LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕಳ್ಳಭಟ್ಟಿ  ಮುಕ್ತ ಜಿಲ್ಲೆಯಾಗಿಸಿ : ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ

ವಿಜಯನಗರ(ಹೊಸಪೇಟೆ) ಮಾರ್ಚ್ 27:ಜಿಲ್ಲೆಯಲ್ಲಿ ಕಳ್ಳಬಟ್ಟಿ ಸಾರಾಯಿ ತಯಾರಿಕೆ, ಅಕ್ರಮ ಮದ್ಯ ಮಾರಾಟ ಮತ್ತು ಸಾಗಣೆಯನ್ನು ಸಂಪೂರ್ಣವಾಗಿ ನಿಯಂತ್ರಿಸಿ ಕಳ್ಳಬಟ್ಟಿ ಮುಕ್ತ ಜಿಲ್ಲೆಯಾಗಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಳ್ಳಭಟ್ಟಿ ನಿರ್ಮೂಲನೆ ಕುರಿತ ಆಯೋಜಿಸಲಾಗಿದ್ದ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳ್ಳಭಟ್ಟಿ ತಯಾರಿಕೆ ಮತ್ತು ಅಕ್ರಮ ಮದ್ಯದ ವಹಿವಾಟಿನ ವಿರುದ್ಧ ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ಅಕ್ರಮ ಮದ್ಯ ಮಾರಾಟ ಅಥವಾ ಸಾಗಾಟ ಮಾಡುವುದು ಕಂಡು ಬಂದಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೆ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು. ನೆರೆ ಜಿಲ್ಲೆ ಅಥವಾ ರಾಜ್ಯಗಳಿಂದ ಅಕ್ರಮವಾಗಿ ಮದ್ಯ ಸಾಗಣೆಯಾಗುವ ಸಂಭವವಿರುವುದರಿಂದ, ಜಿಲ್ಲೆಯ ಗಡಿ ಭಾಗದ ಚೆಕ್ ಪೋಸ್ಟ್ಗಳಲ್ಲಿ ತಪಾಸಣೆ ತೀವ್ರಗೊಳಿಸಬೇಕು. ಅಬಕಾರಿ ಇಲಾಖೆ ಮತ್ತು ಪೊಲೀಸ್ ಇಲಾಖೆಯು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಸಂಶಯಾಸ್ಪದ ಸ್ಥಳಗಳ ಮೇಲೆ ನಿರಂತರವಾಗಿ ದಾಳಿ ನಡೆಸಬೇಕು. ಗ್ರಾಮೀಣ ಭಾಗದ ಹೊಟೇಲ್, ಗೂಡಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವುದನ್ನು ತಡೆಯಲು ಬೀಟ್ ಪೊಲೀಸರು ಮತ್ತು ಅಬಕಾರಿ ನಿರೀಕ್ಷಕರು ಹೆಚ್ಚಿನ ಕಾರ್ಯಾಚರಣೆ ನಡೆಸಬೇಕು. ಅಕ್ರಮ ಮದ್ಯ ಸಾಗಣೆಯಲ್ಲಿ ತೊಡಗಿರುವ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಮಾತ್ರವಲ್ಲದೆ, ಪ್ರಕರಣ ದಾಖಲಿಸಬೇಕು. ಜಿಲ್ಲೆಯ ಜನರ ಆರೋಗ್ಯ ಮತ್ತು ಶಾಂತಿ ಕಾಪಾಡುವುದು ನಮ್ಮ ಆದ್ಯತೆ. ಕಳ್ಳಭಟ್ಟಿ ಸಾರಾಯಿ ತಯಾರಿಕೆ ಅಥವಾ ಅಕ್ರಮ ಮಾರಾಟದ ಮಾಡುವುದು ಕಂಡು ಬಂದಲ್ಲಿ ಸಾರ್ವಜನಿಕರು ನಿರ್ಭಯವಾಗಿ ಮಾಹಿತಿ ನೀಡಬೇಕು. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದರು.
ಅಬಕಾರಿ ಉಪ ಆಯುಕ್ತ ಡಾ. ಮಾದೇಶ್ ಮಾತನಾಡಿ, ಜಿಲ್ಲೆಯಲ್ಲಿ ಪರವಾನಗಿ ಪಡೆದ 160 ಮದ್ಯದಂಗಡಿಗಳು ಇದ್ದು, ಇವುಗಳ ಮೇಲೆ ಸದಾ ನಿಗಾವಹಿಸಲಾಗಿದೆ. ಅಲ್ಲದೇ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾಲ ಕಾಲಕ್ಕೆ ಸರಿಯಾಗಿ ಕಳ್ಳಭಟ್ಟಿ ಸಾರಾಯಿ ನಿರ್ಮೂಲನೆ, ಅಕ್ರಮ ಮದ್ಯ ಮಾರಾಟ ಮತ್ತು ಸಾಗಣೆ ಕುರಿತು ಗ್ರಾಮ ಸಭೆ, ಜಾಗೃತಿ ಕಾರ್ಯಗಾರ ಆಯೋಜಿಸಲಾಗುತ್ತಿದೆ. ಜಿಲ್ಲೆಯಲ್ಲಿ 2010 ರಿಂದ ಈ ವರೆಗೆ ಯಾವುದೇ ರೀತಿಯ ಪ್ರಕರಣಗಳು ದಾಖಲಾಗಿಲ್ಲ. ಆದರೆ ನೆರೆ ರಾಜ್ಯಗಳಾದ ಗೋವಾ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಿಂದ ಯಾವುದೇ ಪರವಾನಗಿ ಇಲ್ಲದೆ ಸಾಗಾಟ ಮಾಡುತ್ತಿದ್ದನ್ನು ತಡೆದು 2023 ರಿಂದ 2026ರ ಫೆಬ್ರವರಿ ಅಂತ್ಯಕ್ಕೆ 7 ಪ್ರಕರಣ ದಾಖಲಿಸಿ, 293.45ಲೀಟರ್ ಮದ್ಯ ವಶ ಪಡಿಸಿಕೊಳ್ಳಲಾಗಿದೆ. ಅದರಂತೆ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ದಾಳಿ ನಡೆಸಲಾಗಿದ್ದು, 2024 ಜುಲೈ ನಿಂದ 2025ರ ಜೂನ್ ವರೆಗೆ 892 ಕಡೆ ಹಾಗೂ 2025ರ ಜುಲೈ ನಿಂದ ಫೆಬ್ರವರಿ 16ರವರೆಗೆ 872 ಸೇರಿ ಒಟ್ಟು 1764 ಕಡೆ ದಾಳಿ ನಡೆಸಿ 755 ಲೀಟರ್ ಮದ್ಯ ಮತ್ತು 152ಲೀ ಬಿಯರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಸಹಾಯಕ ಆಯುಕ್ತರು ವಿವೇಕಾನಂದ ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್