LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮೇ.೨೪ ರಂದು ಕನಕ ಶ್ರೀ ಪ್ರತಿಭಾ ಪುರಸ್ಕಾರ ಸಮಾರಂಭ

ರಾಮದುರ್ಗ: ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ತಾಲೂಕು ಕನಕ ನೌಕರರ ಸಂಘದ ಸಹಯೋಗದಲ್ಲಿ ಮೇ.೨೪ ರಂದು ಬೆಳಿಗ್ಗೆ ೧೦ಕ್ಕೆ ಸ್ಥಳೀಯ ಪ್ರಗತಿ ಕಲ್ಯಾಣ ಮಂಟಪದಲ್ಲಿ ಕನಕಶ್ರೀ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ಪಡಿಯಪ್ಪ ಕ್ವಾರಿ ತಿಳಿಸಿದರು.
ಸ್ಥಳೀಯ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕಳೆದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.೮೦ ಕ್ಕಿಂತ ಹೆಚ್ಚು ಅಂಕ ಪಡೆದ ಕುಡುಬ ಸಮಾಜದ ವಿದ್ಯಾರ್ಥಿಗಳಿಗೆ ಕನಕಶ್ರೀ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ ನಕಲು ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬೇಕೆಂದು ತಿಳಿಸಿದರು.
ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಲ್ಲಿ ತಾಲೂಕಿನ ಪ್ರಥಮ ಸ್ಥಾನ ಪಡೆದ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ ಹಾಗೂ ನಗದು ಪುರಸ್ಕಾರ ನೀಡಲಾಗುವುದು ಎಂದು ಅವರು ತಿಳಿಸಿದರು.
ಧಾರವಾಡದ ಮನಸೂರ ಮಠದ ಬಸವರಾಜ ದೇವರು ಕಾರ್ಯಕ್ರಮದ ಸಾನಿಧ್ಯ ವಹಿಸುವರು. ಧಾರವಾಡದ ಸ್ಪರ್ಧಾ ಜೀನಿಯಸ್ ಅಕಾಡೆಮಿಯ  ಐ.ಎ.ಎಸ್ ಹಾಗೂ ಕೆ.ಎ.ಎಸ್ ತರಬೇತುದಾರ ಸಿದ್ದಣ್ಣ ದಳವಾಯಿ ಅವರು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದು, ತಾಲೂಕಿನ ಎಲ್ಲ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿದರು.
ಕನಕಶ್ರೀ ಪ್ರತಿಭಾ ಪುರಸ್ಕಾರದ ಹೆಚ್ಚಿನ ಮಾಹಿತಿಗೆ ಕೆ.ಎನ್. ಯಡ್ರಾಂವಿ ೯೬೬೩೧೭೪೦೧೬, ಎಂ.ಎಸ್.ಗವನ್ನವರ ೯೪೮೧೫೫೯೮೭೮ ಸಂಪರ್ಕಿಸಲು ಕೋರಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಕುರುಬ ಸಮಾಜದ ಮುಖಂಡರಾದ ಅಶೋಕ ಮೆಟಗುಡ್ಡ, ಈರಣ್ಣ ಕಾಮನ್ನವರ, ಮಲ್ಲಪ್ಪ ಸೋಮಗೊಂಡ, ಸೋಮಶೇಖರ ಸಿದ್ಲಿಂಗಪ್ಪನವರ, ಕೆಂಪಣ್ಣ ಕ್ವಾರಿ, ತಿಪ್ಪಣ್ಣ ಪೂಜಾರ, ನಾಗೇಶ ಚಂದರಗಿ, ಬಾಲನಗೌಡ ಬಾಗೋಜಿ, ಹನಮಂತಗೌಡ ಪಾಟೀಲ, ಎಂ.ಎಸ್.ಗವನ್ನವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್