Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳ ಮೇಲೆ ನಿಗಾ ಇರಲಿ!

ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುಣಿಕೆ ಬಿಗಿದು ಬಾಲಕಿ ಸಾವು

ಶಿವಮೊಗ್ಗ,

ಶಿವಮೊಗ್ಗದ ಲಕ್ಕಿನಕೊಪ್ಪದಲ್ಲಿ 9 ವರ್ಷದ ಬಾಲಕಿಯೊಬ್ಬಳು ಜೋಕಾಲಿ ಆಡುವಾಗ ಕುತ್ತಿಗೆಗೆ ಕುಣಿಕೆ ಬಿಗಿದು ಸಾವನ್ನಪ್ಪಿದ್ದಾಳೆ. ಬೇಸಿಗೆ ರಜೆಗಾಗಿ ಚಿಕ್ಕಮ್ಮನ ಮನೆಗೆ ತೆರಳಿದ್ದ ಬಾಲಕಿ ಪಂಚೆ ಬಳಸಿ ಜೋಕಾಲಿ ಮಾಡಿಕೊಂಡಿದ್ದಳು. ಈ ವೇಳೆ ಕೋಣೆಯ ಬಾಗಿಲು ಹಾಕಿಕೊಂಡು ಜೋಕಾಲಿ ಆಡುತ್ತಿದ್ದಾಗ ಈ ದುರಂತ ಸಂಭವಿಸಿದೆ. ಈ ದುರ್ಘಟನೆ ಕುಟುಂಬದಲ್ಲಿ ಶೋಕ ಮೂಡಿಸಿದ್ದು, ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ಬಾಲಕಿಯನ್ನು ಶಿವಮೊಗ್ಗ (Shivamogga) ನಗರದ ವಿದ್ಯಾನಗರ ನಿವಾಸಿ ಪ್ರಣಮ್ಯ ಎಂದು ಗುರುತಿಸಲಾಗಿದೆ. ಘಟನೆಯಿಂದ ಕುಟುಂಬದಲ್ಲಿ ಶೋಕ ಮಡುಗಟ್ಟಿದ್ದು, ಪಾಲಕರ ಆಕ್ರಂದನ ಮನಕಲಕುವಂತಿದೆ.

ಕೋಣೆ ಬಾಗಿಲು ಹಾಕಿಕೊಂಡು ಜೋಕಾಲಿ ಆಡುತ್ತಿದ್ದ ಬಾಲಕಿ

ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ ಪ್ರಣಮ್ಯ ತನ್ನ ಚಿಕ್ಕಮ್ಮನ ಮನೆ ಲಕ್ಕಿನಕೊಪ್ಪಕ್ಕೆ ತೆರಳಿದ್ದಳು. ಏಪ್ರಿಲ್ 20ರಂದು ಚಿಕ್ಕಮ್ಮನ ಮಕ್ಕಳು ಕೀಟಲೆ ಕೊಡುತ್ತಿದ್ದ ಕಾರಣ ಪ್ರಣಮ್ಯ ಒಬ್ಬಳೇ ಕೋಣೆಯಲ್ಲಿ ಬಾಗಿಲು ಹಾಕಿಕೊಂಡು ಪಂಚೆ ಬಳಸಿ ಜೋಕಾಲಿ ಮಾಡಿಕೊಂಡು ಆಟವಾಡುತ್ತಿದ್ದಳು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಆಟವಾಡುವ ಸಂದರ್ಭದಲ್ಲಿ ಪಂಚೆಯ ಕುಣಿಕೆ ಕುತ್ತಿಗೆಗೆ ಬಿಗಿದುಕೊಂಡ ಪರಿಣಾಮ ಉಸಿರಾಟಕ್ಕೆ ಅಡಚಣೆ ಉಂಟಾಗಿ ಪ್ರಣಮ್ಯ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿದೆ. ಕುಟುಂಬದವರು ಬಾಗಿಲು ತೆರೆಯುವಷ್ಟರಲ್ಲಿ ಬಾಲಕಿ ಪ್ರಾಣ ಕಳೆದುಕೊಂಡಿದ್ದಳು.

ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆಯ ಸುತ್ತಮುತ್ತಿನ ಪರಿಸ್ಥಿತಿಗಳನ್ನು ಪರಿಶೀಲಿಸುತ್ತಿದ್ದಾರೆ. ಮಕ್ಕಳ ಸುರಕ್ಷತೆ ಕುರಿತು ಹೆಚ್ಚಿನ ಜಾಗೃತಿ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*