ಮಾತ್ರ ಈ ಸಾಮಾಜಿಕ ಪಿಡುಗನ್ನು ಪೂರ್ಣವಾಗಿ ನಿಯಂತ್ರಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಆರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ ಎಂ. ಅವರು ಸ್ವಾಗತ ಕೋರಿ ಪ್ರಾಸ್ತಾವಿಕವಾಗಿ ಮಾತನಾಡಿ, ಆಮಿಷಗಳಿಗೆ ಒಳಗಾಗಿ ಲೈಂಗಿಕ ಶೋಷಣೆ, ಬಲವಂತದ ದುಡಿಮೆ ಹಾಗೂ ಭಿಕ್ಷಾಟನೆಗೆ ತಳ್ಳಲ್ಪಡುವ ದುರ್ಬಲ ವರ್ಗದವರನ್ನು ರಕ್ಷಿಸಲು ವ್ಯಾಪಕ ಜಾಗೃತಿ ಅಗತ್ಯ ಎಂದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು,

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್