LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರಾಜ್ಯ ಕರಾಟೆ ಶಿಕ್ಷಕರ ಸಂಘ : ಪ್ರಧಾನ ಕಾರ್ಯದರ್ಶಿಯಾಗಿ ಕಟ್ಟೇಸ್ವಾಮಿ ಆಯ್ಕೆ

ಉಡುಪಿ,ಮಾ,31:: ರಾಜ್ಯ ಕರಾಟೆ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಹೊಸ ಕಾರ್ಯಕಾರಿ ಸಮಿತಿ ರಚನೆಗೊಂಡಿದೆ.

ಇತ್ತೀಚೆಗೆ ಉಡುಪಿಯ ದುರ್ಗಾ ಇಂಟರನ್ಯಾಷನಲ್ ಹೋಟೇಲ್‌ನಲ್ಲಿ ನಡೆದ ಮಹಾಸಭೆಯಲ್ಲಿ ಸಂಘದ ನಿಯಮಾವಳಿಗಳ ಪ್ರಕಾರ ಚುನಾವಣೆಯನ್ನು ನಡೆಸಲಾಯಿತು. ಈ ಚುನಾವಣೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಕರಾಟೆ ಶಿಕ್ಷಕರು ಹಾಗೂ ಪ್ರತಿನಿಧಿಗಳು ಉತ್ಸಾಹದಿಂದ ಭಾಗವಹಿಸಿದರು.

ಪಾರದರ್ಶಕ ಮತ್ತು ನ್ಯಾಯಸಮ್ಮತ ರೀತಿಯಲ್ಲಿ ನಡೆದ ಚುನಾವಣೆಯಲ್ಲಿ ಮಂಗಳೂರಿನ ಮಹಮ್ಮದ್ ನದೀಮ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು, ಬಳ್ಳಾರಿ ಜಿಲ್ಲೆಯ ಕಟ್ಟೇಸ್ವಾಮಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಇದರ ಜೊತೆಗೆ ಉಪಾಧ್ಯಕ್ಷರಾಗಿ ಬೆಂಗಳೂರಿನ ಸುಂದರಮ್, ಉಡುಪಿಯ ಸತೀಶ್ ಬೆಳ್ಮಣ್ಣು, ಕಾರವಾರದ ವಿಶಾಲ್, ಕೋಶಾಧಿಕಾರಿಯಾಗಿ ವಿಜಯಪುರದ ಶಿವಕುಮಾರ್ ಶಾರದಳ್ಳಿ, ರಾಜ್ಯ ವಕ್ತಾರರಾಗಿ ಕೊಪ್ಪಳದ ಮೌನೇಶ್ ವಡ್ಡಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ಯಕಾರಿಣಿ ಸಭೆಯ ಸದಸ್ಯರಾಗಿ ವಿಜಯಪುರದ ಸುಭಾಷ್ ಮುತ್ಕೂರ್ ಹಾಗೂ ದಾವಣಗೆರೆಯ ಭಾಷ್ ಅವರುಗಳನ್ನೂ ಆಯ್ಕೆ ಮಾಡಲಾಗಿದೆ. ಇತರ ಪದಾಧಿಕಾರಿಗಳನ್ನೂ ಈ ಸಂದರ್ಭದಲ್ಲಿ ನೇಮಕ ಮಾಡಲಾಗಿದೆ.

ಹೊಸದಾಗಿ ಆಯ್ಕೆಯಾದ ಪದಾಧಿಕಾರಿಗಳು ರಾಜ್ಯದ ಕರಾಟೆ ಕ್ಷೇತ್ರದ ಅಭಿವೃದ್ಧಿಗೆ ಬದ್ಧರಾಗಿದ್ದು, ತರಬೇತಿ ಗುಣಮಟ್ಟವನ್ನು ಹೆಚ್ಚಿಸುವುದು, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಹಾಗೂ ರಾಜ್ಯ ಮಟ್ಟದ ಕ್ರೀಡಾಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸುವ ದಿಸೆಯಲ್ಲಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ.

ಸಂಘದ ಹಿರಿಯರು ಹಾಗೂ ಸದಸ್ಯರು ಹೊಸ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ತಿಳಿಸಿ, ಅವರ ಮುಂದಿನ ಕಾರ್ಯಚಟುವಟಿಕೆಗಳಿಗೆ ಶುಭಹಾರೈಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್