LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕೆಂಪೇಗೌಡ ಬೆಂಗಳೂರು ನಿರ್ಮಾತೃ ಮಾತ್ರವಲ್ಲ ದೂರದೃಷ್ಠಿಯ ನಾಯಕ



ವಿಜಯನಗರ(ಹೊಸಪೇಟೆ) ಜುಲೈ.೧6 : ಕೆಂಪೇಗೌಡರು ಕೇವಲ ಬೆಂಗಳೂರಿನ ನಿರ್ಮಾತೃ ಮಾತ್ರವಲ್ಲ, ಉತ್ತಮ ಆಡಳಿತ, ಕೃಷಿ, ನೀರಾವರಿ ಹಾಗೂ ನಗರ ಯೋಜನೆಗೆ ಅಡಿಪಾಯ ಹಾಕಿದ ದೂರದೃಷ್ಟಿಯ ನಾಯಕ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಸಾಗರಗೌಡ ಬಣ್ಣಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಬುಧವಾರ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನಾಡ ಪ್ರಭು ಕೆಂಪೇಗೌಡ ಜಯಂತೋತ್ಸವ ಕಾರ್ಯಕ್ರಮದಲ್ಲಿ ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ಆಡಳಿತದಿಂದ ಬಂದ ತೆರಿಗೆಯನ್ನು ನಾಡು ಕಟ್ಟುವ ಮೂಲಕ ಅಭಿವೃದ್ಧಿಯನ್ನು ಸಾಧಿಸಿದವರು. ಸುಮಾರು ೧೬ನೇ ಶತಮಾನದಲ್ಲಿ ಕೆಂಪೇಗೌಡರು ಬೆಂಗಳೂರನ್ನು ಯೋಜಿತ ನಗರವಾಗಿ ನಿರ್ಮಿಸಿ, ನಗರದ ನಾಲ್ಕು ದಿಕ್ಕುಗಳಲ್ಲಿ ಗೋಪುರಗಳನ್ನು ನಿರ್ಮಿಸಿ ನಗರದ ಗಡಿಯನ್ನು ಗುರುತಿಸಿದರು. ಕೆರೆಗಳು, ದೇವಾಲಯಗಳು, ರಸ್ತೆಗಳು ಹಾಗೂ ಮಾರುಕಟ್ಟೆಗಳ ನಿರ್ಮಾಣಕ್ಕೆ ವಿಶೇಷ ಆದ್ಯತೆ ನೀಡಿದ್ದರು. ಒಕ್ಕಲಿಗ ಸಮುದಾಯದ ಏಳಿಗೆಗೆ ಅಷ್ಟೇ ಸೀಮಿತವಾಗಿರದೇ ಸಮ ಸಮಾಜದ ಕನಸು ಕಂಡ ಧೀಮಂತ ನಾಯಕ ಕೆಂಪೇಗೌಡ. ವಿಜಯನಗರ ಸಾಮ್ರಾಜ್ಯದ ಶ್ರೀ ಕೃಷ್ಣ ದೇವರಾಯನ ಕಾಲದ ಆಡಳಿತದಿಂದ ಪ್ರಭಾವಿತರಾಗಿದ್ದ ಅವರ ಆದರ್ಶಗಳು ಇಂದಿಗೂ ಪ್ರಸ್ತುತ ಎಂದು ಹೇಳಿದರು.
ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, ಬೆಂಗಳೂರು ನಗರ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದ ದೂರದೃಷ್ಠಿಯ ನಾಯಕ ಕೆಂಪೇಗೌಡರು. ಅವರು ಇಂದು ಊಹೆಗೂ ಮೀರಿ ಬೆಳೆಯುತ್ತಿದೆ. ಅವರ ತತ್ವಾದರ್ಶ, ನಾಯಕತ್ವ ಗುಣಗಳನ್ನು ಪ್ರತಿಯೊಬ್ಬರೂ ಮೈಗೂಡಿಸಕೊಂಡು ನಾಡಿನ ಪ್ರಗತಿ ಮತ್ತು ಸಮೃದ್ಧಿಗಾಗಿ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣವರ, ಸಮುದಾಯದ ಮುಖಂಡರಾದ ನಾಗರಾಜ್ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್