LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ: ಎಂಜನಿಯರಿಂಗ್‌, ಅಗ್ರಿ, ನರ್ಸಿಂಗ್‌ನಲ್ಲಿ ಮೂವರು ಟಾಪರ್‌

ಬೆಂಗಳೂರು, ಮೇ 24: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025 ರಫಲಿತಾಂಶ ಕೊನೆಗೂ ಪ್ರಕಟವಾಗಿದೆ. ಫಲಿತಾಂಶ ಪ್ರಕಟವಾಗಬಹುದು ಎಂದು ಈ ವಾರ ಆರಂಭದಿಂದಲೂ ವಿದ್ಯಾರ್ಥಿಗಳು ಕಾಯುತ್ತಿದ್ದರು. ಇದೀಗ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್  ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಿದರು. ಸಿಇಟಿ ಪರೀಕ್ಷೆಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಪೈಕಿ 3,11,000 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು ಎಂದು ಸಚಿವ ಸುಧಾಕರ್ ಹೇಳಿದರು.

ಸಿಇಟಿ ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿ ಚೈತ್ಯನ್ಯ ಸಿಬಿಎಸ್​​ಇ ಶಾಲೆಯ ಭವೇಶ್ ಜಯಂತಿ (98.67%) ಮೊದಲ ರ್ಯಾಂಕ್ ಗಳಿಸಿದ್ದಾರೆ. ಚೈತನ್ಯ ಟೆಕ್ನೋ ಸ್ಕೂಲ್, ಕನಕಪುರ ರಸ್ತೆ ಉತ್ತರಹಳ್ಳಿ ಇದರ ವಿದ್ಯಾರ್ಥಿ ಸಾತ್ವಿಕ್ ಬಿರಾದರ್ (99.33%) ಎರಡನೇ ರ್ಯಾಂಕ್ ಗಳಿಸಿದ್ದಾರೆ ಎಂದು ಸಚಿವರು ತಿಳಿಸಿದರು. ದಿನೇಶ್ ಗೋಮತಿ ಶಂಕರ್ ಅರುಣಾಚಲಂ 3ನೇ ರ್ಯಾಂಕ್ (99%) ಗಳಿಸಿದ್ದಾರೆ.

ಅಗ್ರಿಕಲ್ಚರ್ ವಿಭಾಗದಲ್ಲಿ ಅಕ್ಷಯ್ ಎಂ ಪ್ರಥಮ ಸ್ಥಾನ, ಸಾಯಿಶ್ ಶರವಣ ಪಂಡಿತ್ ದ್ವಿತೀಯ ಸ್ಥಾನ ಹಾಗೂ ಸುಚಿತ್.ಪಿ. ಪ್ರಸಾದ್ ಮೂರನೇ ಸ್ಥಾನ ಗಳಿಸಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು. ಯಲಹಂಕ ನಾರಾಯಣ ಇ-ಟೆಕ್ನೋ ಕಾಲೇಜಿನ ಹರೀಶ್ ರಾಜ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಹೆಚ್​ಎಸ್​ಆರ್ ಲೇಔಟ್​​ನ ನ್ಯಾಷನಲ್ ಪಬ್ಲಿಕ್‌ಸ್ಕೂಲ್ ವಿದ್ಯಾರ್ಥಿ ಆತ್ರೇಯ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮಂಗಳೂರಿನ ವಳಚ್ಚಿಲ್​ನ ಎಕ್ಸ್​ಪರ್ಟ್ ಕಾಲೇಜಿನ ಶಾಪಲ್ ಶೆಟ್ಟಿ ಮೂರನೇ ರ್ಯಾಂಕ್ ಗಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್