ಧಾರವಾಡ,27 : ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಮೀಪದ ಕಾರ್ಗಿಲ್ ಸ್ತೂಪದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪಾಂಜಲಿ ಅರ್ಪಿಸಿದರು. ಈ ಸಂದರ್ಭದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ, 24 ಎನ್‌ಸಿಸಿ ಬಟಾಲಿಯನ್‌ನ ಅಧಿಕಾರಿಗಳು, ಕೆಡೆಟ್‌ಗಳು, ಮಾಜಿ ಸೈನಿಕರು, ವೀರ ನಾರಿಯರು, ವೀರ ಮಾತೆಯರು, ಅವಲಂಬಿತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.