LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕೆಂದಾವರೆ ಕಾದಂಬರಿ ಈಗ ಸಿನಿಮಾ 


     ಬರಹಗಾರ, ಸಂಗೀತಗಾರ ಹಾಗೂ ನಟ ಆದಿತ್ಯ ವಿನೋದ್ ಅವರು ಬರೆದ ಪುಸ್ತಕವೀಗ ಸಿನಿಮಾ ರೂಪ ತಾಳುತ್ತಿದೆ. ಕಡಲ ತೀರ ಭಾರ್ಗವ ಸಿನಿಮಾ ನಿರ್ದೇಶಿಸಿದ್ದ ಪನ್ನಗ ಸೋಮಶೇಖರ್ ಕಾದಂಬರಿ ಆಧಾರಿತವಾದ 'ಕೆಂದಾವರೆ' ಪುಸ್ತಕಕ್ಕೆ ಸಿನಿಮಾ ಟಚ್ ಕೊಡಲಿದ್ದಾರೆ.

     ಇತ್ತೀಚೆಗೆ 'ಕೆಂದಾವರೆ' ಪುಸ್ತಕವನ್ನು ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅನಾವರಣ ಮಾಡಿದರು. ನಿರುತ ಪಬ್ಲಿಕೇಷನ್ ಪುಸ್ತಕ ಪ್ರಕಟಿಸಿದೆ. ಆದಿತ್ಯ ವಿನೋದ್ ಅವರು ಬರೆದ ಈ ಪುಸ್ತಕ ಮಕ್ಕಳ ಕಳ್ಳತನದ ಸುತ್ತ ಸಾಗುವ ಕಥೆಯನ್ನು ಒಳಗೊಂಡಿದೆ.

     ಕೆಂದಾವರೆ ಪುಸ್ತಕದ ಟೈಟಲ್ ನ್ನೇ ಸಿನಿಮಾಗೆ ಇಡಲಾಗಿದೆ. ಪನ್ನಗ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಆದಿತ್ಯ ವಿನೋದ್ ನಟಿಸುತ್ತಿದ್ದು, ನಾಯಕಿಯಾಗಿ ದಿಯಾ ಸಾಥ್ ಕೊಡುತ್ತಿದ್ದಾರೆ. ಉಳಿದಂತೆ ಅಕ್ಷತಾ ಶ್ರೀಧರ್ ಶಾಸ್ತ್ರೀ, ಪ್ರಕಾಶ್ ತುಮ್ಮಿನಾಡು, ಶ್ರವಣ್ ಜಗದೀಶ್, ಪುನೀತ್ ಓಂಕಾರ್, ವಿಶ್ವಾಸ್ ಕೃಷ್ಣ ತಾರಾಬಳಗದಲ್ಲಿದ್ದಾರೆ.

     ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುವುದರ ಜೊತೆಗೆ ಆದಿತ್ಯ ವಿನೋದ್ ಸಂಗೀತ ನಿರ್ದೇಶನದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದು, ಅರುಣ್ ಕುಮಾರ್ ಕ್ಯಾಮೆರಾ ವರ್ಕ್ ಇದೆ. ಈಗಾಗಲೇ 50%ರಷ್ಟು ಶೂಟಿಂಗ್ ಮುಕ್ತಾಯಗೊಂಡಿದೆ. ಹುಬ್ಬಳ್ಳಿ, ಧಾರವಾಡ, ಸವದತ್ತಿ, ಸಾಗರ, ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಸಲಾಗುತ್ತಿದೆ. ಮುಂದಿನ ವರ್ಷದ ಆರಂಭದಲ್ಲಿಯೇ 'ಕೆಂದಾವರೆ' ಸಿನಿಮಾ ಪ್ರೇಕ್ಷಕರ ಎದುರು ಬರಲಿದೆ. ಅಪ್ರಮೇಯ ಪ್ರೊಡಕ್ಷನ್ ಬ್ಯಾನರ್ ನಡಿ ಈ ಚಿತ್ರ ತಯಾರಾಗುತ್ತಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ