LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ವ್ಯವಸಾಯದ ಸಮಸ್ಯೆ ಸಾರುವ ಕಬಂಧ ಲಿರಿಕಲ್ ಸಾಂಗ್ ರಿಲೀಸ್ 







     ಕುಂಜಾರ ಫಿಲಂಸ್ ಲಾಂಛನದಲ್ಲಿ ಸಿದ್ದಗೊಂಡಿರುವ ’ಕಬಂಧ’ ಚಿತ್ರದ ಗೆಳೆತನ ಕುರಿತಾದ ಲಿರಿಕಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು.


      ಕೆ.ಕಲ್ಯಾಣ್ ಸಾಹಿತ್ಯ, ಸಾನಿತೇಜ್ ಸಂಗೀತದಲ್ಲಿ ವಾಸುಕಿವೈಭವ್ ಧ್ವನಿಯಾಗಿದ್ದಾರೆ. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಸತ್ಯನಾಥ್ ಮಾತನಾಡಿ "ಕೆಲವು ವರ್ಷಗಳ ಹಿಂದೆ ನಡೆದ ಪ್ರಕರಣ ರಾಜ್ಯಾದ್ಯಂತ ಭಯ ಹುಟ್ಟಿಸಿತ್ತು. ಇದನ್ನೆ ಬಳಸಿಕೊಂಡು ಒಂದಷ್ಟು ಹಾರರ್ ರೂಪಕೊಟ್ಟು ಸನ್ನಿವೇಶಗಳನ್ನು ಸೃಷ್ಟಿಸಲಾಗಿದೆ.


ಅದರಲ್ಲೂ ವ್ಯವಸಾಯದ ಸಮಸ್ಯೆ ನಮಗೆ ಗೊತ್ತಿಲ್ಲದೆ ತುಂಬಾ ವರ್ಷದಿಂದ ಕಾಡ್ತಾ ಇದೆ. ಅದು ನಮ್ಮನೆವರೆಗೂ, ನಮ್ಮೋಳಗೂ ಹಾಗೂ ದೇಹಕ್ಕೂ ಬಂದಿದೆ. ಈಗಲೂ ಇದರ ಕಡೆ ಗಮನಹರಿಸದೆ ಹೋದರೆ ಮುಂದೆ ಅಪಾಯ ಕಟ್ಟಿಟ್ಟ ಬುತ್ತಿಯಾಗುತ್ತದೆ. ಇಂತಹುದೆ ವಿಚಾರ, ವಿಷಯಗಳನ್ನು ಹೆಕ್ಕಿಕೊಂಡು ಬೋಧನೆ ಮಾಡದೆ, ಮನರಂಜನೆ ಮೂಲಕ ಹೇಳುವ ಪ್ರಯತ್ನ ಮಾಡಲಾಗಿದೆ. ಒಂದು ಸನ್ನಿವೇಶದಲ್ಲಿ ಮಗುವೊಂದು ’ನಂಗಾಗಿದ್ದೆ ನಿಂಗಾಗುತ್ತೆ’ ಎಂಬ ಡೈಲಾಗ್ ಕಥೆಗೆ ಪೂರಕವಾಗಿದೆ. ಅದು ಏನೆಂಬುದನ್ನು ಚಿತ್ರಮಂದಿರಕ್ಕೆ ಬಂದರೆ ತಿಳಿಯುತ್ತದೆ" ಎಂದರು.


      ನಾಯಕನಾಗಿ ಪ್ರಸಾದ್‌ವಶಿಷ. ನಾಯಕಿಯಾಗಿ ಪ್ರಿಯಾಂಕಮಲ್ಲಾಡಿ,  ಕೃಷಿಕರಾಗಿರುವ ಕಿಶೋರ್‌ಕುಮಾರ್ ರೀಲ್‌ ನಲ್ಲಿಯೂ ಅದೇ ಪಾತ್ರವನ್ನು ನಿರ್ವಹಿಸಿರುವುದಾಗಿ ಹೇಳಿಕೊಂಡರು. ಉಳಿದಂತೆ ಅವಿನಾಶ್, ನಿರ್ದೇಶಕ ಯೋಗರಾಜಭಟ್, ವಂದನ, ವಚನ, ವಿಶಾಲ್, ನಾಗಾರ್ಜುನಸ್ವಾಮಿ, ಚಂದ್ರು, ಛಾಯಾಶ್ರೀ, ಪ್ರಶಾಂತ್‌ಸಿದ್ದಿ ಮುಂತಾದವರು ಅಭಿನಯಿಸಿದ್ದಾರೆ.


ಛಾಯಾಗ್ರಹಣ ವಿಷ್ಣುಪ್ರಸಾದ್, ಸಂಕಲನ ಸತ್ಯಜಿತ್‌ಸಿದ್ದಕಾಂತ್ ಅವರದಾಗಿದೆ. ದಾವಣಗೆರೆ, ತುಮಕೂರು ಮುಂತಾದ ಕಡೆಗಳಲ್ಲಿ 40 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿ, ಶೇಕಡ 80ರಷ್ಟು ರಾತ್ರಿ ವೇಳೆ ಸೆರೆ ಹಿಡಿದಿರುವುದು ವಿಶೇಷ. ಶುಕ್ರ ಫಿಲಿಂಸ್‌ನ ಸೋಮಣ್ಣ ಮುಖಾಂತರ ಸಿನಿಮಾವು ಸದ್ಯದಲ್ಲೆ ತೆರೆಗೆ ಬರುವ ಸಾಧ್ಯತೆ ಇದೆ.




















Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್